No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ಸುಪ್ರೀಂ ಗೆ ಕಾವೇರಿ ಜಲಾನಯನ ಪ್ರದೇಶಗಳ ಅಧ್ಯಯನ ವರದಿ ಸಲ್ಲಿಕೆ: ಮಂಗಳವಾರ ವಿಚಾರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 17, 2016
in ಜಿಲ್ಲೆ
0
Share on FacebookShare on TwitterShare on WhatsApp

ನವದೆಹಲಿ, ಅ.17: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚನೆ ಮಾಡಿದ್ದ ತಜ್ಞರ ಸಮಿತಿ ಕರ್ನಾಟಕ, ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶಕ್ಕೆ 4 ದಿನಗಳ ಭೇಟಿ ನೀಡಿ ನಡೆಸಿದ್ದ ಅಧ್ಯಯ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ.

ಕೇಂದ್ರ ಜಲ ಆಯೋಗದ ಮುಖ್ಯಸ್ಥ ಜಿಎಸ್ ಝಾ ಅವರ ನೇತೃತ್ವದ ತಜ್ಞರ ಸಮಿತಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರವಾಸ ಮಾಡಿ ತನ್ನ ವರದಿ ತಯಾರಿಸಿದ್ದು, ಸುಮಾರು 39  ಪುಟಗಳ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಕೆ ಮಾಡಿದೆ. ಎರಡೂ ರಾಜ್ಯಗಳ ನೀರಿನ ಲಭ್ಯತೆ ಹಾಗೂ ನೀರಿನ ಅವಶ್ಯಕತೆಗಳ ಕುರಿತು ಮಾತ್ರ ಮಾಹಿತಿ ನೀಡಲಾಗಿದ್ದು, ತಮಿಳುನಾಡಿಗೆ ನೀರು ಬಿಡುವ ಕುರಿತು ಅಥವಾ ನೀರು ಬಿಡಬಾರದು ಎಂಬುದರ ಕುರಿತು ಯಾವುದೇ ರೀತಿಯ ಶಿಫಾರಸ್ಸು ಮಾಡಿಲ್ಲ ಎನ್ನಲಾಗಿದೆ.

ಜಿಎಸ್ ಝಾ ನೇತೃತ್ವದ ತಂಡ ತಮ್ಮ ವರದಿಯಲ್ಲಿ ಎರಡೂ ರಾಜ್ಯಗಳ ನೀರಿನ ಕೊರತೆ ಹಾಗೂ ನೀರಿನ ಲಭ್ಯತೆ ಕುರಿತಂತೆ ಮಾಹಿತಿ ನೀಡಿದ್ದಾರೆ. ಅದರಂತೆ  ಕರ್ನಾಟಕದಲ್ಲಿ ನೀರಿನ ಸಮಸ್ಯೆಯಿಂದಾಗಿ 42 ತಾಲ್ಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕರ್ನಾಟಕದಲ್ಲಿನ ನೀರಿನ ಕೊರತೆಯಿಂದಾಗಿ ಅಲ್ಲಿ ಉದ್ಯೋಗ  ಸೃಷ್ಟಿಗೂ ಸಮಸ್ಯೆಯಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಬೆಳೆ ನಾಶದಿಂದಾಗಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀರಿನ ಕೊರತೆಯಿಂದಾಗಿ ಕರ್ನಾಟಕದ ಮೀನುಗಾರರು ಕೂಡ  ಸಮಸ್ಯೆ ಎದುರಿಸುತ್ತಿದ್ದು, ಆರ್ಥಿಕವಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಕರ್ನಾಟಕದ ಜಲಾಶಯಗಳಲ್ಲಿ ಕೇವಲ 30 ಟಿಎಂಸಿ ನೀರಿನ ಸಂಗ್ರಹ ಮಾತ್ರವಿದೆ ಎಂದು  ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಅಂತೆಯೇ ಕರ್ನಾಟಕದ ರೈತರ ಕುರಿತಂತೆ ಮಾಹಿತಿ ನೀಡಿರುವ ಜಿಎಸ್ ಝಾ, ಕರ್ನಾಟಕದ ರೈತರಲ್ಲಿ ಅಭಿವೃದ್ಧಿ ಆಕಾಂಕ್ಷೆ ಹಾಗೂ ಆಶೋತ್ತರಗಳಿದ್ದು, ಅವರನ್ನು ನೀರಿನ ಸದ್ಭಳಕೆ ಕುರಿತಂತೆ  ಶಿಕ್ಷಿತರನ್ನಾಗಿ ಮಾಡುವ ಅನಿವಾರ್ಯತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ತಮಿಳುನಾಡು ವಿಚಾರಕ್ಕೆ ಸಂಬಂಧಿಸಿದಂತೆ, ತಮಿಳುನಾಡಿನ ರೈತರಿಗೂ ನೀರಿ ಅವಶ್ಯಕತೆ ಇದ್ದು, ಬೆಳೆದು ನಿಂತ ಬೆಳೆಗಳನ್ನು ರಕ್ಷಿಸಿಕೊಳ್ಳಲು ಅಲ್ಲಿನ ರೈತರಿಗೆ ನೀರು  ಅನಿವಾರ್ಯವಾಗಿದೆ. ತಮಿಳುನಾಡು ಸರ್ಕಾರ ರೈತರಿಗೆ ಸಾಕಷ್ಟು ಸಬ್ಸಿಡಿ ಘೋಷಣೆ ಮಾಡಿದ್ದು, ಈ ಸಬ್ಸಿಡಿ ಪರಿಣಾಮಕಾರಿಯಾಗಿ ರೈತರ ತಲುಪಲು ನೀರು ಬೇಕೇ ಬೇಕು ತಮ್ಮ ವರದಿಯಲ್ಲಿ  ಉಲ್ಲೇಖಿಸಿದ್ದಾರೆ. ಇದೇ ವೇಳೆ ಬೆಳೆ ಉಳಿಸಿಕೊಳ್ಳಲು ನೀರು ಬೇಕು ಬೇಕು ಎಂದು ಹೇಳಿರುವ ಝಾ ಮುಂದುವರೆದ ತಂತ್ರಜ್ಞಾನವನ್ನು ರೈತರು ಅಳವಡಿಸಿಕೊಳ್ಳುವ ಮೂಲಕ ರೈತರು ತಮ್ಮ  ಬೆಳೆಗಳನ್ನು ಉಳಿಸಿಕೊಳ್ಳಬಹುದು. ತಮಿಳುನಾಡಿಗೆ ಶೇ.50ರಷ್ಟು ನೀರು ಕಡಿತವಾದರೂ ಬೆಳೆ ನಿಭಾಯಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ತಜ್ಞರ ಪ್ರಕಾರ ಈ ಅಂಶ ನಾಳೆ ಕರ್ನಾಟಕ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಲು ನೆರವಾಗಬಹುದು ಎಂದು ಹೇಳಲಾಗುತ್ತಿದೆ.

ಅಕ್ಟೋಬರ್ 6ರಿಂದ 10ರವರೆಗೂ ಜಿ.ಎಸ್.ಝಾ ನೇತೃತ್ವದ ತಂಡ ಎರಡು ರಾಜ್ಯಗಳ ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಅಧ್ಯಯನ ನಡೆಸಿತ್ತು. ಕೆಆರೆಸ್, ಹೇಮಾವತಿ, ಕಬಿನಿ ಹಾಗೂ  ಹಾರಂಗಿ ಜಲಾಶಯಗಳ ಹಾಗೂ ಜಲಾಶಯ ವ್ಯಾಪ್ತಿಯಲ್ಲಿ 2 ದಿನಗಳ ಕಾಲ ಅಧ್ಯಯನ ನಡೆಸಿ ವರದಿ ಸಿದ್ಧ ಮಾಡಿತ್ತು.

ಇಂದು ಏನಾಗುತ್ತೆ? 

ಹಿಂದಿನ ವಿಚಾರಣೆಯಲ್ಲಿ ಅ.18ರ ವರೆಗೆ 2000 ಕ್ಯೂಸೆಕ್ ನೀರು ಹರಿಸಲು ಆದೇಶಿಸಿತ್ತು. ಸುಪ್ರೀಂಕೋರ್ಟ್ ಆದೇಶವನ್ನು ಸರ್ಕಾರ ಪಾಲಿಸಿದೆ. ಈಗ ಈ ವರದಿ ಆಧರಿಸಿ ಮಂಗಳವಾರ ಸುಪ್ರೀಂಕೋರ್ಟ್ ಯಾವ ಆದೇಶವನ್ನು ನೀಡಲಿದೆ ಎನ್ನುವ ಕುತೂಹಲ ಹೆಚ್ಚಾಗಿದೆ.

ಅಕ್ಟೋಬರ್ 6ರಿಂದ 10ರವರೆಗೂ ಜಿ.ಎಸ್.ಝಾ ನೇತೃತ್ವದ ತಂಡ ಎರಡು ರಾಜ್ಯಗಳ ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಅಧ್ಯಯನ ನಡೆಸಿತ್ತು. ಈ ವೇಳೆ ತಮಿಳುನಾಡಿಗಿಂತಲೂ ಕರ್ನಾಟಕದ ಸ್ಥಿತಿ ಶೋಚನೀಯವಾಗಿದೆ ಎಂಬ ಸತ್ಯಸಂಗತಿ ಅರಿತ ಕೇಂದ್ರ ತಂಡ ಮರುಕ ವ್ಯಕ್ತಪಡಿಸಿತ್ತು. ಹೀಗಾಗಿ ನಾಳೆ ನಡೆಯುವ ವಿಚಾರಣೆಯಲ್ಲಿ ರಾಜ್ಯಕ್ಕೆ ಒಂದಿಷ್ಟು ನ್ಯಾಯ ಸಿಗುವ ಆಶಾಭಾವನೆಯಿದೆ.

2 ದಿನ ಕರ್ನಾಟಕದ ಕಾವೇರಿ ಕೊಳ್ಳದಲ್ಲಿ ಅಧ್ಯಯನ ನಡೆಸಿದ ವೇಳೆ ಝಾ ನೇತೃತ್ವದ ತಂಡ ಇಲ್ಲಿನ ಪರಿಸ್ಥಿತಿ ಕಂಡು ಮರುಗಿತ್ತು. ನಿಮಗೆ ತುಂಬಾ ಕಷ್ಟವಿದೆ. ನಿಮ್ಮ ಕಷ್ಟ ನಮಗೆ ಅರ್ಥವಾಗಿದೆ ನಿಮಗೆ ಕುಡಿಯಲು ನೀರೂ ಇಲ್ಲ ಅಂತಾ ಹೇಳಿತ್ತು. ನಿಮ್ಮ ಕಷ್ಟವನ್ನು ಸುಪ್ರೀಂ ಕೋರ್ಟ್ ಮುಂದೆ ಇಡುತ್ತೇವೆ ಅಂತಾ ಹೇಳಿತ್ತು. ಕೆಆರೆಸ್, ಹೇಮಾವತಿ, ಕಬಿನಿ ಹಾಗೂ ಹಾರಂಗಿ ಜಲಾಶಯಗಳ ಹಾಗೂ ಜಲಾಶಯ ವ್ಯಾಪ್ತಿಯಲ್ಲಿ 2 ದಿನಗಳ ಕಾಲ ಅಧ್ಯಯನ ನಡೆಸಿ ವರದಿ ಸಿದ್ಧ ಮಾಡಿತ್ತು. ಈ ವೇಳೆ ಕಾವೇರಿ ಕೊಳ್ಳದ ಜನ ಕೂಡಾ ಕಾವೇರಿ ಟೀಂ ಮುಂದೆ ತಮ್ಮ ಕಷ್ಟವನ್ನು ಹೇಳಿಕೊಂಡು ಅಳಲು ತೋಡಿಕೊಂಡಿದ್ದರು.

ರಾಜ್ಯಕ್ಕೆ ವರವೋ…ಶಾಪವೋ…?

ಕಾವೇರಿ ಕೊಳ್ಳದ ಜಲಾನಯನ ಪ್ರದೇಶಗಳ ವಾಸ್ತವಿಕ ಪರಿಸ್ಥಿತಿ ಅಧ್ಯಯನ ಮಾಡಲು ಸುಪ್ರೀಂಕೋರ್ಟ್ ನೇಮಿಸಿದ್ದ ತಾಂತ್ರಿಕ ಸಮಿತಿ ನೀಡಿರುವ ವರದಿ ರಾಜ್ಯಕ್ಕೆ ವರವಾಗುವ ಸಾಧ್ಯತೆ ಇದೆಯಾದರೂ ಕಾದುನೋಡಬೇಕಿದೆ.

ಸುಪ್ರೀಂಕೋರ್ಟ್ ಸೂಚನೆಯಂತೆ ಕರ್ನಾಟಕ ಮತ್ತು ತಮಿಳುನಾಡಿನ ಕಾವೇರಿ ಕೊಳ್ಳದ ವಸ್ತುಸ್ಥಿತಿ ಅಧ್ಯಯನ ನಡೆಸಿರುವ ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್. ಝಾ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯಲ್ಲಿ ರಾಜ್ಯಕ್ಕೆ ಪೂರಕವಾಗಿರುವ ಅಂಶಗಳು ಉಲ್ಲೇಖವಾಗಿರುವುದು ಕಂಡುಬಂದಿದೆ.

ರಾಜ್ಯದ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಬರದ ಛಾಯೆ ಆವರಿಸಿದೆ. ಜಲಾಶಯಗಳಲ್ಲಿ ನೀರಿಲ್ಲ. ಸುಮಾರು 42 ತಾಲೂಕುಗಳನ್ನು ರಾಜ್ಯ ಸರ್ಕಾರ ಬರ ಪ್ರದೇಶವೆಂದು ಘೋಷಿಸಿದೆ. ಕಾವೇರಿ ಜಲಾಶಯದ ಪ್ರದೇಶಗಳಲ್ಲಿ ಬೆಳೆ ಒಣಗಿ ಹಾಳಾಗಿದೆ. ಜಲಾಶಯಗಳಲ್ಲಿ ನೀರಿನ ಮಟ್ಟ ಡೆಡ್ ಸ್ಟೋರೇಜ್ ಹಂತ ತಲುಪಿದೆ. ಬೆಳೆದು ನಿಂತ ಬೆಳೆಗಳಿಗೆ ನೀರಿಲ್ಲ. ಕೆಲ ಹಳ್ಳಿಗಳಲ್ಲಿ ರೈತರು ಪರ್ಯಾಯ ಬೆಳೆಗೆ ಮಾರು ಹೋಗಿದ್ದಾರೆ.  ತಮಿಳುನಾಡಿನ ಜಲಾಶಯಗಳಲ್ಲಿ ನೀರಿನ ಪ್ರಮಾಣ ಸಾಕಷ್ಟಿದೆ. ಅಲ್ಲಿನ ಬೆಳೆ ನಷ್ಟದ ಪ್ರಮಾಣ ಕಡಿಮೆ ಇದೆ. ಇಲ್ಲಿ ಕುಡಿಯುವ ನೀರಿಗೆ ನೀರು ಸಂಗ್ರಹ ಮಾಡಿಕೊಳ್ಳಲಾಗಿದೆ. ಆದರೆ, ಅಲ್ಲಿ ಸಾಂಬಾ ಬೆಳೆಗೆ ನೀರು ಸಂಗ್ರಹ ಮಾಡಿಕೊಳ್ಳಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ತಮಿಳುನಾಡಿಲ್ಲೂ ಕೂಡ ಸಾಂಬಾ ಬೆಳೆ, ಅರಿಶಿನ ಬೆಳೆ ನಷ್ಟ ಉಂಟಾಗಿದೆ. ಆದರೆ, ಕರ್ನಾಟಕದ ಪ್ರಮಾಣದಲ್ಲಿ ಬೆಳೆ ನಷ್ಟವಾಗಿಲ್ಲ ಎಂದು ಸಮಿತಿ ಹೇಳಿದೆ.

Share197Tweet123Send
Previous Post

ಉಕ್ಕು ಸೇತುವೆ ಪಾರದರ್ಶಕ, ಸಂಶಯ ಬೇಡ: ಸಿದ್ಧರಾಮಯ್ಯ ಸ್ಪಷ್ಟನೆ

Next Post

ಕಾಂಗ್ರೆಸ್ ಗೆ ವಿದಾಯ ಹೇಳಿದ ಶ್ರೀನಿವಾಸ್ ಪ್ರಸಾದ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಂಗ್ರೆಸ್ ಗೆ ವಿದಾಯ ಹೇಳಿದ ಶ್ರೀನಿವಾಸ್ ಪ್ರಸಾದ್

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

May 6, 2026
ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು

ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು

May 6, 2026
ಅಸ್ಸಾಂ | ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ | ಹಿಮಂತ್ ಬಿಸ್ವಾಸ್ ಕಮಾಲ್

ಮಮತಾ ರಾಜೀನಾಮೆ ನೀಡದಿದ್ದರೆ ವಜಾಗೊಳಿಸಿ | ಹಿಮಂತ್ ಬಿಸ್ವಾ ಶರ್ಮಾ ಆಕ್ರೋಶ

May 6, 2026
ಅಗ್ನಿವೀರ್, ಪ್ಯಾರಾ ಮಿಲಿಟರಿ, ಪೊಲೀಸ್ ನೇಮಕಾತಿ | ಸಿಗಂಧೂರಿನಲ್ಲಿ ಉಚಿತ ತರಬೇತಿ | ಎಲ್ಲರಿಗೂ ಅವಕಾಶ

ಅಗ್ನಿವೀರ್, ಪ್ಯಾರಾ ಮಿಲಿಟರಿ, ಪೊಲೀಸ್ ನೇಮಕಾತಿ | ಸಿಗಂಧೂರಿನಲ್ಲಿ ಉಚಿತ ತರಬೇತಿ | ಎಲ್ಲರಿಗೂ ಅವಕಾಶ

May 6, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL