ನವದೆಹಲಿ, ಸೆ.16: ಇಬ್ಬರು ಬಾಲೆಯರ ಮೇಲೆ ಸ್ನೇಹಿತರೆದುರೇ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಬಾಲಕರನ್ನು ಪೊಲೀಸರು ಇಂದು ಬಂಧಿಸಿದ್ದು, ಇದರಲ್ಲಿ ಓರ್ವ ಅಪ್ರಾಪ್ತನೆಂದು ವರದಿಯಾಗಿರುವುದು ಆತಂಕ ಮೂಡಿಸಿದೆ.
ಕಳೆದ ಬುಧವಾರ ಇಲ್ಲಿನ ಮುಂಡ್‌ಕಾ ಮೆಟ್ರೋ ರೈಲು ನಿಲ್ದಾಣದ ಬಳಿ ತಮ್ಮ ಸ್ನೇಹಿತರೊಂದಿಗೆ ತೆರಳುತ್ತಿದ್ದ ಇಬ್ಬರು ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಈ ಪ್ರಕರಣ ಕುರಿತಂತೆ ದೆಹಲಿಯ ಅಮಾನ್ ವಿಹಾರ್ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ನಡೆದು ಸಾಗುತ್ತಿದ್ದ ಯುವತಿಯರನ್ನು ಕಂಡ ನಾಲ್ಕು ಮಂದಿ ದುಷ್ಕರ್ಮಿಗಳು ಕ್ಷುಲಕ ವಿಚಾರವಾಗಿ ಯುವಕರೊಂದಿಗೆ ಗಲಾಟೆ ತೆಗೆದಿದ್ದಾರೆ. ಅಲ್ಲದೆ ನೋಡ ನೋಡುತ್ತಿದ್ದಂತೆಯೇ ಯುವಕರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲೇ ಇದ್ದ ಯುವತಿಯರು ಇದನ್ನು ತಡೆಯಲೆತ್ನಿಸಿದಾಗ ಅವರನ್ನು ಮೆಟ್ರೋ ನಿಲ್ದಾಣದ ನಿರ್ಜನ ಪ್ರದೇಶಕ್ಕೆ ಕರೆತಂದು ಸ್ನೇಹಿತರ ಮುಂದೆಯೇ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯರು ಇಬ್ಬರೂ 17 ಹಾಗೂ 18 ವರ್ಷದವರಾಗಿದ್ದು, ಸಾಮೂಹಿಕ ಅತ್ಯಾಚಾರ ಮಾಡಿದ ನಂತರ ದುಷ್ಕರ್ಮಿಗಳು ಬಾಲಕಿಯರಿಗೆ ಬೆದರಿಕೆ ಹಾಕಿದ್ದಾರೆ. ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಹೆದರಿಸಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತಂತೆ ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಇಬ್ಬರೂ ಬಾಲಕಿಯರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 323 ಹಾಗೂ 376 ಹಾಗೂ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣದ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳಲ್ಲಿ ಓರ್ವ ಅಪ್ರಾಪ್ತನಾಗಿರುವ ಕಾರಣ ಈತನ ವಿರುದ್ಧದ ವಿಚಾರಣೆ ಹೇಗೆ ಎಂಬ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದಿದ್ದಾರೆ.
Haseena Themali Raises Over ₹5 Lakh for Palliative Care at the Tata Mumbai Marathon 2026 in her bid
Kalpa Media House | Bangalore | The bid to support the creation of the first world-class palliative care centre in...
Read moreDetails













