ನವದೆಹಲಿ, ಸೆ.1: ಮಹಾತ್ಮ ಗಾಂಧೀಜಿಯವರನ್ನು ಆರ್‌ಎಸ್‌ಎಸ್ ಜನರೇ ಕೊಂದಿದ್ದು ಎಂಬ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಈ ಕುರಿತ ಪ್ರಕರಣವನ್ನು ಎದುರಿಸಲು ಸಿದ್ಧನಿದ್ದೇನೆ ಎಂದಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ರಾಹುಲ್, ನಾನು ಈ ಹಿಂದೆ ನೀಡಿದ ಹೇಳಿಕೆಗೆ ಬದ್ಧ ನಾಗಿದ್ದೇನೆ. ಈ ವಿಚಾರದಲ್ಲಿ ಆರ್‌ಎಸ್‌ಎಸ್ ತಮ್ಮ ಮೇಲೆ ಹೂಡಿರುವ ಮಾನನಷ್ಟ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಎದುರಿಸಲು ನಾನು ಸಿದ್ಧವಾಗಿದ್ದೇನೆ ಎಂದಿದ್ದಾರೆ.
2014 ರಲ್ಲಿ ಚುನಾವಣಾ ಪ್ರಚಾರ ಭಾಷಣದಲ್ಲಿ ರಾಹುಲ್, ಮಹಾತ್ಮಾ ಗಾಂಧಿ ಹತ್ಯೆಗೆ ಆರ್‌ಎಸ್‌ಎಸ್‌ನ್ನು ದೂಷಿಸಿದ್ದರು. ಇದನ್ನು ಪ್ರಶ್ನಿಸಿ ಆರ್‌ಎಸ್‌ಎಸ್ ರಾಹುಲ್ ವಿರುದ್ಧ ಮಾನನಷ್ಟ ಮೊಕ್ಕದ್ದಮೆ ಹೂಡಿತ್ತು.
ಈ ಕುರಿತಂತೆ ಕಳೆದ ಕೆಲವು ದಿನಗಳ ಹಿಂದೆ ಟ್ವೀಟ್ ಮಾಡಿದ್ದ ರಾಹುಲ್, ತಮ್ಮ ಭಾಷಣದ ತುಣುಕನ್ನು ಪ್ರಕಟಿಸಿ ತಮ್ಮ ಹೇಳಿಕೆಗೆ ಬದ್ಧ ಎಂದಿದ್ದರು. ಈಗ ಇದೇ ಹೇಳಿಕೆಯನ್ನು ಮರು ಉಚ್ಛರಿಸಿದ್ದು ತಾನು ವಿಚಾರಣೆಗೆ ಸಿದ್ಧ ಎಂದು ಸುಪ್ರೀಂ ಕೋರ್ಟ್‌ಗೆ ಹೇಳಿದ್ದಾರೆ.
Rani KoHEnur Calls Transgender Bill “Absurd”, Questions Lawmakers in Explosive Podcast Interview
Kalpa Media House | Mumbai | Artist, drag performer, and activist Rani KoHEnur (Sushant Divgikar) has ignited widespread conversation following...
Read moreDetails













