ವೇಳೆ ಭಾರತೀಯ ಸೇನೆಯ ಕೆಲ ನಿರ್ಧಿಷ್ಟ ಸೈನಿಕರು ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಾಕ್ ಅಕ್ರಮಿತ ಕಾಶ್ಮೀರದ ಸುಮಾರು ೩ ಕಿಮೀ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದೆ ಎಂದು ತಿಳಿದುಬಂದಿದೆ. ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಗಡಿ ನಿಯಂತ್ರಣ ರೇಖೆ ಬಳಿಯ ಕೇಲ್ ಮತ್ತು ಭೀಮ್ ಬರ್ ಪ್ರದೇಶದಲ್ಲಿ ಸೀಮಿತ ದಾಳಿ ನಡೆಸಿದೆ. ಈ ವೇಳೆ ಸುಮಾರು ೬ ಉಗ್ರ ಕ್ಯಾಂಪ್‌ಗಳ ಮೇಲೆ ದಾಳಿ ಮಾಡಲಾಗಿದ್ದು, ಕ್ಯಾಂಪ್ ಸಂಪೂರ್ಣ ಧ್ವಂಸಗೊಂಡಿದೆ. ಉಗ್ರರು ಅಲ್ಲಿ ಮಾಡಿಕೊಂಡಿದ್ದ ಸಂಪೂರ್ಣ ಮೂಲಸೌಕರ್ಯಗಳು ಕೂಡ ಧ್ವಂಸವಾಗಿದೆ ಎಂದು ಹೇಳಲಾಗುತ್ತಿದೆ.
ಉರಿ ಸೆಕ್ಟರ್ ಮೇಲೆ ದಾಳಿ ನಡೆದ ನಂತರ ಗಡಿ ಭಾಗದಲ್ಲಿ ಶತ್ರುಗಳ ಉಪಟಳವನ್ನು ಗಂಭೀರವಾಗಿ ಪರಿಗಣಿಸಿದ ಮೋದಿ ಸರ್ಕಾರ ಕಠಿಣ ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ ಎಂದು ಹೇಳಲಾಗಿದ್ದು, ಇದರ ಪ್ರತಿಫಲವೇ ನಿನ್ನೆ ರಾತ್ರಿ ನಡೆದ ದಾಳಿ ಎಂದು ಹೇಳಲಾಗುತ್ತಿದೆ.
ಧೋವಲ್ ನಿರ್ದೇಶನದ ಮೇರೆಗೆ ಗಡಿ ನಿಯಂತ್ರಣ ರೇಖೆಯಲ್ಲಿರುವ ಉಗ್ರರ ಕ್ಯಾಂಪ್‌ಗಳನ್ನು ಮಾತ್ರ ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಮಾತನಾಡಿದ್ದ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಅಪ್ರಚೋದಿತ ದಾಳಿಗಳಾದರೆ ಅದಕ್ಕೆ ಸಂಪೂರ್ಣ ಬಲದೊಂದಿಗೆ ಉತ್ತರ ನೀಡಿ ಎಂದು ಸೈನಿಕರಿಗೆ ಹೇಳಿದ್ದರು. ಇದರ ಬೆನ್ನಲ್ಲೇ ಕಳೆದ ರಾತ್ರಿ ಪಾಕಿಸ್ಥಾನಿ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿತ್ತು.
ಇಂದು ಪತ್ರಿಕಾಗೋಷ್ಠಿ ನಡೆಸಿದ ಸೇನಾ ಮುಖ್ಯಸ್ಥ ರಣಭೀರ್ ಸಿಂಗ್, ಉಗ್ರರ ನೆಲೆಗಳಿಗೆ ಸಾಕಷ್ಟು ಹಾನಿ ಮಾಡಿರುವುದನ್ನು ತಿಳಿಸಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ಭಾಗದ ಭಿಂಬರ್, ಹಾಟ್ ಸ್ಪ್ರಿಂಗ್, ಕೇಲ್ ಮತ್ತು ಲಿಪಾ ಸೆಕ್ಟರ್‌ಗಳಲ್ಲಿನ ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ದಾಳಿ ನಡೆಸಿದ ಪಾಕಿಸ್ಥಾನಕ್ಕೆ ಭಾರತೀಯ ಸೈನಿಕರು ತಿರುಗೇಟು ನೀಡಿದ್ದಾರೆ. ಆರು ಗಂಟೆ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪಾಕ್ ಯೋಧರು ಹತರಾಗಿದ್ದಾರೆ ಎಂದು ವರದಿಯಾಗಿದೆ.
Discussion about this post