Read - < 1 minute
ಮಂಡ್ಯ: ಸೆ:10: ಜಿಲ್ಲೆಯಲ್ಲಿ ಕಾವೇರಿ ಹೋರಾಟ ಮುಂದುವರಿದಿದೆ. ರೈತ ಹಿತರಕ್ಷಣಾ ಸಮಿತಿ ಯಿಂದ ಇಂದೂ ಕೂಡ ಪ್ರತಿಭಟನೆಗಳು ನಡೆದವು.
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ನಡೆಸುತ್ತಿರುವ ಧರಣಿ ಮುಂದುವರಿದಿದೆ. ಈ ವೇದಿಕೆಯಲ್ಲಿ ಲಂಚಮುಕ್ತ ಕನರ್ಾಟಕ ನಿಮರ್ಾಣ ವೇದಿಕೆ ಕಾರ್ಯಕರ್ತರು ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಮೂರು ದಿನಗಳಿಂದ ಅನಿದರ್ಿಷ್ಠಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ತಮಿಳುನಾಡಿಗೆ ಬಿಡುತ್ತಿರುವ ಕಾವೇರಿ ನೀರನ್ನು ಈ ಕೂಡಲೇ ನಿಲ್ಲಿಸಬೇಕು. ರೈತರಿಗೆ ಒಂದು ಎಕರೆಗೆ ಐವತ್ತು ಸಾವಿರ ಪರಿಹಾರ ನೀಡಬೇಕು. ರೈತರ ಎಲ್ಲಾ ಬಗೆಯ ಸಾಲಗಳನ್ನು ಮನ್ನಾ ಮಾಡಬೇಕು ಹಾಗು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ರಾಜೀನಾಮೆ ನೀಡಬೇಕು. ಎಂಬ ಬೇಡಿಕೆಗಳನಿಟ್ಟು ಐದು ಮಂದಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
ಈ ಮಧ್ಯೆ ಮೈಸೂರು-ಬೆಂಗಳೂರು ಹೆದ್ದಾರಿ ಸಂಚಾರ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಬಸ್ ಗಳು ವಿರಳವಾಗಿ ರಸ್ತೆಗಿಳಿಯುತ್ತಿವೆ. ಆದರೆ ಮಂಡ್ಯದ ಗ್ರಾಮಾಂತರ ಪ್ರದೇಶಕ್ಕೆ ಬಸ್ ಸ್ಥಗಿತಗೊಳಿಸಲಾಗಿದೆ. ಮಂಡ್ಯ ಬಸ್ ನಿಲ್ದಾಣಗಳು ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿವೆ.





Discussion about this post