No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಶೂನ್ಯಕೊಡುಗೆ ನೀಡಿ, ಸಿಂಹ ಪಾಲು ಪಡೆಯುತ್ತಿರುವ ತಮಿಳುನಾಡು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 23, 2016
in Army
0
Share on FacebookShare on TwitterShare on WhatsApp

ಕಾವೇರಿಯು ಪುರಾಣಗಳಲ್ಲಿ ವರ್ಣಿಸಲಾದ ಸಪ್ತ ಪುಣ್ಯ ನದಿಗಳಲ್ಲಿ ಒಂದು ಹಾಗೂ ದಕ್ಷಿಣದಲ್ಲಿರುವ ಏಕೈಕ ಮಹಾ ನದಿ. ಬ್ರಹ್ಮನ ಮಗಳಾದ ಲೋಪಾಮುದ್ರೆಯು ಭೂಲೋಕದಲ್ಲಿ ಲೋಕೊದ್ಧಾರಕ್ಕಾಗಿ ವಾಸಿಸುತ್ತಿದ್ದಳು. ಕವೇರನೆಂಬ ಮುನಿಯು ಬ್ರಹ್ಮನನ್ನು ಕುರಿತು ತಪಸ್ಸನ್ನಾಚರಿಸಿ ಬ್ರಹ್ಮನಿಂದ ವರವನ್ನು ಪಡೆದನು. ನದಿಯ ಉಗಮಕ್ಕಾಗಿ ಮುನಿಗಳು ಸೂಕ್ತಜಾಗದ ಅನ್ವೇಷಣೆಯಲ್ಲಿ ಇರುವುದನ್ನು ತಿಳಿದಿದ್ದ ಗಣೇಶ ಇದೇ ಸೂಕ್ತವಾಗಿದೆ ಎಂದೆನಿಸಿ ಕಮಂಡಲವನ್ನು ನೆಲದ ಮೇಲೆ ಇಟ್ಟುಬಿಟ್ಟನು. ಅಲ್ಲಿಯೇ ಹಾರಾಡುತ್ತಿದ್ದ ಕಾಗೆಯೊಂದು ಕಮಂಡಲವನ್ನು ತಾಕುವಂತೆ ಕುಳಿತುಕೊಂಡಿತು. ಅಷ್ಟರಲ್ಲಿ ಹಿಂತಿರುಗಿದ ಅಗಸ್ತ್ಯ ಮುನಿಗಳು ಕಾಗೆಯನ್ನು ನೋಡಿ ಧಾವಂತದಿಂದ ಅದನ್ನು ಓಡಿಸಲು ಪ್ರಯತ್ನಿಸಿದಾಗ ಕಮಂಡಲದ ನೀರು ಚೆಲ್ಲಿತು. ಸಣ್ಣ ಪ್ರಮಾಣದ ಜಲವು ಜಲಧಾರೆಯಾಗಿ ನದಿಯಾಗಿ ಹರಿಯಿತು ಎಂದು ಹೇಳಲಾಗಿದೆ.
ಮಹಾಭಾರತದ ಆದಿ ಪರ್ವದಲ್ಲಿ ಅರ್ಜುನನು ತೀರ್ಥಯಾತ್ರೆಗೆ ಹೋಗಿದ್ದಾಗ, ಈ ನದಿಯಲ್ಲಿ ಸ್ನಾನ ಮಾಡಿದನೆಂಬ ಇತಿಹಾಸವಿದೆ. ರಾಜಸೂಯಯಾಗದ ಸಮಯದಲ್ಲಿ ನಕುಲನು ಇಲ್ಲಿಗೆ ಬಂದಿದ್ದನೆಂದು ನಂಬಲಾಗಿದೆ. ಅಗಸ್ತ್ಯ ಮಹಾಮುನಿಯು ಲೋಪಾ ಮುದ್ರೆಯನ್ನು ಮದುವೆಯಾಗುವ ಇಚ್ಛೆಯನ್ನು ವ್ಯಕ್ತಪಡಿಸುತ್ತಾನೆ. ಆದರೆ ಲೋಪಾಮುದ್ರೆ ಮೊದಲು ನಿರಾಕರಿಸುತ್ತಾಳೆ. ನಂತರ ದಾರಿಯಲ್ಲಿ ತೆರಳುತ್ತಿರುವ ವೇಳೆ ಅಗಸ್ತ್ಯ ಮಹಾಮುನಿ ಭೇಟಿಯಾದಾಗ, ಲೋಪಾಮುದ್ರೆಯು ತನ್ನನ್ನು ಎಂದೂ ಕಾಯಿಸಬಾರದು, ಕಾಯಿಸಿದರೆ ನಾನು ಸ್ವತಂತ್ರಳು. ಇದಕ್ಕೆ ಒಪ್ಪುವುದಾದರೆ ಮದುವೆಯಾಗುವುದಾಗಿ ಹೇಳುತ್ತಾಳೆ. ಅದಕ್ಕೆ ಒಪ್ಪಿದ ಅಗಸ್ತ್ಯ ಲೋಪಾ ಮುದ್ರೆಯನ್ನು ಮದುವೆಯಾಗುತ್ತಾನೆ. ಒಂದು ದಿನ ಅಗಸ್ತ್ಯ ತನ್ನ ಶಿಷ್ಯಂದಿರಿಗೆ ಪಾಠ ಮಾಡುತ್ತಾ ತಲ್ಲೀನನಾಗಿ ಸಮಯವನ್ನು ಮರೆತು ಬಿಡುತ್ತಾನೆ. ಆಗ ಲೋಪಾಮುದ್ರೆಯು ಅಲ್ಲಿಂದ ಹೊರಟು ತಲಕಾವೇರಿಗೆ ಬಂದು ಅಂತರ್ಜಲದಲ್ಲಿ ಹಾರಿ ನದಿಯಾಗಿ ಹರಿಯುತ್ತಾಳೆ. ಅವಳು ಕವೇರನೆಂಬ ಮುನಿಯ ಮಗಳಾದುದರಿಂದ ಈ ನದಿಗೆ ಕಾವೇರಿಯೆಂಬ ಹೆಸರು ಬಂದಿದೆ. ಅಗಸ್ತ್ಯ ಮುನಿಗಳ ಕಮಂಡಲ ಮಗುಚಿ ಬಿದ್ದಾಗ ಅದರ ನೀರು ಹೊರ ಚೆಲ್ಲಿತು ಅದೇ ಕಾವೇರಿ ನದಿಯಾಯಿತು ಎಂಬ ನಂಬಿಕೆಯಿದೆ.
ಇನ್ನು ಪ್ರಸ್ತುತ ವಿಚಾರಕ್ಕೆ ಬರುವುದಾದರೆ, ಕೃಷ್ಣರಾಜಸಾಗರ ಜಲಾಶಯದ ಕೆಳಭಾಗದಿಂದ ತಮಿಳುನಾಡಿನ ಗಡಿಯವರೆಗೆ ಕಾವೇರಿ ನದಿಯ ಜಲಾನಯನ ಪ್ರದೇಶ ೨೩,೨೩೧ ಚದರ ಕಿಮೀ. ಕೆಆರ್‌ಎಸ್ ಜಲಾಶಯದ ಕೆಳಭಾಗದಲ್ಲಿನ ಅಚ್ಚುಕಟ್ಟು ಪ್ರದೇಶದಲ್ಲಿ ಗಣನೀಯ ಪ್ರಮಾಣದ ಬಸಿ ನೀರು ಉತ್ಪತ್ತಿಯಾಗುತ್ತದೆ. ಇದು ಸಹ ಕಾವೇರಿ ನದಿಯೊಂದಿಗೆ ತಮಿಳುನಾಡನ್ನು ಸೇರುತ್ತದೆ. ಈ ಹರಿವಿನ ಮೇಲೂ ಕರ್ನಾಟಕಕ್ಕೆ ಯಾವುದೇ ನಿಯಂತ್ರಣ ಇಲ್ಲದಿರುವುದರಿಂದ, ನ್ಯಾಯ ಮಂಡಳಿಯಿಂದ ನಿಗದಿಯಾದ ಪ್ರಮಾಣಕ್ಕಿಂತಲೂ ಹೆಚ್ಚಿನ ನೀರು ತಮಿಳು ನಾಡಿಗೆ ಬಿಡುಗಡೆಯಾಗುತ್ತಿದೆ. ಆದರೂ ಸಹ ತಮಿಳುನಾಡು ಈ ಅಣೆಕಟ್ಟಿನ ವಿರುದ್ಧ ನ್ಯಾಯಾಲಯಕ್ಕೆ ದೂರು ತೆಗೆದುಕೊಂಡು ಹೋಗುತ್ತಿರುವುದು ಎಷ್ಟು ಸರಿ? ಇಂತಹ ಸಂದರ್ಭದಲ್ಲಿ ಪ್ರಧಾನಿ ನರೇಂದ್ರಮೋದಿ ಮಧ್ಯಪ್ರವೇಶಕ್ಕೆ ನಿರಾಕರಿಸಿರುವುದು ರಾಜ್ಯದ ಜನತೆ ಆಘಾತವಾಗಿದೆ.
ಕರ್ನಾಟಕ ೧೭ ಬಿಜೆಪಿ ಸಾಂಸದರು ಸೇರಿದಂತೆ ರಾಜ್ಯದಿಂದ ಆಯ್ಕೆಯಾದ ಸಾಂಸದರು ಯಾಕೆ ಮಾತನಾಡುತ್ತಿಲ್ಲ.
ಇತ್ತೀಚಿನ ದಿನಗಳಲ್ಲಿ ಮಾಜಿ ಪ್ರಧಾನಿ ದೇವೆಗೌಡ ಚಟುವಟಿಕೆಗಳು ರಾಜ್ಯದ ಜನತೆಯಲ್ಲಿ ಒಂದು ಭರವಸೆ ಗೂಡು ಮನೆ ಮಾಡಿದೆ.ಇಳಿ ವಯಸ್ಸಿನಲ್ಲಿ ಪಕ್ಷಭೇದ ಮರೆತು ಮೆಟ್ಟೂರು ಜಲಾಶಯ, ಕೆಆರ್‌ಎಸ್ ಅಣೆಕಟ್ಟು, ಕಾವೇರಿ ನದಿ ನೀರು ಪ್ರಸ್ತುತ ಪರಿಸ್ಥಿತಿ, ಮುಂತಾದ ವಿಚಾರಗಳ ಬಗ್ಗೆ ಸ್ವಂತ ಖರ್ಚಿನಲ್ಲಿ ಪ್ರವಾಸ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು. ಇವರ ಆಡಳಿತದ ಅವಧಿಯಲ್ಲಿ ನರ್ಮದಾ ನದಿ ನೀರಿನ ಸಮಸ್ಯೆ ಮತ್ತು ಉತ್ತರಾಖಂಡ್ ತ್ರಿರ್ ಅಣೆಕಟ್ಟು ವಿವಾದ ಬಗೆಹರಿಸಿದ್ದು ಇಲ್ಲಿ ಗಮನಾರ್ಹ ಸಂಗತಿ.
ಶ್ರೀ ನಾಲ್ವಾಡಿ ಕೃಷ್ಣರಾಜ ಒಡೆಯರ ಕೆಆರ್‌ಎಸ್ ಅಣೆಕಟ್ಟು ಕಟ್ಟಿಸುವ ಸಮಯದಲ್ಲಿ ತಮಿಳುನಾಡಿನ ಕೊಡುಗೆ ಏನು ಇರಲಿಲ್ಲ.
ನಾಲ್ವಡಿಯರು ತಮ್ಮ ತಾಯಿ ಮತ್ತು ಧರ್ಮ ಪತ್ನಿಯವರಿಗೆ ಸೇರಿದ ೪ ಮೂಟೆ ವಜ್ರಾಭರಣಗಳನ್ನು ಮುಂಬೈ ಚಿನಿವಾರ ಪೇಟೆಯಲ್ಲಿ ಮಾರಿ ಕೆಆರ್‌ಎಸ್ ಅಣೆಕಟ್ಟು ಕಟ್ಟಿಸಿದರು. ಆದರೆ ಅಣೆಕಟ್ಟೆ ನಿರ್ಮಾಣದಲ್ಲಿ ಶೂನ್ಯ ಕೊಡುಗೆ ನೀಡಿರುವ ತಮಿಳುನಾಡು ಇಂದು ಈ ಅಣೆಕಟ್ಟೆಯಲ್ಲಿ ಸಂಗ್ರಹಿಸುವ ನೀರಿನ ಸಿಂಹ ಪಾಲನ್ನು ಕಸಿದುಕೊಳ್ಳುವಲ್ಲಿ ಯಶಸ್ವಿಯಾಗುತ್ತದೆ ಎಂದರೆ ಇದು ನಮ್ಮ ದುರಂತವೇ ಹೌದು.

ಲೇಖಕರು:ಎಸ್ ಮಂಜುನಾಥ ಬೆನಕನಹಳ್ಳಿ

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಯಲಲಿತಾ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Next Post

ನಿಶ್ಯಸ್ತ್ರ ಮಾತುಕತೆಗೆ ಸಿದ್ಧ: ಪಾಕಿಸ್ಥಾನ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಿಶ್ಯಸ್ತ್ರ ಮಾತುಕತೆಗೆ ಸಿದ್ಧ: ಪಾಕಿಸ್ಥಾನ ಹೇಳಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL