Read - < 1 minute
ಬೆಂಗಳೂರು, ಅ.18: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ರೈತರಿಗೆ ತಲುಪುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ ನೀಡಿದರು.
ವಿಧಾನಸೌಧದಲ್ಲಿ ಇಂದು ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಮೊದಲಿಗೆ ತೋಟಗಾರಿಕೆ ಇಲಾಖೆ ಪ್ರಗತಿ ಪರಿಶೀಲನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಪ್ರಸ್ತಾಪಿಸಿದಂತೆ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ರೈತರಿಗೆ ತಲುಪುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಹೇಳಿದರು.
ರೈತರಿಗೆ ಸರ್ಕಾರದಿಂದ ನೀಡಲಾಗಿರುವ ವಿವಿಧ ಸೌಲಭ್ಯಗಳು ಮತ್ತು ಸವಲತ್ತುಗಳು ಕಾಲಕಾಲಕ್ಕೆ ರೈತರಿಗೆ ತಲುಪಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ರೈತರಿಗಾಗಿ ರೂಪಿಸಿರುವ ಯೋಜನೆಗಳು ಅವರಿಗೆ ಪ್ರಾಮಾಣಿಕವಾಗಿ ತಲುಪಬೇಕು, ಅಧಿಕಾರಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ರೈತರ ನೆರವಿಗೆ ಧಾವಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ಸಭೆಯಲ್ಲಿ ರೇಷ್ಮೆ ಮತ್ತು ಪಶುಸಂಗೋಪನೆ ಸಚಿವ ಎ.ಮಂಜು, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸೇರಿದಂತೆ ಇಲಾಖೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.
Discussion about this post