ಮೈಸೂರು, ಸೆ.೧೬: ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದ ಮೈಸೂರು ಮೇಯರ್ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ಅವರು, ಮೈಸೂರಿಗೆ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದೆ. ಈ ವೇಳೆ ರಾಜೀನಾಮೆ ನೀಡದಂತೆ ವರಿಷ್ಠರು ಸಲಹೆ ನೀಡಿದ್ದಾರೆ ಎಂದು ಹೇಳಿದರು.
ಈ ಹಿಂದೆ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದಿಂದ ಮನನೊಂದಿದ್ದ ಭೈರಪ್ಪ ಅವರು ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅಂದು ನೆದರ್‌ಲ್ಯಾಂಡ್‌ನಲ್ಲಿ ಮೇಯರ್ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಅವರು, ಸುಪ್ರೀಂಕೋರ್ಟ್ ತೀರ್ಪಿನಿಂದ ರಾಜ್ಯಕ್ಕೆ ಆಗಿರುವ ಅನ್ಯಾಯದಿಂದ ಕಾವೇರಿ ನೀರಿನ ಭಾಗದ ಜನತೆ ಬೇಸರಗೊಂಡಿದ್ದಾರೆ. ಇದರಿಂದ ಮನನೊಂದು ರಾಜೀನಾಮೆ ನೀಡಲು ಸಿದ್ದನಿದ್ದೇನೆ ಎಂದಿದ್ದರು.















