ಉಡುಪಿ: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃಧ್ಧಿಗೆ ಎನ್.ಎಸ್.ಎಸ್. ಸಹಕಾರಿ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಅದರ ಮಹತ್ವವನ್ನು ತಿಳಿಸಬೇಕಾದರೆ ಆ ದಿನವನ್ನು ವಿಶೇಷ ದಿನವನ್ನಾಗಿ ಆಚರಿಸುವುದು ಹೆಚ್ಚು ಸೂಕ್ತವಾದುದು. ಆ ಮೂಲಕ ವಿದ್ಯಾರ್ಥಿಗಳಿಗೆ ಎನ್.ಎಸ್.ಎಸ್.ನ ಮಹತ್ವ ತಿಳಿದು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ. ವೆಂಕಟೇಶ್ ಮಿಲಾಗ್ರಿಸ್ ಕಾಲೇಜಿನಲ್ಲಿ ಸೆಪ್ಟೆಂಬರ್ ೨೪ ರ ಎನ್.ಎಸ್.ಎಸ್. ದಿನಾಚರಣೆಯ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜೆರಾಲ್ಡ್ ಪಿಂಟೊ ವಹಿಸಿದ್ದರು. ವೇದಿಕೆಯಲ್ಲಿ ಎನ್.ಎಸ್.ಎಸ್. ಅಧಿಕಾರಿಗಳಾದ ಶ್ರೀ ಅಂಪಾರು ನಿತ್ಯಾನಂದ ಶೆಟ್ಟಿ ಹಾಗು ಕು. ಗ್ಲ್ಯಾಡ್ನಾ ಡಿ’ಮೆಲ್ಲೊ ಹಾಗೂ ಎನ್.ಎಸ್.ಎಸ್. ನಾಯಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಹರ್ಷಿತಾ ಪ್ರಾರ್ಥನೆಗೈದು ದೀಪಾ ಭಟ್ ಸರ್ವರನ್ನೂ ಸ್ವಾಗತಿಸಿದರು. ಪ್ರಜ್ವಲ್ ಧನ್ಯವಾದಗೈದು ಅಖಿಲೇಶ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಮನೋರಂಜನಾ ಕಾರ್ಯಕ್ರಮ ಜರುಗಿತು.
Gudi Namana 2026: A Year-Long Musical Tribute to Guru Parampara Across Sacred Spaces
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetails




