ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈದ್ ಮೆರವಣಿಗೆಯ ವೇಳೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆದಿದ್ದು ಮುಂಜಾಗ್ರತಾ ಕ್ರಮವಾಗಿ ಈ ಭಾಗದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಇಂದು ಸಂಜೆ ವಾಹನ, ಮನೆ ಹಾಗೂ ಪೊಲೀಸರ ಮೇಲೆಯೇ ಕಲ್ಲು ತೂರಲಾಗಿದ್ದು, ಈ ಹಿನ್ನೆಲೆಯಲ್ಲಿ ಸೆಕ್ಷನ್ ಜಾರಿ ಮಾಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನೂ ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಆರ್’ಎಎಫ್ ಯೋಧರು ರೂಟ್ ಮಾರ್ಚ್ ನಡೆಸಿದ್ದಾರೆ.
ಅಲ್ಲದೆ ಮೈಕ್ ಮೂಲಕ ಸಾರ್ವಜನಿಕರಿಗೆ ಪೊಲೀಸರು ಎಚ್ಚರಿಕೆ ಸಂದೇಶ ನೀಡುತ್ತಿದ್ದಾರೆ.
ಈ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post