ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಯನ್ನು ಧ್ವಂಸಗೊಳಿಸಿದವರಿಂದ ದಂಡ ವಸೂಲಿ ಮಾಡಲು ಮುಂದಾಗಿರುವ ಉತ್ತರ ಪ್ರದೇಶ ಸರ್ಕಾರ ಈ ವಿಚಾರವಾಗಿ ನೋಟೀಸ್ ಜಾರಿ ಮಾಡಿದೆ.
ದೇಶದಲ್ಲಿಯೇ ಮೊದಲ ಬಾರಿಗೆ ಇಂತಹ ಒಂದು ಕಠಿಣ ನಿರ್ಧಾರ ಕೈಗೊಂಡಿರುವ ಸಿಎಂ ಯೋಗಿ ಆದಿತ್ಯನಾಥ್, ಡಿ.21ರಂದು ನಡೆದ ಪ್ರತಿಭಟನೆ ವೇಳೆಯಲ್ಲಿನ ಹಿಂಸಾಚಾರದಲ್ಲಿ ಸರ್ಕಾರಿ ಆಸ್ತಿಗೆ ಹಾನಿ ಉಂಟು ಮಾಡಿ ನಷ್ಟಗೊಳಿಸಿದ್ದಕ್ಕಾಗಿ 28 ಮಂದಿಗೆ ನೋಟೀಸ್ ನೀಡಿದ್ದು, 15.28 ಲಕ್ಷ ರೂ. ದಂಡ ತೆರುವಂತೆ ಸೂಚಿಸಿದೆ.
ರಾಂಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಸರ್ಕಾರಿ ಸ್ವತ್ಥನ್ನು ನಾಶಪಡಿಸಿದ 31 ಮಂದಿಯನ್ನು ಈಗಾಗಲೇ ಬಂಧಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ದುಷ್ಕರ್ಮಿಗಳನ್ನು ವಿಚಾರಣೆ ನಡೆಸಲಾಗಿದೆ. ಇದನ್ನು ಆಧರಿಸಿ, ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಂಡು, ಹರಾಜು ಹಾಕಿ ಸರ್ಕಾರಕ್ಕಾದ ನಷ್ಟ ಭರಿಸಿಕೊಳ್ಳಲು ಯೋಗಿ ಸರ್ಕಾರ ಕ್ರಮ ಕೈಗೊಂಡಿದೆ.
Discussion about this post