No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Sunday, March 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ದೇಶದ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರಗಳೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 13, 2016
in Army
0
Share on FacebookShare on TwitterShare on WhatsApp
ನೀರು, ಸಕಲ ಜೀವರಾಶಿಗಳಿಗೂ ಅರಿಯುವ ಏಕಮಾತ್ರ ಪದ. ಅದು  ಚಿಗುರುವ ಸಸ್ಯವಾಗಿರಲಿ ಅಥವಾ ಬಲಿತ ಮರವಾಗಿರಲಿ, ಮಾನವನಾಗಿರಲಿ ಅಥವಾ ಪ್ರಾಣಿ ಪಕ್ಷಿಗಳಾಗಿರಲಿ, ಶಾಖಾಹಾರಿ, ಮಾಂಸಾಹಾರಿ ಹೀಗೆ ಭೂಮಿಯ ಪ್ರತಿಯೊಂದು ಜೀವಕ್ಕೂ ಬೇಕಾಗಿರುವ ಜೀವನಾಧಾರ ಈ ನೀರು. ನೀರಿನ ವಿನಾ ಎಲ್ಲವೂ ಅಸ್ತಿರ. ಜೀವನವೇ ದುಸ್ಥರ!  ನವೀಕರಿಸಬಹುದಾದ ಸಂಪನ್ಮೂಲಗಳಲ್ಲೊಂದಾಗಿದ್ದ ಜಲ ಇತ್ತೀಚಿನ ಜಾಗತಿಕ ತಾಪಮಾನ ಏರಿಕೆ, ಕೈಗಾರೀಕರಣ, ಜಲಮಾಲಿನ್ಯಗಳೆಂಬ ವಿವಿಧ ಕಾರಣಗಳಿಂದ ಕ್ಷೀಣಿಸುತ್ತಾ, ನವೀಕರಿಸಲಾಗದ ಸಂಪನ್ಮೂಲಗಳಲ್ಲಿ ಒಂದಾಗುತ್ತಿದೆ. ಭಾರತದಲ್ಲಿ ಅದಾಗಲೇ ಸುಮಾರು ಅರ್ಧದಷ್ಟು ರಾಜ್ಯಗಳು ವಿಪರೀತವಾದ ನೀರಿನ ಅಭಾವವನ್ನು ಎದುರಿಸುತ್ತಿವೆ. ಪ್ರಸ್ತುತ ಕಾಲಮಾನಕ್ಕೆ ಇದು ಒಂದು ಸಮಸ್ಯೆಯಷ್ಟೇ. ಆದರೆ ಇದೆ ಮುಂದುವರೆದರೆ ನಂತರದ ತಲೆಮಾರಿಗೆ ಕಂಟಕಪ್ರಾಯವಾಗುವುದರಲ್ಲಿ ಸಂಶಯವೇ ಇರುವುದಿಲ್ಲ! ಈ ನಿಟ್ಟಿನಲ್ಲಿ ನಮ್ಮ ತಾರ್ಕಿಕ ದೂರದೃಷ್ಟಿತ್ವ ನಮಗೂ ಹಾಗೂ ನಮ್ಮ ನಂತರದವರಿಗೂ ಮಹತ್ತರವಾದ ಪಾತ್ರ ವಹಿಸುತ್ತದೆ.
ಭಾರತ ಕೃಷಿ ಪ್ರಧಾನ ದೇಶ. ಒಟ್ಟು ನೀರಿನಲ್ಲಿ ಶೇ. 70&80 ರಷ್ಟು ನೀರು ಕೃಷಿಗಾಗೇ ಬೇಕಾಗುತ್ತದೆ. ಉಳಿದಂತೆ ಅತಿ ಹೆಚ್ಚಾಗಿ ನೀರನ್ನು ಕುಡಿಯಲು, ಕಾರ್ಖಾನೆಗಳಿಗೆ, ವಿದ್ಯುತ್  ಉತ್ಪಾದನಾ ಘಟಕಗಳು  ಹಾಗು ಇತರೆ ಕ್ಷೇತ್ರಗಳಿಗೆ ಬಳಸಲಾಗುತ್ತದೆ. ದೇಶದಲ್ಲಿ 1997 ರಲ್ಲಿ ಸುಮಾರು 600 CBM  (ಬಿಲಿಯನ್ ಕ್ಯೂಬಿಕ್ ಮೀಟರ್) ನಷ್ಟಿದ್ದ ನೀರಿನ ಬೇಡಿಕೆ 2050 ರ ವೇಳೆಗೆ 1500 CBM,  ಅಂದರೆ ಕೇವಲ ಐದು ದಶಕಗಳಲ್ಲೇ ಅದು ತ್ರಿಗುಣವಾಗುವ ಸನಿಹದಲ್ಲಿದೆ ಎಂದು ಅಂದಾಜಿಸಲಾಗಿದೆ! Source: Central water commission)ಇಲ್ಲಿ ನೋಡಬೇಕಾದ ಗಮನಾರ್ಹ ವಿಷಯವೆಂದರೆ, 1997 ರಲ್ಲಿ ಇದ್ದ ಭಾರತದ ಜನಸಂಖ್ಯೆ ಸುಮಾರು 100 ಕೋಟಿ. 2050 ಕ್ಕೆ ಇದು 160 ಕೋಟಿ ತಲುಪಬಹುದೆಂದು ಅಂದಾಜಿಸಲಾಗಿದೆ. ಇಂದಿನ ಬೇಡಿಕೆಯ ದರದಲ್ಲೇ ಒಂದು ಪಕ್ಷ ನೀರನ್ನು ಪೂರೈಸಲಾದರೆ 2050 ಕ್ಕೆ ಅಗತ್ಯಕ್ಕಿಂತ ಸುಮಾರು 500 ಇಆನಷ್ಟು ನೀರಿನ ಕೊರತೆ ಕಾಡುತ್ತದೆ!
ಇತ್ತ ಕಡೆ ನದಿನೀರಿನ ವಿಚಾರದಲ್ಲೂ ಸಮಸ್ಯೆ ತೀರಾ ಭಿನ್ನವೇನಲ್ಲ. ಒಟ್ಟು ಲಭ್ಯವಿರುವ ನೀರಿನಲ್ಲಿ ಕೇವಲ ಮೂರನೆಯ ಒಂದು ಭಾಗದಷ್ಟು ಮಾತ್ರ ಉಪಯೋಗಿಸಲಾಗುತ್ತದೆ. ಉಳಿದ  ಅಷ್ಟೂ ನೀರು ಸಹ ಪೋಲಾಗಿ ಸಮುದ್ರವನ್ನು ಸೇರುತ್ತಿದೆ. (Source: Central water commission) ಅಲ್ಲದೆ ಅರಣ್ಯನಾಶ ಹಾಗೂ ಅತಿ ಹೆಚ್ಚಿನ ಅಂತರ್ಜಲ ಬಳಕೆಯಿಂದ ಮುಂದಿನ ಕೆಲ ವರ್ಷಗಳಲ್ಲೇ ಅದರ ಮಟ್ಟವೂ ಗಣನೀಯವಾಗಿ ಕ್ಷೀಣಿಸಲಿದೆ ಎಂದು ಅಂದಾಜಿಸಲಾಗಿದೆ. ಒಟ್ಟಿನಲ್ಲಿ ನಗರೀಕರಣ, ಹೆಚ್ಚುತ್ತಿರುವ ಕಾರ್ಖಾನೆಗಳು, ಜನಸಂಖ್ಯಾ ಸ್ಫೋಟ ಹೀಗೆ ಇನ್ನೂ ಹತ್ತು ಹಲವು ಕಾರಣಗಳಿಂದ ನೀರಿನ ಅಭಾವದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತಿದೆ.
ಹಾಗಾದರೆ ಲಭ್ಯತೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮುಂದಿನ ದಿನಗಳಲ್ಲಿ ಬರುವ ನೀರಿನ ಅವಶ್ಯಕತೆಯನ್ನು ನೀಗುವುದಾದರೂ ಹೇಗೆ? ಲಭ್ಯವಿರುವ ನೀರಿನಲ್ಲೇ ಪರಿಸ್ಥಿತಿಯನ್ನು ನಿಭಾಯಿಸುವ ಬಗೆಯಾದರೂ ಎಂತಹದ್ದು? ನದಿ ತಟದಿಂದ ಸಾವಿರಾರು ಮೈಲುಗಳು ದೂರವಿರುವ ಬರಪೀಡಿತ ಸ್ಥಳಗಳಿಗೆ ನೀರಿನ ಸರಬರಾಜಿಗೆ ಇರುವ ಸೂಕ್ತ ಕ್ರಮಗಳು ಯಾವುವು? ಆಣೆಕಟ್ಟು ನಿರ್ಮಾಣ, ಡಿಸಾಲೆನೇಷನ್, ನದಿ ಜೋಡಣೆ? ನದಿ ಜೋಡಣೆಗಾಗಿ ನೀರಿನ ದಿಕ್ಕನ್ನು ಬದಲಿಸುವುದರಿಂದ ನಿಸರ್ಗಕ್ಕೆ, ಜೀವ ಸಂಕುಲಕ್ಕೆ ಆಗುವ ಹಾನಿ ಎಂತಹದ್ದು? ಡಿಸಾಲಿನೇಶನ್ ಅಷ್ಟೊಂದು ಸುಲಭವಾಗಿದ್ದಲ್ಲಿ ಅದನ್ನು ಕಾರ್ಯಗತಗೊಳಿಸಲು ಇರುವ ಅಡೆತಡೆಗಳೇನು? ದೇಶದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಗಳೇನು ಮತ್ತು ಎಂದು? ಹೀಗೆ ಸಾಲು ಸಾಲು ಪ್ರೆಶ್ನೆಗಳು ನಮ್ಮನು ಕಾಡುತ್ತವೆ.
ದೇಶದಲ್ಲಿ ಶೇಕಡಾವಾರು ಮಳೆಯ ಪ್ರಮಾಣ ವರ್ಷಕ್ಕೆ ಸುಮಾರು 1000 ಮಿಲಿಮೀಟರ್‌ನಷ್ಟಿದೆ (Source data.gov  by Government Of India). ಇದು ಕೆಲವೆಡೆ ಹೆಚ್ಚಾಗಿಯೂ ಕೆಲವೆಡೆ ವಿಪರೀತ ಕಡಿಮೆಯೂ ಇರಬಹುದು. ಆದರೆ ನಮ್ಮಲ್ಲಿ ಏನಿಲ್ಲವೆಂದರೂ ಜೂನ್-ಜುಲೈ ನಿಂದ ಹಿಡಿದು  ಸೆಪ್ಟೆಂಬರ್-ಅಕ್ಟೋಬರ್‌ವರೆಗೂ ಮಳೆ ಬರುವುದು ಖಂಡಿತ. ಆದರೆ ಇಲ್ಲೂ ಕೂಡ ಕೆಲವೆಡೆ ತುಸು ಹೆಚ್ಚು ಅಥವಾ ಕೆಲವೆಡೆ ತುಸು ಕಡಿಮೆ. ಬೇಸಿಗೆಯ ಬಿಸಿಲಲ್ಲಿ ಬೆಂದು ಬೆಂಡಾಗುವ ನಮಗೆ ಜೂನ್ ತಿಂಗಳಲ್ಲಿ ಮಳೆಯ ಆಗಮನ ಅದೇನೋ ಒಂದು ಬಗೆಯ ಪುಳಕವನ್ನು ಹುಟ್ಟಿಸುತ್ತದೆ. ಮೊದಲ ಮಳೆಯ ಹನಿಗಳು ಭೂಮಿಯನ್ನು ಸ್ಪರ್ಷಿಸುವುದನ್ನು ಸಡಗರದಿಂದ ನೋಡುತ್ತೇವೆಯೇ ವಿನಾ, ರಾಶಿ ರಾಶಿ ನೀರು ಹರಿದು ಪೋಲಾಗುವುದನ್ನು ಕಂಡು ಮರುಗುವವರು ತುಂಬ ವಿರಳ. ಮಳೆಗಾಲ ಕಳೆದು ಮುಂದಿನ ಬೇಸಿಗೆಗೆ ಆಣೆಕಟ್ಟುಗಳೆಲ್ಲ ಖಾಲಿಯಾಗಿ ನೀರಿನ ಅಭಾವ ಎದುರಾದಾಗ ಮಾತ್ರ ಚಡಪಡಿಸುತ್ತೇವೆ, ಸರ್ಕಾರಕ್ಕೆ ದೂರುತ್ತೇವೆ. ದೊಡ್ಡ ದೊಡ್ಡ ಪೈಪುಗಳಲ್ಲಿ ಹೆಚ್ಚಿನ ಸಾಮರ್ಥ್ಯವಿರುವ ಪಂಪುಗಳಿಂದ ದೂರದ ಸ್ಥಳಗಳಿಂದ ಕಷ್ಟಪಟ್ಟು ದಬ್ಬುತಾ ಬರುವ ನೀರಿಗೆ ಇಷ್ಟೊಂದು ಹಾತೊರೆಯುವ ನಾವುಗಳು ಮಳೆರಾಯ ಮನೆಯ ಬಾಗಿಲಿಗೆ ಬಂದು ಎಥೇಚ್ಛವಾಗಿ ಸುರಿಸುವ ನೀರನ್ನು ಅಷ್ಟೇ ಕಾಳಜಿಯಿಂದ ಸಂರಕ್ಷಿಸದೇ ವ್ಯರ್ಥ ಮಾಡುತ್ತೇವೆ.

ಡಿಸಾಲೆನೇಷನ್

ಇತ್ತೀಚೆಗೆ ಎಲ್ಲೆಲ್ಲೂ ಚರ್ಚೆಯಲ್ಲಿರುವ ವಿಷಯ ಸಮುದ್ರದ ನೀರಿನ ಡಿಸಾಲೆನೇಷನ್. ಅಂದರೆ ಸಮುದ್ರದ ನೀರಿನ ಉಪ್ಪಿನ ಅಂಶವನ್ನು ತೆಗೆದು ಅದನ್ನು ಉಪಯೋಗಿಸಲು ಯೋಗ್ಯವಾದ ನೀರನ್ನಾಗಿ ಮಾಡುವ ಪ್ರಕ್ರಿಯೆ. ‘ಹೌದಲ್ಲ, ಸಮುದ್ರದ ಅಷ್ಟೂ ನೀರನ್ನು ಡಿಸಾಲೆನೇಷನ್ ಮಾಡಿದರೆ ಸಮಸ್ಯೆ ಬಗೆಹರಿದೆ ಹೋಯಿತಲ್ಲ, ಇದರ ಅನುಷ್ಠಾನಕ್ಕೆ ಇನ್ನೂ ಏಕೆ ಮೀನಾ-ಮೇಷ?’ ಎಂದು ಮೂಗಿನ ಮೇಲೆ ಬೆರೆಳಿಟ್ಟುಕೊಂಡರೆ ಅದು ತಪ್ಪೇನಿಲ್ಲ. ನಿಜ, ಡಿಸಾಲಿನೇಶನ್ ಎಂಬುದು ಪ್ರಸ್ತುತ ನೀರಿನ ಸಮಸ್ಯೆಗೆ ಒಂದು ಪರಿಣಾಮಕಾರಿ ಹಾಗೂ ಸರಳ ಪರಿಹಾರ. ಆದರೆ ಅದು ಎಷ್ಟೇ ಸರಳವಾದರೂ ಇಂತಹ ಒಂದು ಘಟಕದ ನಿರ್ಮಾಣಕ್ಕೆ ತಗುಲುವ ವೆಚ್ಚ ಬಲು ಹೆಚ್ಚು. ಕೇವಲ ಹಣದ ವಿಚಾರವಾಗಿದ್ದರೆ ಆಗಬಹುದಿತ್ತೇನೋ. ಆದರೆ, ಇದಕ್ಕೆ ಅಷ್ಟೇ ಪ್ರಮಾಣದಲ್ಲಿ ಇಂಧನ ಅಥವಾ ವಿದ್ಯುತ್ತಿನ ಅವಶ್ಯಕತೆಯೂ ಇದೆ. ಇಷ್ಟೆಲ್ಲಾ ಹೂಡಿಕೆ ಮಾಡಿ ನೀರನ್ನು ಉತ್ಪಾದಿಸಿದರೂ ಕೊನೆಗೆ ಅದಕ್ಕೆ ತಗುಲುವ ವೆಚ್ಚ ಬೇರೆ ವಿಧಾನದಲ್ಲಿ ತಗುಲುವ ವೆಚ್ಚಕ್ಕಿಂತ ಎಷ್ಟೋ ಪಟ್ಟು ಹೆಚ್ಚಿರುತ್ತದೆ. ಹಾಗಾಗಿ ಎಥೇಚ್ಚವಾಗಿ ಹಣ ಹಾಗೂ ಇಂಧನ ಲಭ್ಯವಿರುವ ದೇಶಗಳಲ್ಲೇ ಈ ಪದ್ದತಿ ಹೆಚ್ಚಾಗಿ ಚಾಲ್ತಿಯಲ್ಲಿರುವುದನ್ನು ಕಾಣಬಹುದು. ಆದ ಕಾರಣ ಡಿಸಾಲೆನೇಷನ್ ಘಟಕಗಳು ನಮ್ಮ ದೇಶದಲ್ಲಿ ತೀರಾ ವಿರಳ.

ಅರಣ್ಯೀಕರಣ

ಸಕಲ ಜೀವರಾಶಿಗಳಿಗೂ ಆಶ್ರಯತಾಣವಾಗಿರುವ ಈ ಕಾಡು, ಮಳೆಯ ಆಗಮನಕ್ಕೂ ಹಾಗೂ ಮಳೆನೀರ ಸಂರಕ್ಷಣೆಗೂ ಇರುವ ಏಕ ಮಾತ್ರ ಆಧಾರ. ದ್ಯುತಿ ಸಂಶ್ಲೆಷಣೆಯ ಪ್ರಕ್ರಿಯೆಯಿಂದ ಗಿಡಮರಗಳ ಎಲೆಗಳಿಂದ ಆವಿಯಾಗುವ ನೀರು ಘನೀಕರಣಗೊಂಡು ಮೋಡವಾಗಿ ಪುನಃ ಧರೆಗೆ ಬೀಳುತ್ತದೆ. ಅಲ್ಲದೆ ಹೆಚ್ಚು ಮರಗಳಿದ್ದ ಕಡೆ ಬಿದ್ದ ನೀರು, ನೆಲದೊಳಗೆ ಬಸಿದು ಅಂತರ್ಜಲದ ಮಟ್ಟ ಕೂಡ ಹೆಚ್ಚುತ್ತದೆ. ಪುನಃ ಇದೆ ನೀರು ಎಲೆಗಳವರೆಗೂ ತಲುಪಿ ಪುನಃ ಆವಿಯಾಗಿ ಮೋಡವಾಗಿ ಮಳೆಯಾಗುತ್ತದೆ. ಇದೆ ಮಳೆಯ ಚಕ್ರ.
ಹೆಚ್ಚುತಿರುವ ಅರಣ್ಯನಾಶ ಈ ಪ್ರಕಿಯೆಗೆ ವ್ಯತಿರಿಕ್ತವಾಗಿ ಪರಿಣಮಿಸಿದೆ. ಒಂದೆಡೆ ಮಳೆಯ ಪ್ರಮಾಣ ಕಡಿಮೆಯಾದರೆ ಇನ್ನೊಂದೆಡೆ ಮರಗಿಡಗಳ ಅಭಾವವದಿಂದ ಧರೆಗೆ ಬೀಳುವ ಮಳೆನೀರು ಒಂದೆಡೆ ನಿಲ್ಲದೆ, ಹರಿದು ಸಮುದ್ರವನ್ನು ಸೇರುತ್ತದೆ. ಹೀಗೆ ಅಂತರ್ಜಲದ ಮಟ್ಟವೂ ಕ್ಷೀಣಿಸತೊಡಗುತ್ತದೆ. ಧರೆಗೆ ಉರುಳುವ ಪ್ರತಿಯೊಂದು ಮರವೂ ಮುಂಬರುವ ನೀರಿನ ಅಭಾವಕ್ಕೆ ಸಾಕ್ಷಿಯಾಗುತ್ತದೆ.  ‘ಕಾಡು ಬೆಳೆಸಿ ನಾಡು ಉಳಿಸಿ’ ಎಂಬ ಶಾಲೆಯಲ್ಲಿ ಹೇಳಿಕೊಟ್ಟ ನಾಣ್ಣುಣಿಯನ್ನು ಮರೆತು ಕಾಡು ಕಡಿದು ನಾಡು ಮಾಡುತ್ತೇವೆ. ಆದರೆ, ನಾಡು ಮಾಡಿ ನೀರು ಅರಸುತ್ತೇವೆ! ಕುಟುಂಬಕೊಂಡು ಮನೆಯಂತೆ, ಮನೆಗೊಂದು ಮರವಿರಬೇಕು. ಅರಣ್ಯೀಕರಣ ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ದೇಶದ ನೀರಿನ ಸಮಸ್ಯೆಗೆ ಇದು ಉತ್ತಮ ಪರಿಹಾರವಾಗಬೇಕು.

ಹನಿ ನೀರಾವರಿ ಪದ್ದತಿ

ಮೊದಲೇ ಹೇಳಿದಂತೆ ಭಾರತದ ಒಟ್ಟು ಲಭ್ಯವಿರುವ ನೀರಿನಲ್ಲಿ ಸುಮಾರು ೭೦ ರಿಂದ ೮೦ ರಷ್ಟು ನೀರನ್ನು ಕೃಷಿಗಾಗೇ ಉಪಯೋಗಿಸಲಾಗುತ್ತದೆ. ಇಷ್ಟೊಂದು ಪ್ರಮಾಣದ ನೀರನ್ನು ಉಪಯೋಗಿಸಿಯೂ ಕೃಷಿಯಲ್ಲಿ ನೀರಿನ ಕೊರತೆ ಕಾಡುತ್ತಿರುವುದು ವಿಷಾದನೀಯ. ಹಾಗಾದರೆ ಬಳಸುವ ಅಷ್ಟೂ ನೀರು ಕೃಷಿಗೆ ಸಾಕಾಗದೆ ಹೋಗುತ್ತದೆಯೋ ಅಥವಾ ಇಲ್ಲೂ ಸಹ ಹೆಚ್ಚಿನ ಪ್ರಮಾಣದ ನೀರು ಪೋಲಾಗಿ ಹೋಗುತ್ತದೆಯೋ ಅನ್ನುವುದೇ ಪ್ರಶ್ನೆ. ನಮಗೆ ತಿಳಿದಿರುವಂತೆ ಹನಿ ನೀರಾವರಿ ಪದ್ದತಿ ಕೃಷಿಯಲ್ಲಿ ಕಂಡ ಅದ್ಬುತ ಸುಧಾರಣೆಗಲ್ಲೊಂದು. ಈ ಪದ್ದತಿಯಿಂದ ಮಣ್ಣಿನ ಸವಕಳಿಯನ್ನೂ ತಡೆಗಟ್ಟಬಹುದಲ್ಲದೆ ಸಾಮಾನ್ಯ ನೀರಾವರಿ ಪದ್ಧತಿಗಿಂತ ಹೆಚ್ಚಿನ ಇಳುವರಿ ಸಾಧ್ಯವಿದೆ. ಸಾಂಪ್ರದಾಯಿಕ ಪದ್ದತಿಯ ನೀರಾವರಿಗಿಂತ ಕೇವಲ ಅರ್ಧದಷ್ಟು’ ನೀರಿನಲ್ಲೇ ಉತ್ತಮ ಫಸಲನ್ನು ಬೆಳೆಯಬಹುದಾದ ವಿಧಾನ. ಒಂದು ಪಕ್ಷ ದೇಶದ ಪ್ರತಿಯೊಬ್ಬ ಕೃಷಿಕನೂ  ಹನಿ ನೀರಾವರಿ ಪದ್ದತಿಯನ್ನು ಅಳವಡಿಸಿಕೊಂಡನೆಂದರೆ ಅದೆಷ್ಟು ನೂರು ಬಿಲಿಯನ್ ಕ್ಯೂಬಿಕ್ ಮೀಟರ್‌ನಷ್ಟು ನೀರನ್ನು ಉಳಿಸಬಹುದು ಎಂಬುದನ್ನು ಯೋಚಿಸಿ ನೋಡಿ. ಇಂತಹ ಸರಳ ಬಹುಪಯೋಗಿ ನೀರಾವರಿ ವಿಧಾನವನ್ನೂ ಅಳವಡಿಸಿಕೊಳ್ಳಲು ಹಿಂದೇಟು ಏಕೆ? ಈ ನಿಟ್ಟಿನಲ್ಲಿ ನಮ್ಮ ರೈತರು ಜಾಗೃತರಾಗಿ ಇಂತಹ ಪರಿಣಾಮಕಾರಿ ಪದ್ದತಿಯನ್ನು ಅಳವಡಿಕೊಳ್ಳುವುದು ಅವಶ್ಯಕವಾಗಿದೆ.

ನದಿ ಜೋಡಣೆ ಹಾಗೂ ಅಣೆಕಟ್ಟು ನಿರ್ಮಾಣ

ನದಿ ಜೋಡಣೆ ಹಾಗೂ ಆಣೆಕಟ್ಟು ನಿರ್ಮಾಣ. ನಮ್ಮ ಉತ್ತರ ಭಾರತದಲ್ಲಿ ಪ್ರತಿವರ್ಷ ಅತಿವೃಷ್ಟಿಯಿಂದ ಸಂಭವಿಸುವ ಸಾವು-ನೋವು, ಬೆಳೆ ಹಾನಿ ತುಂಬ ಸಾಮನ್ಯ. ಅಲ್ಲದೆ ಅದಷ್ಟೂ ನೀರು ಉಪಯೋಗಿಸಲಾಗದೆ ಪೋಲಾಗುತ್ತಾ ಸಮುದ್ರವನ್ನು ಸೇರುತ್ತದೆ. ಉತ್ತರದಲ್ಲಿ ಅತಿವೃಷ್ಟಿಯಾದರೆ ದಕ್ಷಿಣದಲ್ಲಿ ಅನಾವೃಷ್ಟಿ! ಇದೆ ಅಂಶಗಳನಿಟ್ಟುಕೊಂಡು ಕೆಲವರ್ಷಗಳ ಹಿಂದೆ ಗಂಗಾ ಕಾವೇರಿ ನದಿ ಜೋಡಣೆ ಎಂಬ ಮಹತ್ತರವಾದ ಯೋಜನೆಯೊಂದನ್ನು ಕೈಗೆತ್ತಿಕೊಳ್ಳಗಾಗಿತ್ತು.
ಉತ್ತರ ಭಾರತದ ನದಿಗಳನ್ನು ದಕ್ಷಿಣ ಭಾರತದ ನದಿಗಳೊಟ್ಟಿಗೆ ಸೇರಿಸಿ ದಕ್ಷಿಣದ ನೀರಿನ ಅಭಾವಕ್ಕೆ ಒಂದು ಸೂಕ್ತ ಪರಿಹಾರವನ್ನು ಕೊಡುವುದಲ್ಲದೆ ಜೋಡಣೆಯ ಹಾದಿಯ ಸೂಕ್ತ ಸ್ಥಳಗಳಲ್ಲಿ ಅಣೆಕಟ್ಟು ನಿರ್ಮಿಸುವ ಉದ್ದೇಶವೂ ಈ ಯೋಜನೆಯದಾಗಿತ್ತು. ಹೀಗೆ ಆಣೆಕಟ್ಟು ನಿರ್ಮಿಸಿ ನೀರನ್ನು ಶೇಖರಿಸಿ ವ್ಯವಸಾಯ  ಹಾಗೂ ಕುಡಿಯುವ ನೀರಿಗೆ ಒಂದು ಶಾಶ್ವತ ಪರಿಹಾರವನ್ನು ಒದಗಿಸುವುದಲ್ಲದೇ ಸಾಕಷ್ಟು ವಿದ್ಯುತ್ ಉತ್ಪಾದನೆಯೂ ಸಹ ಇದರಿಂದ ಸಾಧ್ಯವಿತ್ತು. ಇಂದು ನಾವು ಕಾಣುವ ಕಾವೇರಿ, ಮಹದಾಯಿ, ಕೃಷ್ಣಾ ಹಾಗೂ ಇನ್ನು ಹಲವು ಜಲವಿವಾದಗಳಿಗೆ ಈ ಯೋಜನೆ ಪರಿಹಾರವಾಗುತ್ತಿತ್ತು. ಆದರೆ ಅರ್ಥವಿಲ್ಲದ ಪೊಳ್ಳುವಾದ ಹಾಗೂ ಇದರ ನಿಜವಾದ ಸದುದ್ದೇಶವನ್ನು ರಾಜ್ಯಸರ್ಕಾರಗಳಿಗೆ ಮನವರಿಕೆ ಮಾಡಿಕೊಡದ ಕೇಂದ್ರ ಸರ್ಕಾರಗಳು ಆರ್ಥಿಕ ಬಿಕ್ಕಟ್ಟು, ಪರಿಸರನಾಶವೆಂಬ ಸಬೂಬುಗಳನ್ನು ಕೊಟ್ಟು ಈ ಯೋಜನೆಯ ಅನುಷ್ಠಾನವನ್ನು ಮರೀಚಿಕೆಯಾಗಿಸಿದವು. ಇಂದು ಇದೆ ಬಗೆಯ ಹಲವು ನದಿ ಜೋಡಣೆ ಯೋಜನೆಗಳು ಯಶಸ್ವಿಯಾಗಿ ನಿರ್ಮಾಣಗೊಂಡು ಸಾಕಷ್ಟು ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸಿವೆ. ಹಾಗಾಗಿ ನಮ್ಮ ಸರ್ಕಾರಗಳು ಇಂಥಹ ಬಹುಪಯೋಗಿ  ಯೋಜನೆಗಳ ಬಗ್ಗೆ ತಾರ್ಕಿಕವಾದ ಗಮನ ಹರಿಸುವುದು ಹೆಚ್ಚು ಸೂಕ್ತ.

ಮಳೆ ನೀರಿನ ಸಂಗ್ರಹ ಹಾಗೂ ಅಂತರ್ಜಲ ವೃದ್ಧಿ

ಒಂದು ಮನೆ. ಅದರ ಛಾವಣಿಯ ವಿಸ್ತೀರ್ಣ 500 ಚದರ ಮಿರ್ಟ ಎಂದಿಟ್ಟುಕೊಳ್ಳೋಣ. ಆ ಮನೆಯಿರುವ ಊರಿನಲ್ಲಿ ಮಳೆಗಾಲದಲ್ಲಿ ಆಗುವ ಮಳೆಯ ಪ್ರಮಾಣ ೮೦೦ ಞಞ. ಚಾವಡಿಯ ಮೇಲೆ ಸುರಿಯುವ ಅಷ್ಟೂ ಮಳೆಯ ನೀರನ್ನು ಸಂಗ್ರಹಿಸಿದರೆ (1  mm of rain = 1 liter of water) ಆಗುವ ನೀರಿನ ಪ್ರಮಾಣ 350000 ಲೀಟರ್! ಛಾವಣಿಯಿಂದ ಬೀಳುವ ನೀರನ್ನು ಇದ್ದಿಲು ಹಾಗು ಮರಳಿನ ಮುಖಾಂತರ ಹಾಯಿಸಿದಾಗ ಭಾಗಶಃ ನೀರು ಶುದ್ಧಿಯಾಗುತ್ತದೆ. ಪರೀಕ್ಷೆಯ ವಿನಾ ಕುಡಿಯಲು ಅಷ್ಟೊಂದು ಯೋಗ್ಯವಲ್ಲದಿದ್ದರೂ ಮನೆಯ ಇತರ ಕೆಲಸಗಳಿಗೆ ಹೀಗೆ ಸಂಗ್ರಹಿಸಿಟ್ಟ ನೀರನ್ನು ಉಪಯೋಗಿಸಬಹುದು. ಒಂದು ಕುಟುಂಬದ ದೈನಂದಿಂದ ಬಳಕೆ 1000 ಲೀಟರ್ ಆದರೂ (350000/1000 ಉತ್ತಮ ಮಳೆಯಾಗುವ ಪ್ರದೇಶದಲ್ಲಿ ಮಳೆನೀರಿನಲ್ಲೇ ವರ್ಷಪೂರ್ತಿ ಜೀವನ ಸಾಗಿಸಬಹುದೆಂಬ ಸಾಧ್ಯತೆಯ ಮಾತು ಸುಳ್ಳಲ್ಲ!!
ಕೊನೆಯ ಮಾತು
ಇಪ್ಪತ್ತೊಂದನೇ ಶತಮಾನದಲ್ಲಿರುವ ನಾವು, ನಮ್ಮ ಬೊಗಸೆಯ ನೀರನ್ನು ಕಾಪಾಡಿಕೊಳ್ಳುವಷ್ಟಾದರೂ ವೈಜ್ಞಾನಿಕರಾಗಬೇಕು. ಪ್ರಸ್ತುತ ಜಾಗತಿಕ ಮಟ್ಟದ ಹವಾಮಾನವನ್ನು ಅರಿತು ನೀರನ್ನು ಇತಿಮಿತಿಯಲ್ಲಿ ವ್ಯಯಿಸಬೇಕು. ಆ ಮನೋಭಾವನೆ ನಮ್ಮಲ್ಲಿ ಮೂಢಬೇಕು ಹಾಗೂ ಮೂಢಿಸಬೇಕು. ಅತಿವೃಷ್ಟಿಯ ಜಾಗಗಳಲ್ಲಿನ ನೀರನ್ನು ಬರಪೀಡಿತ ಪ್ರದೇಶಗಳಿಗೆ ಸಾಗಿಸುವ ‘ವೈಜ್ಞಾನಿಕ’ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕು. ಅರಣ್ಯೀಕರಣ ಪ್ರತಿ ಕುಟುಂಬದ ಮನೆಮಾತಾಗಬೇಕು. ತುಂಬ ಸರಳ ಹಾಗೂ ಅಷ್ಟೇ ಪರಿಣಾಮಕಾರಿಯಾದ ನೀರಾವರಿ ಪದ್ದತಿಗಳನ್ನು ರೈತರು ಅರಿತು ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಾರದರ್ಶಕ ಚರ್ಚೆಯಾಗಬೇಕು. ಇಲ್ಲವೆಂದರೆ ಮುಂದೊಂದು ದಿನ ಅದೆಷ್ಟೇ ಹಣ ಸುರಿದರೂ, ಬಡಿದಾಡಿಕೊಂಡರೂ ಸಹ ಒಂದು ತೊಟ್ಟು ನೀರು ಉತ್ಪತಿಯಾಗದಿರಬಹುದು. ಈ ನಿಟ್ಟಿನಲ್ಲಿ ನಮ್ಮ ನಾಯಕರ, ರೈತರ, ಹೆಚ್ಚಾಗಿ ನಮ್ಮ ನಿಮ್ಮೆಲ್ಲರ ಚಿಂತನೆ ತುಂಬಾ ಮಹತ್ವವಾದುದು.
ಲೇಖಕರು: ಸುರ್ಜಿತ್ ಕುಮಾರ್
Share196Tweet123Send
Previous Post

ಜೆಎನ್‌ಯುನಲ್ಲಿ ರಾವಣನ ಬದಲು ಮೋದಿ ಪ್ರತಿಕೃತಿ ದಹನ

Next Post

ಮೂರನೆಯ ಮಹಾಯುದ್ಧಕ್ಕೆ ರಷ್ಯಾ ಸಿದ್ಧತೆ?: ತನ್ನ ಪ್ರಜೆಗಳಿಗೆ ಸ್ವದೇಶಕ್ಕೆ ಮರಳುವಂತೆ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೂರನೆಯ ಮಹಾಯುದ್ಧಕ್ಕೆ ರಷ್ಯಾ ಸಿದ್ಧತೆ?: ತನ್ನ ಪ್ರಜೆಗಳಿಗೆ ಸ್ವದೇಶಕ್ಕೆ ಮರಳುವಂತೆ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
A Memorable Violin Concert By Nadavallabha Vid VV Ravi

A Memorable Violin Concert By Nadavallabha Vid VV Ravi

March 29, 2026
ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

March 29, 2026
ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

March 29, 2026
ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

March 29, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL