ನ್ಯೂಯಾರ್ಕ್, ಅ.30: ಭಾರತಕ್ಕೆ ಹಾಗೂ ಭಾರತದ ಸಂಸ್ಕೃತಿಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆಯುತ್ತಿರುವ ಹಿನ್ನೆಲೆಯಲ್ಲೇ, ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಈ ಬಾರಿ ಮೊಟ್ಟ ಮೊದಲ ಬಾರಿಗೆ ದೀಪಾವಳಿ ಆಚರಣೆ ಮಾಡುವ ಮೂಲಕ, ಭಾರತಕ್ಕೆ ವಿಶೇಷ ಮನ್ನಣೆ ನೀಡಲಾಗಿದೆ.
ದೀಪಾವಳಿ ಆಚರಣೆಗಾಗಿ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯನ್ನು ವಿಶೇಷವಾಗಿ ಸಿಂಗರಿಸಲಾಗಿದ್ದು, Happy Diwali ಎಂಬ ಶುಭಾಶಯ ಸಂದೇಶವನ್ನು ದೊಡ್ಡದಾಗಿ ಪ್ರಕಟಿಸಲಾಗಿದ್ದು, ಸಾಂಪ್ರದಾಯಿಕವಾಗಿ ‘diya’ ಎಂದೂ ಹಾಕಲಾಗಿದೆ.
ಈ ಕುರಿತಂತೆ ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ಸೈಯ್ಯದ್ ಅಕ್ಬರುದ್ದೀನ್ ಟ್ವೀಟ್ ಮಾಡಿದ್ದು, ಇತಿಹಾಸದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ದೀಪಾವಳಿ ಆಚರಣೆ ಮಾಡಲಾಗುತ್ತಿದ್ದು, ದೀಪಗಳಿಂದ ಸಿಂಗರಿಸಲಾಗಿದೆ. ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ದೀಪಾವಳಿ ಆಚರಣೆ ಮಾಡುವ ಮೂಲಕ ಭಾರತಕ್ಕೆ ಹಾಗೂ ಭಾರತೀಯ ಸಂಸ್ಕೃತಿಗೆ ಗೌರವ ನೀಡಿರುವುದಕ್ಕಾಗಿ ಧನ್ಯವಾದಗಳು ಎಂದಿದ್ದಾರೆ.
ವಿಶ್ವಸಂಸ್ಥೆಯ ಕಾರ್ಯದರ್ಶಿ ಕಚೇರಿಯಲ್ಲಿ ಅಕ್ಟೋಬರ್ 29 ರಿಂದ 31ರವರೆಗೂ ದೀಪಾವಳಿ ಆಚರಣೆ ನಡೆಯುತ್ತಿದೆ.














