ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ವಿಧಾನಸಭೆಯಿಂದ ಶಿವಮೊಗ್ಗ ಶಾಸಕ ಎಸ್. ಎನ್. ಚೆನ್ನಬಸಪ್ಪ ಸೇರಿ 18 ಶಾಸಕರ ಅಮಾನತು ನಿರ್ಣಯವನ್ನು ಹಿಂಪಡೆಯಲಾಗಿದೆ.
ಈ ಕುರಿತಂತೆ ಸ್ಪೀಕರ್ ಯು.ಟಿ. ಖಾದರ್ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದು, ಆದೇಶ ಹೊರಡಿಸಲಾಗಿದೆ.
ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ ಕಾರಣದಿಂದ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಇದೀಗ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ. ಖಾದರ್ ತೀರ್ಮಾನ ಕೈಗೊಂಡಿದ್ದಾರೆ.
ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸ್ಪೀಕರ್ ಯು.ಟಿ ಖಾದರ್, ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಇತರೆ ಪ್ರಮುಖರ ನೇತೃತ್ವದಲ್ಲಿ ಸಂಧಾನ ಸಭೆ ನಡೆಯಿತು.
ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ಹಿಂಪಡೆಯಲು ಸ್ಪೀಕರ್ ಯು.ಟಿ. ಖಾದರ್ ಅವರು ತೀರ್ಮಾನ ಕೈಗೊಂಡಿದ್ದಾರೆ. ಈ ಮೂಲಕ ಬಿಜೆಪಿಯ 18 ಶಾಸಕರ ಅಮಾನತನ್ನು ಹಿಂಪಡೆಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















