No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಸಿದ್ಧರಾಮಯ್ಯರೇ, ನಿಮ್ಮ ಸರ್ಕಾರಕ್ಕೇನಾದರೂ ನಾಚಿಕೆಯಿದೆಯೇ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 7, 2016
in Army
0
Share on FacebookShare on TwitterShare on WhatsApp
ಮಹದಾಯಿ ವಿಚಾರದಲ್ಲಿ ರಾಜ್ಯಕ್ಕಾದ ಅನ್ಯಾಯ ಮತ್ತೊಮ್ಮೆ ಮರುಕಳಿಸಿದ್ದು, ಇದರ ಸೈಡ್ ಎಫೆಕ್ಟ್ ಆಗಿ ಮೈಸೂರು ಪ್ರಾಂತ್ಯ ಹೊತ್ತಿ ಉರಿಯುತ್ತಿದೆ.
ಇದಕ್ಕೆ ಕಾರಣವಾಗಿದ್ದು, ರಾಜ್ಯವನ್ನಾಳಿದ ಸರ್ಕಾರಗಳು ಹಾಗೂ ಪ್ರಸ್ತುತ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಾಗೂ ವಕೀಲ ಫಾಲಿ ನಾರಿಮನ್…
ಕಾವೇರಿ ನದಿ ನೀರು ಹಂಚಿಕೆ ಕುರಿತಾಗಿ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ನೀಡಿರುವುದು ರಾಜ್ಯದ ಜನರಲ್ಲಿ ಅದರಲ್ಲೂ ಕಾವೇರಿ ಕೊಳ್ಳದಲ್ಲಿ ಆಕ್ರೋಶ ಭುಗಿಲೇಳುವಂತೆ ಮಾಡಿದೆ. ಅಲ್ಲದೇ, ನಮ್ಮ ರಾಜ್ಯದ ರೈತರಿಗೇ ಹಾಗೂ ಜನರಿಗೆ ಕುಡಿಯುವ ನೀರು ಇಲ್ಲದೇ ಇರುವ ಪರಿಸ್ಥಿತಿಯಲ್ಲಿ ತಮಿಳುನಾಡಿದ ಸಾಂಬಾ ಬೆಳೆಗೆ ನೀರು ಬಿಡುವುದು ಎಂದರೆ ನಿಜಕ್ಕೂ ಅನ್ಯಾಯದ ಪರಮಾವಧಿಯೇ ಹೌದು.
ರಾಜ್ಯ, ನೆಲ, ಜಲ, ಭಾಷೆ ವಿಚಾರ ಬಂದಾಗ ಇಡಿಯ ರಾಜ್ಯವೇ ಒಂದಾಗಿ ಹೋರಾಟ ಮಾಡಬೇಕು. ಈ ಹೋರಾಟದ ಮುಂದಾಳುಗಳು ಸಮರ್ಥವಾಗಿರಬೇಕು. ಅಲ್ಲದೇ, ರಾಜ್ಯದ ಪರವಾಗಿ ಹೋರಾಟ ಮಾಡಿ, ಗೆಲುವನ್ನು ನಮ್ಮ ಕಡೆ ಕೊಡಿಸುವಂತಹ ಮನಸ್ಥಿತಿಯನ್ನು ಹೊಂದಿರಬೇಕು.
ಆದರೆ, ಕಾವೇರಿ ವಿಚಾರದಲ್ಲಿ ರಾಜ್ಯದ ಪರ ವಕಾಲತ್ತು ವಹಿಸಿರುವ ಹಿರಿಯ ವಕೀಲ ಫಾಲಿ ನಾರಿಮನ್, ರಾಜ್ಯದ ಹಿತಕ್ಕಾಗಿ ಯಾವ ರೀತಿಯ ಯಶಸ್ಸನ್ನು ತಂದುಕೊಟ್ಟಿದ್ದಾರೆ ಎಂದು ಪದೇ ಪದೇ ಪ್ರಶ್ನಿಸಬೇಕಿದೆ.
ನಾರಿಮನ್, 1929ರಲ್ಲಿ ವಿದೇಶದಲ್ಲಿ  ಜನಿಸಿದರೂ ವೃತ್ತಿ ಬದುಕನ್ನು ಭಾರತದಲ್ಲಿ ರೂಪಿಸಿಕೊಂಡು, ಭಾರತೀಯ ಕಾನೂನು ಕ್ಷೇತ್ರದಲ್ಲಿ ಪ್ರಖಾಂಡ ಪಂಡಿತರಾಗಿದ್ದಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಕಾನೂನಿನ ಒಳಹೊರಗನ್ನು ಅರೆದು ಕುಡಿದಿರುವ ಅವರು, ಭಾರತ ಕಂಡ ಸಮರ್ಥ ವಕೀಲರಲ್ಲಿ ಒಬ್ಬರು ಎನ್ನುವುದನ್ನು ಒಪ್ಪಲೇ ಬೇಕಾದ ಅಂಶ.
ಆದರೆ, ನಮ್ಮ ರಾಜ್ಯದ ಪರವಾಗಿ ವಕಾಲತ್ತು ವಹಿಸಿಕೊಂಡ ಅವರಿಂದ ರಾಜ್ಯಕ್ಕೇನು ಲಾಭವಾಗಿದೆ ಎನ್ನುವುದು ರಾಜ್ಯದ ಹಿತದೃಷ್ಠಿಯಿಂದ ಮುಖ್ಯವಾಗುತ್ತದೆ.  ಕಾವೇರಿ ವಿಚಾರದಲ್ಲಿ ಕಳೆದ 20 ವರ್ಷಗಳಿಂದ ರಾಜ್ಯದ ಪರ ವಾದ ಮಾಡುತ್ತಿರುವ ನಾರಿಮನ್, ರಾಜ್ಯದ ಜನರ ತೆರಿಗೆ ಹಣದಿಂದ ತಮ್ಮ ಶುಲ್ಕ ತೆಗೆದುಕೊಂಡು ರಾಜ್ಯದ ಪರವಾಗಿ ಯಾವುದೇ ಯಶಸ್ಸನ್ನು ತಂದುಕೊಟ್ಟಿಲ್ಲ ಎಂದಾದರೆ, ಅವರ ಕಾನೂನು ಪಾಂಡಿತ್ಯದಿಂದ ನಮಗೇನು ಪ್ರಯೋಜನ? ಚಿನ್ನದ ಸೂಜಿ ಎಂದು ಕಣ್ಣೀಗೆ ಚುಚ್ಚಿಕೊಳ್ಳಲು ಸಾಧ್ಯವೇ?
ರಾಜ್ಯ ಸರ್ಕಾರಕ್ಕೆ ನಾಚಿಕೆಯಿಲ್ಲವೇ?
ಕಾವೇರಿ ನದಿಯಿಂದ ತಮಿಳುನಾಡಿಗೆ 10 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಟ್ಟಿದ್ದು ನಾರಿಮನ್ ನಿರ್ಧಾರ. ನಾರಿಮನ್ ಸ್ವಯಂಪ್ರೇರಿತ ವಿವೇಚನೆಯಿಂದಲೇ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ನೀರು ಬಿಡುಗಡೆ ಅಫಿಡವಿಟ್  ಕುರಿತಾಗಿ ಸರ್ಕಾರಕ್ಕೆ ಮಾಹಿತಿಯೇ ಇರಲಿಲ್ಲ ಎಂದು ನೀರಾವರಿ ಸಚಿವ ಎಂ.ಬಿ. ಪಾಟೀಲ್ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ರಾಜ್ಯದ ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿ ಕುಳಿತು ಈ ರೀತಿ ಹೇಳಲು ನಿಮಗೆ ನಾಚಿಕೆಯಾಗುವುದಿಲ್ಲವೇ ಪಾಟೀಲರೇ?
20 ವರ್ಷಗಳಿಂದ ಹಿಂದಿನ ಸರ್ಕಾರಗಳು ನೀಡಿದ ರೀತಿಯೇ ನಾರಿಮನ್ ಅವರಿಗೆ ನಮ್ಮ ಸರ್ಕಾರ ಸ್ವಾತಂತ್ರ್ಯ ನೀಡಿದೆ. 10 ಸಾವಿರ ಕ್ಯೂಸೆಕ್ಸ್ ನೀರು ಬಿಡುವ ವಿಚಾರ ನಾರಿಮನ್ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳುತ್ತೀರ ಎಂದರೆ, ರಾಜ್ಯವನ್ನು ಹಾಗೂ ಕಾವೇರಿಯನ್ನು ನಾರಿಮನ್‌ಗೆ ದತ್ತು ನೀಡಿದ್ದೀರೆ?
ಕಾವೇರಿ ನೀರನ್ನು ನಂಬಿಕೊಂಡು ಲಕ್ಷಾಂತರ ಮಂದಿ ಜೀವನ ಸಾಗಿಸುತ್ತಿದ್ದಾರೆ. ಈ ಬಾರಿ ಮಳೆ ಕೊರೆತೆಯಿಂದಾಗಿ ಕಾವೇರಿ ಹಾಗೂ ಅದರ ಉಪನದಿಗಳು ನಿರೀಕ್ಷಿತ ಪ್ರಮಾಣದಲ್ಲಿ ತುಂಬಿಲ್ಲ. ಅಲ್ಲದೇ, ಈಗಿರುವ ನೀರು ಇಲ್ಲಿನ ರೈತರ ಬೆಳೆಗೆ, ಕುಡಿಯಲು ಹಾಗೂ ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡಲೇ ಸಾಲುವುದಿಲ್ಲ. ಕಾವೇರಿಯನ್ನೇ ನಂಬಿಕೊಂಡು ಬದುಕುತ್ತಿರುವ ಜನರ ಪಾಡನ್ನು ನೀವೇನಾದರೂ ಚಿಂತಿಸಿದ್ದೀರೆ?
ಇದಕ್ಕೂ ಮೀರಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ನಾರಿಮನ್ ರಾಜ್ಯದ ಪರವಾಗಿ ಸಮರ್ಥವಾದ ವಾದ ಮಂಡಿಸಿದ್ದಾರೆ. ಅವರು ಜಲ ವಿವಾದದ ವಿಚಾರದಲ್ಲಿ ಆಳವಾದ ಅಧ್ಯಯನ ಮಾಡಿದ್ದಾರೆ. ಅವರು ಮಂಡಿಸಿದ ವಾದ ಸಮರ್ಥವಾಗಿದೆ. ಸುಪ್ರೀಂ ತೀರ್ಪು ರಾಜ್ಯಕ್ಕೆ ವಿರುದ್ಧವಾಗಿ ಬರಲಿದೆ ಎಂದು ಮೊದಲೇ ಹೇಳಿದ್ದರು ಎಂದಿದ್ದಾರೆ.
ಇವರನ್ನು ಮುಖ್ಯಮಂತ್ರಿ ಮಾಡಿದ ಜನಕ್ಕೆ ಬುದ್ದಿ ಇದೆಯೇ ಎಂಬ ಪ್ರಶ್ನೆಯನ್ನು ರಾಜ್ಯದ ಜನತೆಗೆ ಕೇಳಬೇಕಿದೆ.
ಸ್ವಾಮಿ ಸಿದ್ಧರಾಮಯ್ಯನವರೇ ಹಾಗೂ ಎಂ.ಬಿ. ಪಾಟೀಲರೇ, ಮತ್ತೊಮ್ಮೆ ಕೇಳುತ್ತೇನೆ ಕಾವೇರಿಯನ್ನು ನಾರಿಮನ್‌ಗೆ ದತ್ತು ನೀಡಿದ್ದೀರಾ? ಅಥವಾ ಇಡಿಯ ಕಾವೇರಿ ನದಿಯನ್ನು ನಾರಿಮನ್ ಹೆಸರಿಗೆ ಖಾತೆ, ಪಹಣಿ ಮಾಡಿಸಿಕೊಟ್ಟಿದ್ದೀರಾ? ಚುನಾಯಿತ ಸರ್ಕಾರವಿದ್ದಾಗ್ಯೂ ರಾಜ್ಯದ ಅತಿ ಸೂಕ್ಷ್ಮ ವಿಚಾರದಲ್ಲಿ ನಾರಿಮನ್ ವಿವೇಚನಾಯುಕ್ತ ನಿರ್ಧಾರ ಎಂದು ನೀವು ಹೇಳುತ್ತೀರಾದರೆ, ಕಾವೇರಿ ನದಿಯೇನು ನಾರಿಮನ್‌ಗೆ ಸೇರಿದ ಪಿತ್ರಾರ್ಜಿತ ಆಸ್ತಿಯೇ?
ಈ  ಪ್ರಕರಣದಲ್ಲಿ ಒಮ್ಮೆ ಕಾನೂನು ಹೋರಾಟ ನಡೆಸಬೇಕು ಎಂದು ನಿರ್ಧರಿಸಿದ ನಂತರ, ವಕೀಲರ ಆಯೋಗ ನೇಮಕ ಮಾಡಿ, ರಾಜ್ಯದ ಕಾನೂನು ಸಚಿವರ ನೇತೃತ್ವದಲ್ಲಿ, ಕಾನೂನು ಕಾರ್ಯದರ್ಶಿ ಹಾಗೂ ಅಡ್ವೋಕೇಟ್ ಜನರಲ್ ಉಪಸ್ಥಿತಿಯಲ್ಲಿ ನಾರಿಮನ್ ಅವರನ್ನು ನೇಮಕ ಮಾಡಲಾಗಿದೆ ಎನ್ನುವುದು ಸತ್ಯ.  ಆದರೆ, ಈ ರೀತಿಯಲ್ಲಿ ನೇಮಕವಾದ ನಂತರ ಕಾವೇರಿ ವಿಚಾರದಲ್ಲಿ ನಾರಿಮನ್ ಅವರಿಂದ ರಾಜ್ಯಕ್ಕೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ  ಎನ್ನುವುದಕ್ಕೆ ಜ್ವಲಂತ ನಿದರ್ಶನವಿದೆ. ಇಷ್ಟೆಲ್ಲಾ ಅಶ್ಟೈಶ್ವರ್ಯ ಮಾಡಿ ನಾರಿಮನ್‌ರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ರಾಜ್ಯದ ರೈತರ ಹಾಗೂ ಜನರ ಹಿತವನ್ನು ಬಲಿಕೊಡುವುದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ.
ರಾಜ್ಯದ ಜನತೆ ಪಾವತಿಸಿದ ತೆರಿಗೆ ಹಣದಿಂದ ನಾರಿಮನ್‌ಗೆ ವಕೀಲರ ಶುಲ್ಕ ನೀಡಲಾಗಿದೆಯೇ ಹೊರತು, ಸಿದ್ದರಾಮಯ್ಯರಾಗಲಿ ಅಥವಾ ಎಂ.ಬಿ. ಪಾಟೀಲರಾಗಲೀ ತಮ್ಮ ಸ್ವಂತ ‘ಬೊಕ್ಕಸ’ದಿಂದ ನೀಡಿಲ್ಲ. ರಾಜ್ಯದ ಜನರ ಋಣದಲ್ಲಿರುವ ನಾರಿಮನ್, ನಮ್ಮ ಜನರ ಹಿತಕ್ಕಾಗಿ ಹೋರಾಡಬೇಕಾದ ಆದ್ಯ ಕರ್ತವ್ಯವನ್ನು ಹೊಂದಿರುತ್ತಾರೆ. ಹೀಗಿರುವಾಗ, ಕೋಟಿಗಟ್ಟಲೆ ಹಣವನ್ನು ನೀಡಿದ ಮೇಲೂ ಪ್ರಕರಣದಲ್ಲಿ ಸೋಲುಂಟಾಗಿದೆ ಎಂದರೆ, ರಾಜ್ಯದ ಜಲಾಶಯಗಳ ಸ್ಥಿತಿಗತಿಗಳನ್ನು ಸುಪ್ರೀಂ ಕೋರ್ಟ್‌ಗೆ ನಾರಿಮನ್ ಅರ್ಥ ಮಾಡಿಸುವುದರಲ್ಲಿ ಸೋತಿದ್ದಾರೆ.
ಸಿದ್ಧರಾಮಯ್ಯನವರೇ, ರಾಜ್ಯಕ್ಕೆ ವ್ಯತಿರಿಕ್ತವಾಗಿ ಸುಪ್ರೀಂ ತೀರ್ಪು ಬರುತ್ತದೆ ಎಂದು ನಾರಿಮನ್ ಮೊದಲೇ ಹೇಳಿದ್ದರು ಎಂದಿದ್ದೀರಿ. ಅಲ್ಲಿಗೆ ರಾಜ್ಯದ ಜನರ ಕುಡಿಯುವ ನೀರಿಗೆ ಹಾಗೂ ಬೆಳೆಗೆ ಕಂಟಕವಾಗುತ್ತದೆ ಎನ್ನುವುದು ನಿಮಗೆ ಮೊದಲೇ ತಿಳಿದಿತ್ತು ಎಂದರ್ಥವಲ್ಲವೇ? ಅಲ್ಲದೇ, ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತಲೂ ಮಳೆ ಕಡಿಮೆಯಾಗಿದೆ, ಜಲಾಶಯಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಿಲ್ಲ. ಅಷ್ಟು ದೊಡ್ಡ ಮೊತ್ತದ ನೀರು ಹರಿಸಲು ಸಾಧ್ಯವಿಲ್ಲ. ಅದರಿಂದ ಕರ್ನಾಟಕದ ಜನತೆಗೆ ಕುಡಿಯುವ ನೀರಿಗೆ ತೊಂದರೆಯಾಗುತ್ತದೆ ಎನ್ನುವ ಅಂಶವನ್ನು ನಾರಿಮನ್ ಸುಪ್ರೀಂಗೆ ದಾಖಲೆ ಸಹಿತ ಮನವರಿಕೆ ಮಾಡಿಕೊಡುವಲ್ಲಿ ಸೋತಿರುವುದು ಸತ್ಯವೇ ಆಗಿದೆ ಹಾಗೂ ಅದನ್ನೂ ತಾವೇ ಪರೋಕ್ಷವಾಗಿ ಒಪ್ಪಿಕೊಂಡಿದ್ದೀರಿ ಈ ಹೇಳಿಕೆಯ ಮೂಲಕ.
ನಾರಿಮನ್ ಎಷ್ಟೇ ಹಿರಿಯ ವಕೀಲರಾಗಿರಲಿ, ಪ್ರಖಾಂಡ ಪಂಡಿತರಾಗಿರಲಿ ಅದನ್ನು ಗೌರವಿಸೋಣ. ಆದರೆ, ಕಳೆದ  20 ವರ್ಷಗಳಿಂದ ಅವರಿಂದ ಕಾವೇರಿ ಕೊಳ್ಳದ ಜನರಿಗೆ ಅನ್ಯಾಯವಾಗುತ್ತಲೇ ಇದೆ ಎಂದಾದಾಗ ಅಂತಹ ವ್ಯಕ್ತಿಯನ್ನು ಮುಂದುವರೆಸುವ ಅನಿವಾರ್ಯತೆ ಏನಿದೆ? ಜಯಲಲಿತಾ ವಿರುದ್ಧ ಕರ್ನಾಟಕ ಸರ್ಕಾರ ಪ್ರಕರಣ ದಾಖಲಿಸಿದಾಗ, ಜಯಾ ಪರ ವಕಾಲತ್ತು ವಹಿಸಿ, ಜಯಾಗೆ ಜಯ ತಂದುಕೊಟ್ಟ ನಾರಿಮನ್ ಅವರಿಂದ ಕರ್ನಾಟಕದ ಪರವಾಗಿ ತೀರ್ಪು ಬರುವಂತೆ ಹೋರಾಡುತ್ತಾರೆ ಎಂದು ನಿರೀಕ್ಷೆ ಮಾಡಿದ ಸಿದ್ಧರಾಮಯ್ಯರ ಸರ್ಕಾರಕ್ಕೆ ನಿಜಕ್ಕೂ ಬುದ್ದಿ ಇದೆ ಎನ್ನಲು ಸಾಧ್ಯವೇ ಇಲ್ಲ. 
ನಮ್ಮ ರಾಜ್ಯದವರೇ ಆದ ಸಮರ್ಥ ವಕೀಲರನ್ನು ನೇಮಿಸಿದರೆ, ಅವರಿಗೆ ಜನ್ಮತಃ ಈ ನೆಲ ಹಾಗೂ ನಮ್ಮ ಜನರ ಕುರಿತಾಗಿ ವಿಶ್ವಾಸ, ಪ್ರೀತಿ ಹಾಗೂ ಅಂತಃಕರಣವಿರುತ್ತದೆ. ಆದರೆ, ರಾಜ್ಯಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿಯೊಬ್ಬರು ರಾಜ್ಯದ ಜನರ ಸಂಕಷ್ಟವನ್ನು ಅದು ಹೇಗೆ ತಾನೆ ಅರಿತಾರು ಎನ್ನುವ ಕನಿಷ್ಠ ಪ್ರಜ್ಞೆ ನಿಮಗಿಲ್ಲ ಎನ್ನುವುದು ನಿಜಕ್ಕೂ ಈ ರಾಜ್ಯದ ದುರಂತ.
Share196Tweet123Send
Previous Post

ಕೃಷಿಗೆ ನೀರು ನೀಡುತ್ತೇವೆ: ರೈತರ ಒತ್ತಾಯಕ್ಕೆ ಮಣಿದ ಸಿದ್ಧರಾಮಯ್ಯ

Next Post

ಗೋವು ಸಂಚರಿಸುವ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ: ರಾಘವೇಶ್ವರ ಶ್ರೀ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗೋವು ಸಂಚರಿಸುವ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ: ರಾಘವೇಶ್ವರ ಶ್ರೀ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

April 25, 2026
ಪುಸ್ತಕಗಳ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಸುರೇಶ್ ಋಗ್ವೇದಿ ಅಭಿಪ್ರಾಯ

ಪುಸ್ತಕಗಳ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಸುರೇಶ್ ಋಗ್ವೇದಿ ಅಭಿಪ್ರಾಯ

April 25, 2026
ಸನಾತನ ಸಂಸ್ಕೃತಿ, ಪರಂಪರೆಗೆ ಕಲ್ಪ ಡಿಜಿಟಲ್ ನ್ಯೂಸ್ ಕೊಡುಗೆ ಅನನ್ಯ: ಪಂಡಿತ ಹೇಮಂತ ಆಚಾರ್ಯ ಗುಡಿ

ಸನಾತನ ಸಂಸ್ಕೃತಿ, ಪರಂಪರೆಗೆ ಕಲ್ಪ ಡಿಜಿಟಲ್ ನ್ಯೂಸ್ ಕೊಡುಗೆ ಅನನ್ಯ: ಪಂಡಿತ ಹೇಮಂತ ಆಚಾರ್ಯ ಗುಡಿ

April 25, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

April 25, 2026
ಸಮಾಜದತ್ತ ನಮ್ಮ ಹೊಣೆಗಾರಿಕೆಯನ್ನು ಮರೆಯಬಾರದು | ಬ್ರಜೇಶ್ ಸಿಂಗ್

ಸಮಾಜದತ್ತ ನಮ್ಮ ಹೊಣೆಗಾರಿಕೆಯನ್ನು ಮರೆಯಬಾರದು | ಬ್ರಜೇಶ್ ಸಿಂಗ್

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL