ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿಂದು 112 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2094ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಮೂವರು ಸಾವನ್ನಪ್ಪಿದ್ದರೆ, 32 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿಯೇ 61 ಪ್ರಕರಣಗಳು ಪತ್ತೆಯಾಗಿವೆ.
ಇನ್ನು, ಈವರೆಗೂ 395 ಕಂಟೈನ್ಮೆಂಟ್ ಝೋನ್’ಗಳನ್ನು ಮಾಡಲಾಗಿದ್ದು, ಡಿ ನೋಟಿಫೈಡ್ ಝೋನ್’ಗಳ ಸಂಖ್ಯೆ 101 ಆಗಿದೆ. ಇಂದು ಒಟ್ಟು 862 ಸ್ಯಾಂಪಲ್ ಸಂಗ್ರಹಿಸಲಾಗಿದ್ದು, 595 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 956 ಆಗಿದೆ ಎಂದು ಬುಲೆಟಿನ್ ತಿಳಿಸಿದೆ.
ತಾಲೂಕುವಾರು ವಿವರ: ಶಿವಮೊಗ್ಗ: 61 ಭದ್ರಾವತಿ: 23 ಶಿಕಾರಿಪುರ: 13 ಸಾಗರ: 06 ಸೊರಬ: 5 ಇತರೆ ಜಿಲ್ಲೆ: 4
Get In Touch With Us info@kalpa.news Whatsapp: 9481252093
Discussion about this post