ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಹಿಂದೂ ಕಾರ್ಯಕರ್ತನ ಹತ್ಯೆ ಪರಿಣಾಮ ಉಂಟಾದ ಅಹಿತರಕ ಘಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಲ್ಲೂ ಸಹ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Also Read: ಹರ್ಷ ಹತ್ಯೆ ಆರೋಪಿಗಳ ಶೀಘ್ರ ಬಂಧನ, ಶಾಂತಿ ಕಾಪಾಡಲು ಸಹಕರಿಸಿ: ಗೃಹ ಸಚಿವ ಆರಗ ಜ್ಞಾನೇಂದ್ರ
ಈ ಕುರಿತಂತೆ ಆದೇಶ ಹೊರಡಿಸಿರುವ ತಾಲೂಕು ದಂಡಾಧಿಕಾರಿಗಳು, ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಉಂಟಾಗಿರುವ ಪ್ರಕ್ಷುಬ್ದ ವಾತಾವರಣವನ್ನು ಅವಲೋಕಿಸಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಫೆ.21 ಬೆಳಗ್ಗೆ 8 ಗಂಟೆಯಿಂದ ಫೆ.22ರ ರಾತ್ರಿ 10 ಗಂಟೆಯವರೆಗೂ ನಗರ ವ್ಯಾಪ್ತಿ(35 ವಾರ್ಡ್‌ಗಳಲ್ಲಿ) 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಾಲೆಗಳಿಗೆ ರಜೆ ಘೋಷಣೆ
ಇನ್ನು, ನಿಷೇಧಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಸೋಮವಾರ 1ರಿಂದ 10ನೆಯ ತರಗತಿಯವರೆಗಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Also Read: ಧರ್ಮಾತೀತವಾಗಿ ಆರೋಪಿಗಳಿಗೆ ಶಿಕ್ಷೆಯಾಗಲಿ: ಹರ್ಷ ಹತ್ಯೆ ಬಗ್ಗೆ ಶಾಸಕ ಸಂಗಮೇಶ್ವರ ಆಗ್ರ
1 ನೆಯ ತರಗತಿ ಯಿಂದ 10 ನೇ ತರಗತಿಯವರೆನ ಭದ್ರಾವತಿ ನಗರ ಭಾಗದ ಸರ್ಕಾರಿ/ಅನುದಾನಿತ/ಅನುದಾನರಹಿತ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿರುತ್ತದೆ. ಎಸ್’ಎಸ್’ಎಲ್’ಸಿ ಪೂರ್ವಭಾವಿ ಪರೀಕ್ಷೆಗಳನ್ನು ಸಹ ಮುಂದೂಡಲಾಗುತ್ತದೆ. ಭದ್ರಾವತಿ ನಗರ ಭಾಗ ಹೊರತು ಪಡಿಸಿ ಭದ್ರಾವತಿ ಗ್ರಾಮಾಂತರ ವ್ಯಾಪ್ತಿಯಲ್ಲಿ ಶಾಲೆಗಳು ಯಥಾ ಪ್ರಕಾರ ಇರುತ್ತವೆ ಎಂದು ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post