ಯಾವುದೇ ರೀತಿಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಭಾರತೀಯ ಸೇನೆ ಹಾಗೂ ದೇಶ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ಪ್ರಕ್ಷುಬ್ಧ ವಾತಾವರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಅವರು ಇಂದು ರಾಜಸ್ಥಾನದಲ್ಲಿನ ಬಮರ್ೇರ್ ಜಿಲ್ಲೆಗೆ ಭೇಟಿ ನೀಡಿ ಮುನಬಾವೋ ಗಡಿ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಇದೇ ವೇಳೆ ಬಿಎಸ್ ಎಫ್ ಅಧಿಕಾರಿಗಳಿಂದ ಗಡಿಯಲ್ಲಿ ಭದ್ರತಾ ವ್ಯವಸ್ಥೆ ಕೈಗೊಂದಿರುವ ಕುರಿತು ವಿಸ್ತೃತ ಮಾಹಿತಿ ಪಡೆದುಕೊಂಡರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾದಿದ ಸಿಂಗ್, ರೈತರು ಹೇಗೆ ತಮ್ಮ ಪ್ರಾಣವನ್ನೇ ಪಣವಾಗಿಟ್ಟು ಹೊಲ-ಗದ್ದೆಗಳನ್ನು ಸಂರಕ್ಷಣೆ ಮಾಡುತ್ತಾರೋ ಅದೇ ರೀತಿಯಾಗಿ ಯೋಧರು ತಮ್ಮ ಪ್ರಾಣವನ್ನೇ ಪಣವಾಗಿಟ್ಟು ನಮ್ಮ ದೇಶದ ರಕ್ಷಣೆ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಉಗ್ರರ ವಿರುದ್ಧ ಹೋರಾಡಲು ಭಾರತ ಸಿದ್ಧವಾಗಿದ್ದು, ಯಾವುದೇ ರೀತಿಯ ಸವಾಲುಗಳು ಎದುರಾದರು ಯಶಸ್ವಿಯಾಗಿ ಎದುರಿಸುವ ಸಾಮಥ್ರ್ಯ ಭಾರತೀಯ ಸೇನೆಗಿದೆ ಎಂದು ತಿಳಿಸಿದರು. ಈ ವೇಳೆ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿರೆನ್ ರಿಜಿಜು ಮತ್ತು ಬಿಎಸ್?ಎಫ್ ಅಧಿಕಾರಿಗಳು ಉಪಸ್ಥಿತರಿದ್ದರು.














