ಬೆಂಗಳೂರು, ಸೆ.16: ಚಿಕ್ಕಪೇಟೆಯಲ್ಲಿರುವ ಎಲೆಕ್ಟ್ರಿಕಲ್ ಶಾಪ್‌ವೊಂದರಲ್ಲಿ ಆಕಸ್ಮಿಕ ಅಗ್ನಿ ಅನಾಹುತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ದುರ್ಮರಣಕ್ಕೀಡಾಗಿದ್ದಾನೆ.
ಬೆಳಗಿನ ಜಾವ 4:30ರ ಸುಮಾರಿಗೆ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಮಾಯಾ ಎಲೆಕ್ಟ್ರಿಕ್ ಶಾಪ್ ಗೋಡಾನ್‌ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಇಬ್ಬರಿಗೆ ಗಾಯಳಾಗಿದೆ. ೨ ಬೈಕ್‌ಗಳು ಸುಟ್ಟು ಹೋಗಿವೆ.
ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದ್ದು, ಸುಮಾರು 9 ಅಗ್ನಿ ಶಾಮಕ ದಳದ ವಾಹನಗಳು ಸತತ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿವೆ. ಮೊದಲು ನೆಲ ಮಹಡಿಯಲ್ಲಿ ಸ್ಫೋಟದ ಸದ್ದು ಕೇಳಿಸಿದ್ದು, ಬಳಿಕ ಮೂರು ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಹತ್ತಿದೆ ನೆಲ ಮಹಡಿಯಲ್ಲಿದ್ದ ಎರಡು ಬೈಕ್ ಮತ್ತು ಲಕ್ಷಾಂತರ ರೂಪಾಯಿಗಳ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
South Western Railway | Praveen Takes Charge as Hubballi Divisional Public Relations Officer
Kalpa Media House | Hubballi | S.P. Praveen, an officer of the Indian Railway Service of Signal Engineers (IRSSE), 2015...
Read moreDetails














