No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಸಲ್ಲಿಸಿ: ಪೊಲೀಸರಿಗೆ ಮೀರಾ ಸಿ. ಸಕ್ಸೇನಾ ಕರೆ

kalpa News by kalpa News
August 31, 2016
in ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ, ಆ.31: ರಜೆಗಳಿಲ್ಲದೆ ನಿರಂತರವಾಗಿ ಕಾರ್ಯನಿರ್ವಹಿಸುವ ಅನಿವಾರ್ಯತೆ, ಸಹಜವಾದ ಹಿರಿಯ ಅಧಿಕಾರಿಗಳ ಕೆಲಸದ ಒತ್ತಡದಿಂದ ಪೊಲೀಸರು ಪ್ರಾಮಾಣಿಕವಾಗಿ ತೃಪ್ತಿಕರವಾಗಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಮೀರಾ ಸಿ. ಸಕ್ಸೇನಾ ಹೇಳಿದರು.
ಡಿಎಆರ್ ಸಭಾಂಗಣದಲ್ಲಿ ಮಾನವ ಹಕ್ಕುಗಳು ಮತ್ತು ಲಿಂಗ ಸಮಾನತೆ ಎಂಬ ವಿಷಯದ ಕುರಿತು ಪೊಲೀಸ್ ಅಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೊಲೀಸ್ ಅಧಿಕಾರಿಗಳಿಗೆ ತಮ್ಮ ಕುಟುಂಬದ ಸದಸ್ಯರೊಂದಿಗೆ ಕಾಲಕಳೆಯಲು ಸಾಧ್ಯವಾಗದಿರುವುದು, ಪೊಲೀಸ್‌ರಿಂದ ಉತ್ತಮ ಸೇವೆ ಬಯಸುವ ಸಾರ್ವಜನಿಕರು ಇವೆಲ್ಲವುಗಳಿಂದಾಗಿ ಒತ್ತಡದಿಂದ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ. ಕೆಲವು ತುರ್ತು ಸಂದರ್ಭಗಳಲ್ಲಿ ಪೊಲೀಸರು ತಾಳ್ಮೆ ಕಳೆದುಕೊಳ್ಳದೇ ಸಾರ್ವಜನಿಕರೊಂದಿಗೆ ನಡೆದುಕೊಳ್ಳುವ ಬಗ್ಗೆ, ಸಮಸ್ಯೆ-ಸವಾಲುಗಳನ್ನು ಎದುರಿಸುವ ಬಗೆ ಹೇಗೆ ಎಂಬ ಬಗ್ಗೆ ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದ ಅವರು, ಒತ್ತಡದಿಂದಾಗಿ ಪೊಲೀಸರು ತಮ್ಮ ವರ್ತನೆಯಲ್ಲಾದ ತಪ್ಪುಗಳನ್ನು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಇಲಾಖೆಯ ಬಗೆಗೆ ಜನಮಾನಸದಲ್ಲಿರುವ ತಪ್ಪು ಮಾಹಿತಿಯಿಂದಾಗಿ ಇಂದಿಗೂ ಅನೇಕರು ಪೊಲೀಸ್ ಠಾಣೆಗೆ ಬರಲು ಹಿಂದೇಟು ಹಾಕುತ್ತಾರೆ. ಕಳ್ಳರು, ಡಕಾಯಿತರು ಠಾಣೆಯ ಒಟನಾಡಿಗಳಾಗಿದ್ದಾರೆ. ಆದರೆ, ಅಮಾಯಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಪೊಲೀಸ್‌ಠಾಣೆಗೆ ಯಾವುದೇ ಆತಂಕವಿಲ್ಲದೆ ಬರುವಂತಹ ಜನಸ್ನೇಹಿ ವಾತಾವರಣ ನಿರ್ಮಿಸಬೇಕಾದ ಅಗತ್ಯವಿದೆ ಎಂದರು.
ಇತ್ತೀಚೆಗೆ ರಾಜ್ಯದ ಮಹದಾಯಿ ವಿಷಯದ ಕುರಿತು ನಡೆದ ಗಲಭೆಯಲ್ಲಿ ಪೊಲೀಸರು ನಡೆಸಿದ ಲಾಟಿಪ್ರಹಾರದ ಕುರಿತು ಸಾಮಾಜಿಕ ವಲಯದಲ್ಲಿ ಬಹು ದೊಡ್ಡ ಚರ್ಚೆಗಳು ನಡೆದಿವೆ. ಪೊಲೀಸ್ ಇಲಾಖೆ ವಿರುದ್ದ ಅನೇಕ ದೂರುಗಳು ದಾಖಲಾಗಿವೆ. ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರ ಕರ್ತವ್ಯದಲ್ಲಿ ಕೊಂಚ ವ್ಯತ್ಯಯ ಉಂಟಾದರೂ ಪೊಲೀಸರ ವೈಫಲ್ಯ ಎಂಬ ಹಣೆಪಟ್ಟಿ ಖಚಿತವಾಗಿದೆ ಎಂದ ಅವರು ಎಲ್ಲರೂ ಮನುಷ್ಯರೇ. ಆದರೆ, ಪೊಲೀಸರು ಇಂತಹ ಸಂದರ್ಭದಲ್ಲಿ ಮಾನವೀಯ ನೆಲೆಯಲ್ಲಿ ವ್ಯವಹರಿಸುವ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನ್ಸೆಂಟ್ ಶಾಂತಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಗ್ಲೋಬಲ್ ಕನ್ಸರ್ನ್ ಇಂಡಿಯಾ, ಸುರೇಶ್, ಮನೋಹರ್ ಉಪಸ್ಥಿತರಿದ್ದರು.

ಕುವೆಂಪು ರಂಗಮಂದಿರದಲ್ಲಿ ನಡೆದ ಸಂವಾದದಲ್ಲಿ ಪಾಲ್ಗೊಂಡ ಮೀರಾ ಸಕ್ಸೇನಾ ಶಾಲಾ ಮಕ್ಕಳೊಂದಿಗೆ ಬೆರೆತು ಸಂವಾದ ನಡೆಸಿದರು.
ಕುವೆಂಪು ರಂಗಮಂದಿರದಲ್ಲಿ ನಡೆದ ಸಂವಾದದಲ್ಲಿ ಪಾಲ್ಗೊಂಡ ಮೀರಾ ಸಕ್ಸೇನಾ ಶಾಲಾ ಮಕ್ಕಳೊಂದಿಗೆ ಬೆರೆತು ಸಂವಾದ ನಡೆಸಿದರು.

ದೇಶದಲ್ಲಿ ವಾಸಿಸುವ ಎಲ್ಲರಿಗೂ ಸಮಾನವಾದ ಹಕ್ಕು ಮತ್ತು ಕರ್ತವ್ಯಗಳಿರುವಂತೆಯೇ ಮನುಷ್ಯ ಹುಟ್ಟುತ್ತಿದ್ದಂತೆಯೇ ಮಾನವ ಹಕ್ಕುಗಳನ್ನು ಹೊಂದಿದ್ದಾನೆ. ಅವುಗಳನ್ನು ಯಾರೂ ಕೊಡಬೇಕಾದ ಅಗತ್ಯವಿಲ್ಲ. ಯಾವುದೇ ವ್ಯಕ್ತಿ ಸಮಾಜದಲ್ಲಿ ಗೌರವದಿಂದ ಬದುಕಲು ಬೇಕಾದ ಎಲ್ಲವೂ ಮಾನವ ಹಕ್ಕುಗಳ ಪರಿಧಿಯೊಳಗಿನ ವಿಷಯಗಳಾಗಿವೆ. ಎಲ್ಲ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವವರು ತಮ್ಮ ಕಾರ್ಯಕ್ಷೇತ್ರದಲ್ಲಿ ಮಾನವೀಯ ನೆಲೆಯಲ್ಲಿ ಸೇವೆ ಸಲ್ಲಿಸಲು ಸಾಧ್ಯವಾಗುವುದಾದರೆ ಸಹಜವಾಗಿ ದೇಶದ ಪ್ರಗತಿ ಸಾಧ್ಯವಾಗಲಿದೆ. ಮಹಿಳೆಯರು ಶಿಕ್ಷಣ ಹೊಂದುವುದು ಇಂದಿನ ಅಗತ್ಯ. ಅವರಿಗೆ ಕೌಶಲ್ಯಗಳ ತರಬೇತಿ ಅಗತ್ಯವಿದೆ.
-ಮೀರಾ ಸಕ್ಸೇನಾ
ಮೀರಾ ಸಕ್ಸೇನಾ ಹೇಳಿದ್ದು…
*ಪೊಲೀಸರೇ ನಿಮಗೆ ಒತ್ತಡದಲ್ಲೇ ಕಾರ್ಯ ನಿರ್ವಹಿಸುವ ಅನಿವಾರ್ಯತೆಯಿದೆ
*ತುರ್ತು ಸಂದರ್ಭದಲ್ಲಿ ತಾಳ್ಮೆ ಕಳೆದುಕೊಳ್ಳಬೇಡಿ
*ಆತಂಕವಿಲ್ಲದೇ ಜನಸಾಮಾನ್ಯರು ಠಾಣೆಗೆ ಬರುವಂತಾಗಬೇಕು
*ಒತ್ತಡವಿದ್ದರೂ ಮಾನವೀಯ ನೆಲೆಯಲ್ಲಿ ಕಾರ್ಯ ನಿರ್ವಹಿಸಿ
*ಮಾನವ ಹಕ್ಕು ಉಲ್ಲಂಘನೆಯಾಗುವ ಯಾವ ಕಾರ್ಯವನ್ನೂ ಮಾಡಬೇಡಿ

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಐಎಸ್‌ಐಎಸ್ ವಕ್ತಾರ ಅಬು ಹತ್ಯೆ!

Next Post

ಸಂಜೆ 4ರ ನಂತರ ತಿಂಡಿಗಾಡಿಗಳಿಗೆ ಅವಕಾಶ: ಶಿವಮೊಗ್ಗ ಪಾಲಿಕೆ ಸಭೆಯಲ್ಲಿ ತೀರ್ಮಾನ

kalpa News

kalpa News

Next Post

ಸಂಜೆ 4ರ ನಂತರ ತಿಂಡಿಗಾಡಿಗಳಿಗೆ ಅವಕಾಶ: ಶಿವಮೊಗ್ಗ ಪಾಲಿಕೆ ಸಭೆಯಲ್ಲಿ ತೀರ್ಮಾನ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL