Read - < 1 minute
ಉಡುಪಿ, ಸೆ.೬: ಇಲ್ಲಿನ ಕುತ್ಪಾಡಿಯ ರಾಮಕೃಷ್ಣ ಸಭಾಭವನದಲ್ಲಿ ಕಿದಿಯೂರು ಉದಯಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಪ್ರಧಾನ ಮಂತ್ರಿ ವಿಮಾ ಯೋಜನೆಗಳ ಉಚಿತ ಪಾಲಿಸಿ ವಿತರಣೆ ಹಾಗೂ ಉದ್ಯಾವರ ಜಿ.ಪಂ. ಶಕ್ತಿ ಕೇಂದ್ರದ ಸಮಾವೇಶವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಿಮಾ ಯೋಜನೆಗಳನ್ನು, ಉಚಿತವಾಗಿ ಸಮಾಜದ ಬಡ ಜನರಿಗೆ ತಲುಪಿಸುವ ಉದಯಕುಮಾರ್ ಶೆಟ್ಟಿಯವರ ಸಾಮಾಜಿಕ ಕಳಕಳಿ ಶ್ಲಾಘನೀಯ ಎಂದವರು ಹೇಳಿರು .
ಕಾರ್ಯಕ್ರಮದಲ್ಲಿ ಉಡುಪಿ-ಚಿಕ್ಕ ಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕ ಕೆ.ರಘುಪತಿ ಭಟ್, ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶಪಾಲ ಸುವರ್ಣ ಮುಂತಾದವರು ಉಪಸ್ಥಿತರಿದ್ದರು. ಸಭಾಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಪ್ರವರ್ತಕ, ಬಿ.ಜೆ.ಪಿ. ರಾಜ್ಯಕಾರ್‍ಯಕಾರಿಣಿ ಸದಸ್ಯ ಕೆ.ಉದಯಕುಮಾರ್ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಜಿ.ಪಂ. ಸದಸ್ಯೆ ರೇಶ್ಮಾ ಉದಯ ಶೆಟ್ಟಿ ನಿರ್ವಹಿಸಿದರು.
ಸಭಾ ಕಾರ್ಯಕ್ರಮಕ್ಕೂ ಮುನ್ನ ಉದ್ಯಾವರ ಬಲಾಯಿಪಾದೆಯಿಂದ ಕುತ್ಪಾಡಿಯವರೆಗೆ ಮೆರವಣಿಗೆ ನಡೆಯಿತು.
Discussion about this post