No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಿಬಿಎಂಪಿಗೆ ಯಾರು ಕಿಂಗ್ ಮೇಕರ್?

kalpa News by kalpa News
August 31, 2016
in ಬೆಂಗಳೂರು ನಗರ
0
Share on FacebookShare on TwitterShare on WhatsApp
ಬೆಂಗಳೂರು, ಆ.31: ಈ ಬಾರಿ ಬಿಬಿಎಂಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಯಾರು ಕಿಂಗ್ಮೇಕರ್ ಆಗಲಿದ್ದಾರೆ ಎಂಬುದು ಕುತೂಹಲಕಾರಿ ವಿಷಯವಾಗಿದೆ. ಕಳೆದ ಬಾರಿ ಸೋತು ಗೆದ್ದಿದ್ದ ಕಾಂಗ್ರೆಸ್ ಪಕ್ಷವನ್ನು  ಜೆಡಿಎಸ್ ಮೈತ್ರಿಯೊಂದಿಗೆ ಅಧಿಕಾರ ಗದ್ದುಗೆಗೆ ಏರಿಸಲು ಕಾರಣಕರ್ತರಾಗಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜ್ ಅವರು ಇಂದು ರಾತ್ರಿ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಅಮೆರಿಕಾಕ್ಕೆ ತೆರಳಿದ್ದಾರೆ.
ಮೇಯರ್ ಚುನಾವಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿಲ್ಲ. ಜೆಡಿಎಸ್ ಪಕ್ಷದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಸಾಧಿಸಲು ಮಹತ್ವದ ಪಾತ್ರ ವಹಿಸಿದ್ದ ಮೂವರು ಶಾಸಕರಾದ ಕೆ. ಗೋಪಾಲಯ್ಯ, ಅಖಂಡ ಶ್ರೀನಿವಾಸ್,  ಜಮೀರ್ ಅಹಮದ್ ಅವರು ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಪರಿಣಾಮ ಪಕ್ಷದಿಂದ ಅಮಾನತುಗೊಂಡಿದ್ದಾರೆ.
ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಯಾರು ಕಿಂಗ್ಮೇಕರ್ ಆಗಲಿದ್ದಾರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆಯಲಿದೆಯೇ, ಮುಂದುವರೆದರೆ ಅದರ ನೇತೃತ್ವ ಯಾರು ವಹಿಸಲಿದ್ದಾರೆ, ಜೆಡಿಎಸ್ ಬಿಜೆಪಿ ಜೊತೆ ಕೈ ಜೋಡಿಸಲಿದೆಯೇ, ಈ ಮೈತ್ರಿಯ ರೂವಾರಿ ಯಾರಾಗಲಿದ್ದಾರೆ ಎಂಬುದು ಪಾಲಿಕೆ ಆವರಣದಲ್ಲಿ ಬಹುಚರ್ಚಿತ ವಿಷಯವಾಗಿವೆ.
ಕಳೆದ ಬಾರಿ ಅತಿ ಹೆಚ್ಚು ಸ್ಥಾನ ಗಳಿಸಿದ್ದರೂ ಬಿಜೆಪಿ ಅಧಿಕಾರ ಗದ್ದುಗೆ ಹಿಡಿಯಲು ಸಾಧ್ಯವಾಗಿರಲಿಲ್ಲ. ಕಾಂಗ್ರೆಸ್ನ ಮೂವರು ಶಾಸಕರಾದ ಎಸ್.ಟಿ.ಸೋಮಶೇಖರ್, ಮುನಿರತ್ನ, ಭೆರತಿ ಬಸವರಾಜ್ ಅವರು ಜೆಡಿಎಸ್ನೊಂದಿಗೆ ಮೈತ್ರಿ ಒಪ್ಪಂದವಾದ ಕೂಡಲೇ ಜೆಡಿಎಸ್ನ ಮೂವರು ಶಾಸಕರು ಹಾಗೂ ಎಲ್ಲಾ ಪಾಲಿಕೆ ಸದಸ್ಯರೊಂದಿಗೆ ರೆಸಾರ್ಟ್ ಯಾತ್ರೆಗೆ ತೆರಳಿದ್ದರು.
ಸದ್ಯ ಈಗ ಅವರ್ಯಾರೂ ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಜೆಡಿಎಸ್ನ ಶಾಸಕರೂ ಮಂಡೆ ಬಿಸಿ ಮಾಡಿಕೊಳ್ಳುವ ಪರಿಸ್ಥಿತಿಯಲ್ಲಿ ಇಲ್ಲ. ಅವರ ಕಟ್ಟಾ ಬೆಂಬಲಿಗರಾದ ಜೆಡಿಎಸ್ ಬಿಬಿಎಂಪಿ ಸದಸ್ಯರು ನಾವು ಶಾಸಕರ ಪರವಾಗಿದ್ದೇವೆ. ಆದರೆ ಪಕ್ಷದ ಆದೇಶವನ್ನು ಧಿಕ್ಕರಿಸುವುದಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ.
ರಾಜ್ಯಸಭಾ ಚುನಾವಣಾ ಸಂದರ್ಭದಲ್ಲಿ ಅಡ್ಡಮತದಾನ ಪರಿಣಾಮ ಅಮಾನತುಗೊಂಡಿರುವವರು ಇಲ್ಲಿ ಪಕ್ಷ ಏನಾದರೂ ವಿಪ್ ಕೊಟ್ಟರೆ ವಿಪ್ ಉಲ್ಲಂಘಿಸುವಂತಿಲ್ಲ. ವಿಪ್ ಉಲ್ಲಂಘಿಸಿದರೆ ಶಾಸಕ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ.
ಈ ಎಲ್ಲದರ ನಡುವೆ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲು ತನ್ನೆಲ್ಲಾ ಪ್ರಯತ್ನಗಳನ್ನು ಮುಂದುವರೆಸಿದೆ. ಕಳೆದ ಮೂರು ತಿಂಗಳಿನಿಂದಲೇ ತೆರೆಮರೆಯ ಕಸರತ್ತುಗಳನ್ನು ಪ್ರಾರಂಭಿಸಿದೆ. ಕಳೆದ ಬಾರಿ ನೂರು ಸ್ಥಾನಗಳನ್ನು ಗಳಿಸಿ ಕೂದಲೆಳೆಯ ಅಂತರದಲ್ಲಿ ಅಧಿಕಾರ ಕಳೆದುಕೊಂಡು ಮುಖಭಂಗಕ್ಕೀಡಾಗಿದ್ದ ಮಾಜಿ ಸಚಿವ, ಬಿಜೆಪಿ ಮುಖಂಡ ಆರ್.ಅಶೋಕ್ ಅವರು ಈ ಬಾರಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ.
ಈ ಬಾರಿ ಬೆಂಗಳೂರು ಬಿಜೆಪಿ ಸಾಮ್ರಾಜ್ಯಕ್ಕೆ ಸಾಮ್ರಾಟನಾಗಲೇಬೇಕೆಂದು  ಪಣತೊಟ್ಟು ತಮ್ಮ ಪ್ರಯತ್ನವನ್ನು ಮುಂದುವರೆಸಿದ್ದಾರೆ. ಇವರ ಈ ಪ್ರಯತ್ನಕ್ಕೆ ಕೇಂದ್ರ ಸಚಿವರು, ನಗರ ಶಾಸಕರು, ಬಹುತೇಕ ಎಲ್ಲಾ ಬಿಜೆಪಿ ಮುಖಂಡರು ಕೈ ಜೋಡಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರು ಅನಿವಾರ್ಯವಾಗಿ ಇವರಿಗೆ ಸಹಕರಿಸಬೇಕಾಗಿದೆ.
ನಗರದ ಶಾಸಕರಾದ ಅರವಿಂದ ಲಿಂಬಾವಳಿ, ವಿಜಯ್ ಕುಮಾರ್ ಅವರನ್ನು ಹೊರತುಪಡಿಸಿದರೆ ಎಲ್ಲರೂ ಬಿಬಿಎಂಪಿಯಲ್ಲಿ ಅಧಿಕಾರ ಗದ್ದುಗೆ ಯನ್ನು ಬಿಜೆಪಿ ಹಿಡಿಯುವುದು ಸೂಕ್ತ ಎಂಬ ನಿರ್ಣಯಕ್ಕೆ ಬಂದು ಅಶೋಕ್ ರವರ ಪ್ರಯತ್ನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಎಲ್ಲರೂ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು, ಸಂಸದರು, ರಾಜ್ಯಸಭಾ ಸದಸ್ಯರು ಹಸಿರು ನಿಶಾನೆ ತೋರಿರುವುದರಿಂದ  ಯಡಿಯೂರಪ್ಪನವರೂ ಕೂಡ ಬೆಂಬಲ ವ್ಯಕ್ತಪಡಿಸಲಿದ್ದಾರೆ. ಹಾಗಾಗಿ ಈ ಬಾರಿ ಬಿಜೆಪಿ ಬಿಬಿಎಂಪಿ ಗದ್ದುಗೆ ಹಿಡಿಯುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.
ಲೆಕ್ಕಾಚಾರದ ಪ್ರಕಾರ ಮ್ಯಾಜಿಕ್ ಸಂಖ್ಯೆ 130 ಇರಬೇಕು. ಬಿಜೆಪಿ ಬಿಬಿಎಂಪಿ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು ಸೇರಿದಂತೆ  122 ಸದಸ್ಯ ಬಲ ಹೊಂದಿದೆ. ಎಂಟು ಮತಗಳ ಕೊರತೆ ಬರುತ್ತದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರು ಬಿಜೆಪಿ ಜೊತೆ ಕೈ ಜೋಡಿಸಲು ಒಲವು ತೋರಿದ್ದಾರೆ ಎನ್ನಲಾಗಿದ್ದು, ಅದು ಖಚಿತವಾದರೆ ಬಿಜೆಪಿ, ಜೆಡಿಎಸ್ ಮೈತ್ರಿ ಆಡಳಿತ ಬಿಬಿಎಂಪಿಯಲ್ಲಿ ಬರುವುದು ಸುಲಭವಾಗುತ್ತದೆ. ಇದೂ ಕೈ ತಪ್ಪಿದರೆ ಬಿಜೆಪಿ ಈಗಾಗಲೇ ಕಾಂಗ್ರೆಸ್ ಹೆಣೆದಿರುವ ರಣತಂತ್ರಕ್ಕೆ ಪ್ರತಿತಂತ್ರ ಹೂಡಿದೆ.
ತಮ್ಮ ಮತಗಳನ್ನು ಹೆಚ್ಚಿಸಿಕೊಳ್ಳಲು ವೆಂಕಯ್ಯನಾಯ್ಡು, ಬಿಜೆಪಿ ಬಗ್ಗೆ ಒಲವಿರುವ ಅಪ್ಪಾಜಿಗೌಡ, ಸಿ.ಆರ್. ಮನೋಹರ್ ಅವರ ವಿಳಾಸಗಳನ್ನು ಮೂರು ತಿಂಗಳ ಹಿಂದೆಯೇ ಬೆಂಗಳೂರು ನಗರಕ್ಕೆ ಬದಲಾಯಿಸಿದೆ ಎಂದು ತಿಳಿದುಬಂದಿದೆ.
ಒಟ್ಟಾರೆ ಬಿಜೆಪಿ ಅಧಿಕಾರಕ್ಕೆ ಹತ್ತಿರವಾಗಿದೆ. ಆದರೆ ಅಧಿಕಾರದ ಗದ್ದುಗೆಗೆ ಏರಲು ಏಣಿ ಆಟದಲ್ಲಿ ಕಿಂಗ್ ಮೇಕರ್ ಯಾರಾಗುತ್ತಾರೆ ಎಂಬುದೇ ಈಗ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಲ್ಲಿ ಉದ್ಭವಿಸಿರುವ ಕುತೂಹಲಕಾರಿ  ಪ್ರಶ್ನೆಯಾಗಿದೆ.
ಕಳೆದ ಬಾರಿ ಕಿಂಗ್ಮೇಕರ್ ಆಗಿದ್ದವರು ಈಗ ಹಿಂದೆ ಸರಿದಿದ್ದಾರೆ. ಈಗ ಕಾಂಗ್ರೆಸ್-ಜೆಡಿಎಸ್ ನಲ್ಲಿ ಹೊಸಬರು ಬರುತ್ತಾರೆಯೇ ಕಾದು ನೋಡಬೇಕು.
ನಿನ್ನೆ ನಡೆದ ಬೆಳವಣಿಗೆಯಲ್ಲಿ ಅಕ್ಕ ಸಮ್ಮೇಳನಕ್ಕೆ ಹೊರಟ ತ್ರಿಮೂರ್ತಿ ಶಾಸಕರು, ಬಿಬಿಎಂಪಿ ಕಾಂಗ್ರೆಸ್ ಸದಸ್ಯರು, ಬಂಡಾಯ ಜೆಡಿಎಸ್ ಶಾಸಕರು ಹಾಗೂ ಜೆಡಿಎಸ್ ಸದಸ್ಯರೊಂದಿಗೆ ರಹಸ್ಯ ಮಾತುಕತೆ ನಡೆಸಿರುವುದು ತಿಳಿದುಬಂದಿದ್ದು, ಅಕಸ್ಮಾತ್ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಏರ್ಪಡುವ ಸಾಧ್ಯತೆ ಕಂಡುಬಂದರೆ ಕೊನೆ ಗಳಿಗೆಯಲ್ಲಿ ತಮ್ಮ ಅಕ್ಕ ಪ್ರವಾಸವನ್ನು ರದ್ದುಗೊಳಿಸುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.
ಈ ನಡುವೆ ಸಚಿವ ರಾಮಲಿಂಗಾರೆಡ್ಡಿ, ಮೇಯರ್ ಮಂಜುನಾಥರೆಡ್ಡಿ, ಪಾಲಿಕೆ ಸದಸ್ಯೆ ಜಿ. ಪದ್ಮಾವತಿ ಅವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮೈತ್ರಿ ಮುಂದುವರೆಯುವ ಮಾತನಾಡಿದ್ದಾರೆ. ಈ ನಡುವೆ ಬಿಜೆಪಿ ಮಾತ್ರ ಭಾರೀ ಪ್ರಯತ್ನವನ್ನು ನಡೆಸಿರುವುದು ಸತ್ಯ.
ಸೆಪ್ಟೆಂಬರ್ 19 ರಂದು ನಡೆಯಲಿರುವ ಚುನಾವಣೆಯಲ್ಲಿ ಯಾವ ಪಕ್ಷ, ಯಾರ ಮೈತ್ರಿಯೊಂದಿಗೆ ಅಧಿಕಾರ ಹಿಡಿಯಲಿದೆ ಎಂಬುದನ್ನು ಕಾದುನೋಡಬೇಕು.
ಪಾಲಿಕೆಯಲ್ಲಿ ಸೀಟ್ ಸಮಸ್ಯೆ!
ಇರೋದು 274 ಸೀಟು, ಬರೋರು 286, ಉಳಿದ ಹನ್ನೆರಡು ಜನ ಕೂರೋದೆಲ್ಲಿ…? ಇದು ಬಿಬಿಎಂಪಿ ಕೌನ್ಸಿಲ್ ಕಾರ್ಯದರ್ಶಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಬರುವ ಸೆಪ್ಟೆಂಬರ್ 19 ರಂದು ಮೇಯರ್ ಚುನಾವಣೆ ನಡೆಯಲಿರುವ ಪಾಲಿಕೆ  ಕೌನ್ಸಿಲ್ ಸಭೆಯ ಚಿತ್ರಣ ಇದು.
198 ಪಾಲಿಕೆ ಸದಸ್ಯರು, ಹೊಸದಾಗ ಸೇರ್ಪಡೆಯಾಗಿರುವ ರಾಜ್ಯಸಭಾ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿ ಒಟ್ಟು 266 ಸಂಖ್ಯೆಯಾಗುತ್ತದೆ. ಇದರ ಜತೆಗೆ 20 ಮಂದಿ ನಾಮನಿರ್ದೇಶಿತ ಸದಸ್ಯರು ಸೇರಿ 286 ಮಂದಿ ಆಗುತ್ತಾರೆ. ಆದರೆ ಸಭೆಯಲ್ಲಿರುವುದು 274 ಸೀಟುಗಳು.
ಮೊದಲು ಬಂದವರು ಸೀಟ್ ನಲ್ಲಿ ಆಸೀನರಾದರೆ ಶಾಸಕರು, ರಾಜ್ಯಸಭಾ ಸದಸ್ಯರು ಬಂದಾಗ ಎಲ್ಲಿ ಕೂರಿಸುವುದು ಎಂಬುದು ಕಗ್ಗಂಟಾಗಿದೆ.
ಇಂತಹ ಸನ್ನಿವೇಶ ಉಂಟಾಗಲು ಕಾಂಗ್ರೆಸ್ನವರೇ ಕಾರಣ. ಹೇಗಾದರೂ ಮಾಡಿ ಮೇಯರ್ ಸ್ಥಾನ ತಾವೇ ಅಲಂಕರಿಸಬೇಕೆಂದು ಹಲವಾರು ಶಾಸಕರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸುತ್ತಿರುವುದು ಇಷ್ಟೆಲ್ಲ ಅವಾಂತರಗಳಿಗೆ ಕಾರಣ ಎನ್ನುತ್ತಾರೆ ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ.
ಈ ಬಾರಿಯೂ ಅಧಿಕಾರದ ಗದ್ದುಗೆ ಹಿಡಿಯಬೇಕೆಂಬ ತರಾತುರಿಯಲ್ಲಿರುವ  ಕಾಂಗ್ರೆಸ್ನವರು ಹೊಸದಾಗಿ 5 ಮಂದಿ ಅಂದರೆ ಅಲ್ಲಂವೀರಭದ್ರಪ್ಪ, ಆಸ್ಕರ್ ಫರ್ನಾಂಡೀಸ್, ಡಾ.ಜಿ. ಪರಮೇಶ್ವರ್,  ಬೋಸ್ ರಾಜ್ ಮತ್ತು ಮಲ್ಕಾಪುರೆ ಹೆಸರನ್ನು ಸೇರ್ಪಡೆ ಮಾಡಿದ್ದಾರೆ. ಹಾಗಾಗಿ ಪಾಲಿಕೆ ಸದಸ್ಯರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
ಕಾಂಗ್ರೆಸ್ ನವರು ಕಾನೂನು ವಿರೋಧವಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸುತ್ತಾ ಬಂದರೆ ಪಾಲಿಕೆ ಸದಸ್ಯರಿಗಿಂತ ಹೊರಗಿನವರೇ ಹೆಚ್ಚಾಗಲಿದ್ದಾರೆ ಎಂದು ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

“ಕ್ಷೀರ ಕ್ರಾಂತಿ” ಮೂಲಕ ರೈತರಿಗೆ ನೆರವು: ಸರ್ಕಾರ ನಿರ್ಧಾರ

Next Post

ಪಿಜಿಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಉಗ್ರಪ್ಪ ಆಗ್ರಹ

kalpa News

kalpa News

Next Post

ಪಿಜಿಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಉಗ್ರಪ್ಪ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL