ಅಡೆನ್:ಆ-29:ಯಮೇನ್ ನಲ್ಲಿ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 60 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಯೆಮನ್ ನ ಅಡೆನ್ ನಗರದ ಸೇನಾ ತರಬೇತಿ ಶಿಬಿರದ ಮೇಲೆ ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆಸಲಾಗಿದೆ. ನೂತನವಾಗಿ ಸೇರ್ಪಡೆಗೊಂಡ ಸೈನಿಕರಿಗೆ ಕಳೆದ ಎರಡು ತಿಂಗಳಿನಿಂದ ಇಲ್ಲಿ ತರಬೇತಿ ನೀಡಲಾಗುತ್ತಿತ್ತು.
ಬಾಂಬ್ ದಾಳಿಯಲ್ಲಿ 60 ಮಂದಿ ಸಾವನ್ನಪ್ಪಿದ್ದು, 29 ಮಂದಿಗೆ ಗಾಯಗಳಾಗಿವೆ. ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಕಳೆದ 18 ತಿಂಗಳಿಂದ ವಿದ್ವಂಸಕ ಕೃತ್ಯಗಳನ್ನು ನಡೆಸುತ್ತಾ ಬಂದಿದ್ದು, ಇದೇ ಸಂಘಟ ಈ ಕೃತ್ಯ ನಡೆಸಿರಬಹುದು ಎನ್ನಲಾಗಿದೆ.














