ನವದೆಹಲಿ: ದೋಹಾದಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಕ್ವತಾರ್ ಏರ್‌ಲೈನ್‌ಸ್ ಗೆ ಸೇರಿದ ವಿಮಾನದಲ್ಲಿದ್ದ 11 ತಿಂಗಳ ಶಿಶು ಉಸಿರಾಟದ ಸಮಸ್ಯೆಯಿಂದಾಗಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ.
ವಿಮಾನ ಹೈದರಾಬಾದ್‌ನಲ್ಲಿ ಲ್ಯಾಂಡ್ ಆಗುವ ವೇಳೆಯಲ್ಲಿ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಲ್ಯಾಂಡ್ ಆದ ತತಕ್ಷಣವೇ ಮಗುವನ್ನು ವಿಮಾನ ನಿಲ್ದಾಣದಲ್ಲೇ ಇರುವ ಅಪೋಲೋ ಮೆಡಿಕಲ್ ಸೆಂಟರ್‌ಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ಮಗು ಕೊನೆಯುಸಿರೆಳಿದಿತ್ತು.

















