ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಪಥನದ ಅಂಚಿನಲ್ಲಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಯಾವುದೇ ಅನಾಹುತಗಳನ್ನು ತಡೆಯುವ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದಾದ್ಯಂತ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಕುರಿತಂತೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದಿದ್ದಾರೆ.
ಸೆಕ್ಷನ್ ಅನ್ವಯ ನಗರ ವ್ಯಾಪ್ತಿಯಲ್ಲಿ 3 ಜನಕ್ಕಿಂತಲೂ ಹೆಚ್ಚು ಮಂದಿ ಒಂದೆಡೆ ಸೇರುವಂತಿಲ್ಲ, ಪ್ರತಿಭಟನೆ ನಡೆಸುವಂತಿಲ್ಲ ಹಾಗೂ ಬಾರ್, ವೈನ್ ಸ್ಟೋರ್ ಮತ್ತು ಪಬ್’ಗಳನ್ನು ತೆರೆಯುವಂತಿಲ್ಲ ಎಂದು ಆದೇಶಿಸಿದ್ದಾರೆ.
Discussion about this post