No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೆರೆ ನಿರ್ವಸಿತರಿಗೆ 10 ತಿಂಗಳ ಬಾಡಿಗೆ, ಪರಿಹಾರ ಕಾರ್ಯ ಚುರುಕು: ಡಿಸಿ ಶಿವಕುಮಾರ್

kalpa News by kalpa News
August 21, 2019
in ಶಿವಮೊಗ್ಗ
0
ನೆರೆ ಇಳಿದ ನಂತರ: ಕಲ್ಪ ನ್ಯೂಸ್ ರಿಯಾಲಿಟಿ ಚೆಕ್, ನೆರೆಗೆ ಬಲಿಯಾದ ಗೋವುಗಳ ಸಂಖ್ಯೆ ಎಷ್ಟು ಗೊತ್ತಾ?
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದಾಗಿ ಉಂಟಾಗಿರುವ ಹಾನಿಯನ್ನು ಅಂದಾಜಿಸಲಾಗುತ್ತಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸುಮಾರು 5500 ಕುಟುಂಬಗಳು ನೆರೆಬಾಧಿತ ಎಂದು ಗುರುತಿಸಲಾಗಿದ್ದು, 2400 ಕುಟುಂಬಗಳಿಗೆ ಈಗಾಗಲೇ ತುರ್ತು ಪರಿಹಾರವಾಗಿ ತಲಾ 10 ಸಾವಿರ ರೂ. ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದರು.

ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳ ಸಮೀಕ್ಷೆ ಕಾರ್ಯ ಮಾಡಲಾಗಿದೆ. 492 ಮನೆಗಳಿಗೆ ಸಂಪೂರ್ಣ ಹಾನಿ ಉಂಟಾಗಿದ್ದು, 5ಲಕ್ಷ ರೂ. ಪರಿಹಾರ ಒದಗಿಸಲಾಗುವುದು. ಶೇ.25ರಷ್ಟು ಸಣ್ಣಪುಟ್ಟ ಹಾನಿಗೆ 25 ಸಾವಿರ ರೂ ಹಾಗೂ ಶೇ.25ರಿಂದ 75ರಷ್ಟು ಹಾನಿಗೆ ಒಂದು ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. 3ಸಾವಿರ ಮನೆಗಳು ಭಾಗಶಃ ಹಾನಿಗೀಡಾಗಿವೆ. ಮನೆ ಕಟ್ಟಲು ಅಸಮರ್ಥರಾದವರಿಗೆ ಜಿಲ್ಲಾಡಳಿತದ ವತಿಯಿಂದ ಮನೆ ನಿರ್ಮಿಸಿ ನೀಡಲಾಗುವುದು ಎಂದು ಹೇಳಿದರು.

10 ತಿಂಗಳ ಬಾಡಿಗೆ ಮೊತ್ತ ಪಾವತಿ: ಪ್ರವಾಹದಲ್ಲಿ ಮನೆಯನ್ನು ಸಂಪೂರ್ಣವಾಗಿ ಕಳೆದುಕೊಂಡು 5 ಲಕ್ಷ ರೂ. ಪರಿಹಾರಕ್ಕೆ ಅರ್ಹರಾದ ಕುಟುಂಬಗಳಿಗೆ ಮಾಸಿಕ 5 ಸಾವಿರ ರೂ. ಬಾಡಿಗೆ ಹಣವನ್ನು ಪಾವತಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ಈ ರೀತಿ ಬಾಡಿಗೆ ಹಣವನ್ನು ಗರಿಷ್ಟ 10 ತಿಂಗಳಿಗೆ ಸೀಮಿತಗೊಳಿಸಿ, ಮನೆಯನ್ನು ಮತ್ತೆ ನಿರ್ಮಿಸುವವರೆಗೆ ತಾತ್ಕಾಲಿಕ ವಸತಿಗಾಗಿ ನೀಡಲಾಗುವುದು. ಒಂದು ವೇಳೆ ನಿರ್ವಸಿತ ಕುಟುಂಬ 10 ತಿಂಗಳ ಅವಧಿಗೆ ಮುಂಚಿತವಾಗಿ ಮನೆ ನಿರ್ಮಿಸಿದರೆ, ಬಾಕಿ ಅವಧಿಯ ಬಾಡಿಗೆ ಮೊತ್ತವನ್ನು ಒಂದೇ ಕಂತಿನಲ್ಲಿ ಆ ಕುಟುಂಬಕ್ಕೆ ನೀಡಲಾಗುವುದು. ಪರ್ಯಾಯವಾಗಿ ನಿರ್ವಸಿತ ಕುಟುಂಬ ತಾತ್ಕಾಲಿಕ ತಗಡಿನ ಶೆಡ್ ವಸತಿ ನಿರ್ಮಾಣ ಮಾಡಿಕೊಂಡಲ್ಲಿ ಅವರಿಗೆ 50ಸಾವಿರ ರೂ. ನೀಡಲಾಗುವುದು. ಪ್ರವಾಹ ಪೀಡಿತ ಕುಟುಂಬಗಳಿಗೆ ಮನೆ ನಿರ್ಮಾಣಕ್ಕಾಗಿ ಪರಿಹಾರದ ಮೊದಲ ಕಂತನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಬಾಡಿಗೆ ಮನೆಯಲ್ಲಿದ್ದು ಮನೆ ಕಳೆದುಕೊಂಡಿರುವವರ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ. ಇವರಿಗೆ ವಸತಿ ಯೋಜನೆಯಡಿ ಮನೆಗಳನ್ನು ಒದಗಿಸುವ ಕುರಿತು ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಅವರು ಈಗಾಗಲೇ ಸೂಚನೆ ನೀಡಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಾನಿ ವಿವರ: ಅತಿವೃಷ್ಟಿ ಹಾಗೂ ಪ್ರವಾಹದಿಂದ 70 ಜಾನುವಾರುಗಳು ಹಾಗೂ 23ಸಾವಿರ ಕೋಳಿ ಸಾವಿಗೀಡಾಗಿವೆ. ಇವುಗಳ ಮಾಲಿಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರ ನೀಡುವ ಕಾರ್ಯ ಚಾಲನೆಯಲ್ಲಿದೆ. ಪ್ರವಾಹಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 10ಮಂದಿ ಸಾವಿಗೀಡಾಗಿದ್ದು, ಅವರ ಕುಟುಂಬದವರಿಗೆ ತಲಾ ಐದು ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಎರಡು ಮೃತದೇಹಗಳಿಗಾಗಿ ಎನ್‍ಡಿಆರ್‍ಎಫ್ ತಂಡ ಇನ್ನೂ ಹುಡುಕಾಟ ಮುಂದುವರೆಸಿದೆ ಎಂದು ಅವರು ಹೇಳಿದರು.

ಶಾಶ್ವತ ಪರಿಹಾರ ಪರಿಶೀಲನೆ: ಶಿವಮೊಗ್ಗ ನಗರದಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಮನೆಗಳು ಪದೇ ಪದೇ ನೆರೆಗೆ ತುತ್ತಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರಿಕೆ: ನೆರೆಯ ಬಳಿಕ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಆರೋಗ್ಯ ಇಲಾಖೆ ವತಿಯಿಂದ ಕ್ಲೋರಿನೇಶನ್, ಕೀಟನಾಶಕ ಸಿಂಪಡಿಕೆ ಕಾರ್ಯವನ್ನು ಯುದ್ದೋಪಾಧಿಯಲ್ಲಿ ಕೈಗೊಳ್ಳಲಾಗಿದೆ ಎಂದರು.

ಸಾರ್ವಜನಿಕರಿಂದ ಉತ್ತಮ ಸಹಕಾರ: ರಕ್ಷಣೆ, ಪರಿಹಾರ ಹಾಗೂ ಪುನರ್ವಸತಿ ಕಾರ್ಯದಲ್ಲಿ ಸಾರ್ವಜನಿಕರು, ಅನೇಕ ಸಂಘ ಸಂಸ್ಥೆಗಳು ಸಕ್ರಿಯವಾಗಿ ಕೈಜೋಡಿಸಿದ್ದಾರೆ. ಕೆಲವು ಸಾಹಸ ಅಕಾಡೆಮಿ ಸದಸ್ಯರು ಬೋಟ್‍ಗಳೊಂದಿಗೆ ಬಂದು ರಕ್ಷಣಾ ಕಾರ್ಯ ನಡೆಸಿದ್ದಾರೆ. ಎಲ್ಲರ ಸಹಕಾರದಿಂದಾಗಿ ರಕ್ಷಣೆ ಹಾಗೂ ಪರಿಹಾರ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಸಾಧ್ಯವಾಗಿದೆ. ಪರಿಹಾರ ಕಾರ್ಯದಲ್ಲಿ ಕೈಜೋಡಿಸಿರುವ ಎಲ್ಲರಿಗೂ ಜಿಲ್ಲಾಡಳಿತದ ವತಿಯಿಂದ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

Tags: Floods in ShivamoggaK B Sivakumar IASKannada NewsMalnad NewsShivamoggaಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಶಿವಮೊಗ್ಗಶಿವಮೊಗ್ಗ ನೆರೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೋಷಿಯಲ್ ಮೀಡಿಯಾದಲ್ಲಿ ಅಬ್ಬರಿಸುತ್ತಿದೆ ಚಿರಂಜೀವಿಯ ‘ಸೈ ರಾ ನರಸಿಂಹ ರೆಡ್ಡಿ’ ಟೀಸರ್

Next Post

ಆಗಸ್ಟ್‌ 24, 25: ಶ್ರೀವಿಜಯದ ‘ವರ್ಷ ವೈಭವ-19’ ಅಪರೂಪದ ನೃತ್ಯ ಕಾರ್ಯಕ್ರಮ ನೋಡಲು ಮರೆಯದಿರಿ

kalpa News

kalpa News

Next Post
ಆಗಸ್ಟ್‌ 24, 25: ಶ್ರೀವಿಜಯದ ‘ವರ್ಷ ವೈಭವ-19’ ಅಪರೂಪದ ನೃತ್ಯ ಕಾರ್ಯಕ್ರಮ ನೋಡಲು ಮರೆಯದಿರಿ

ಆಗಸ್ಟ್‌ 24, 25: ಶ್ರೀವಿಜಯದ ‘ವರ್ಷ ವೈಭವ-19’ ಅಪರೂಪದ ನೃತ್ಯ ಕಾರ್ಯಕ್ರಮ ನೋಡಲು ಮರೆಯದಿರಿ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL