ಉಡುಪಿ:ಸೆ.೩: ಫೇಸ್ ಬುಕ್ ಹಾಗೂ ಇತರ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರನ್ನು ಅಶ್ಲೀಲವಾಗಿ ಚಿತ್ರಿಸಿ, ಅವಹೇಳನಕಾರಿಯಾಗಿ ಕಮೆಂಟ್ ಮಾಡುವ ಮೂಲಕ ಸಮಾಜದಲ್ಲಿ ಕೋಮು ಸಾಮರಸ್ಯ ಕದಡುತ್ತಿರುವ ಪ್ರಕರಣದ ಬಗ್ಗೆ ಕಾಪುವಿನ ಸಾರ್ವಜನಿಕರಿಂದ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗಸ್ಟ್ 29 ರಂದು ಸಾಮಾಜಿಕ ಜಾಲತಾಣದಲ್ಲಿ ಜಬ್ಬಾರ್ ಬಿ.ಸಿ ರೋಡ್, ಮಝೀನ್ ಮಂಗಳೂರು ಎಂಬ ಹೆಸರಿನಲ್ಲಿ ಹಿಂದೂ ದೇವರುಗಳನ್ನು ಅವಹೇಳನವಾಗಿ ಚಿತ್ರಿಸಲಾಗಿದ್ದು ಇವರ ಬಗ್ಗೆ ಕರಾವಳಿಯ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಇದರ ಮುಂದುವರಿದ ಭಾಗವಾಗಿ ಕಾಪುವಿನಲ್ಲಿ ಸಹ ಸಾರ್ವಜನಿಕರು ಪೋಲಿಸ್ ಠಾಣೆಗೆ ದೂರು ನೀಡಿದ್ದು ಕಠಿಣ ಕ್ರಮ ಕೈಗೊಳ್ಳುವಂತೆ ಠಾಣಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಇದೇ ಸಂದರ್ಭ ಮತಾಂಧರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕಾಪುವಿನ ಸಾರ್ವಜನಿಕರು ನ್ಯಾಯ ಸಿಕ್ಕದಿದ್ದಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ.
Discussion about this post