ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ.
ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಾರ್ಚ್ 21ರವರೆಗೂ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತ್ರ ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post