ಕೋಲಾರ, ಅ.18: ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಕೋಲಾರ ಜಿಲ್ಲೆಯ ಮಾಲೂರು ಠಾಣೆಯ ಸರ್ಕಲ್ ಇನ್ಸಪೆಕ್ಟರ್ ರಾಘವೇಂದ್ರ ಠಾಣೆಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಿನ್ನೆ ರಾತ್ರಿ ರಾಘವೇಂದ್ರ ಅವರು ಠಾಣೆಯ ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿರುವ ರಾಘವೇಂದ್ರ, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದು, ಬಳಿಕ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಗೋಪಿನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ರಾಘವೇಂದ್ರ ಅವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿಧಿ ವಿಜ್ಞಾನ ತಂಡಕ್ಕೆ ಮಾಹಿತಿ ತಿಳಿಸಲಾಗಿದ್ದು, ವರದಿ ಬಂದ ನಂತರವಷ್ಟೇ ನಿಖರ ಮಾಹಿತಿ ತಿಳಿದುಬರಬೇಕಿದೆ ಎಂದಿದ್ದಾರೆ.
ರಾಘವೇಂದ್ರ ಅವರ ಮೇಲೆ ಮರಳು ಮಾಫಿಯಾ ಹಾಗೂ ಮೇಲಧಿಕಾರಿಗಳ ಒತ್ತಡವಿತ್ತು ಎಂಬ ಆರೋಪಗಳು ಕೇಳಿಬಂದಿವೆಯಾದರೂ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ರಾಘವೇಂದ್ರ ಕಳೆದ 2012, 2013, 2014 ರಲ್ಲಿ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸಿದ್ದರು.
2014 ರಲ್ಲಿ ಲೋಕಾಯುಕ್ತ ದಾಳಿಗೆ ಒಳಗಾದ ನಂತರ ಒಂದು ವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆಮನೆ ವಾಸ ಅನುಭವಿಸಿದ್ದರು. ಆನಂತರ ಲೋಕಾಯುಕ್ತ ಪ್ರಕರಣದಿಂದ ಮುಕ್ತರಾದ ಮೇಲೆ ಕೋಲಾರ ಜಿಲ್ಲೆಯ ಮಾಲೂರು ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.
Bengaluru Gets a World-Class Electronics Co-Innovation Hub as Henkel Launches Advanced Application Center
Kalpa Media House | Bengaluru | Henkel today announced the launch of its Customer Application Center in Bengaluru, reinforcing its...
Read moreDetails














