ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾವರ್ಕರ್ ಫ್ಲೆಕ್ಸ್ ವಿಚಾರದಲ್ಲಿ ಉಂಟಾದ ಗಲಭೆ ಹಿನ್ನೆಲೆಯಲ್ಲಿ ನಗರದಲ್ಲಿ ಜಾರಿಯಲ್ಲಿರುವ 144 ಸೆಕ್ಷನ್ ಆಗಸ್ಟ್ 20ರವರೆಗೂ ವಿಸ್ತರಣೆಗೊಂಡಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದು, ಈಗಾಗಲೇ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಆಗಸ್ಟ್ 20ರ ಮುಂಜಾನೆ 6 ಗಂಟೆಯವರೆಗೂ ವಿಸ್ತರಣೆ ಮಾಡಲಾಗಿದೆ ಎಂದಿದ್ದಾರೆ.

ಇನ್ನು, ನಗರ ವ್ಯಾಪ್ತಿಯಲ್ಲಿ ಸಂಜೆ 6.30ರವರೆಗೂ ಮಾತ್ರ ಎಲ್ಲ ರೀತಿಯ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಐಜಿಪಿ ತ್ಯಾಗರಾಜನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸದ್ಯ ಸೆಕ್ಷನ್ ಜಾರಿಯಲ್ಲಿರುವ ಕಾರಣ ಈ ಸಮಯದವರೆಗೂ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ಹಾಗೆಯೇ ಬೈಕ್ ಗಳಲ್ಲಿ 40 ವರ್ಷ ವಯೋಮಾನದೊಳಗಿನ ಪುರುಷರನ್ನು ಹಿಂಬದಿ ಸವಾರರಾಗಿ ಕೂರಿಸಿಕೊಂಡು ಹೋಗುವಂತಿಲ್ಲ. ರಾತ್ರಿ 9 ಗಂಟೆಯೊಳಗೆ ಎಲ್ಲ ರೀತಿಯ ವ್ಯಾಪಾರದ ಅಂಗಡಿಗಳನ್ನು ಬಂದ್ ಮಾಡಬೇಕು. ರಾತ್ರಿ 9 ಗಂಟೆ ನಂತರ ಸಿನಿಮಾ ಮಂದಿರಗಳಲ್ಲಿ ಚಿತ್ರ ದರ್ಶನಕ್ಕೆ ಅವಕಾಶವಿಲ್ಲವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.









Discussion about this post