ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 19 ವರ್ಷದ ಯುವಕನೊಬ್ಬನಿಗೆ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.
ಈ ಕುರಿತಂತೆ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದ್ದು, ಅಪರಾಧಿಗೆ 20 ವರ್ಷದ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ.
ಏನಿದು ಪ್ರಕರಣ?
2022ರಲ್ಲಿ ಭದ್ರಾವತಿ ತಾಲೂಕಿನ 15 ವರ್ಷದ ಬಾಲಕಿ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಆಕೆಯನ್ನು ಮದುವೆಯಾಗಿದ್ದ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಬಾಲಕಿ ದೂರು ನೀಡಿದ್ದಳು.ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಅಭಯ ಪ್ರಕಾಶ್ ಸೋಮನಾಳ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಚ್.ಆರ್. ಶ್ರೀಧರ್ ವಾದ ಮಂಡಿಸಿದ್ದು ಎಫ್’ಟಿಎಸ್’ಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು.
2025ರ ಸೆಪ್ಟೆಂಬರ್ 23ರಂದು ಆರೋಪಿಯ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಶಿಕ್ಷೆ ಪ್ರಮಾಣ ಘೋಷಿಸಿದರು.
ಅಪರಾಧಿಗೆ ಕಲಂ 6 ಪೋಕ್ಸೋ ಕಾಯಿದೆಗೆ 20 ವರ್ಷ ಕಾರಾವಾಸ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದು, ಆರೋಪಿಯಿಂದ 80,000 ರೂ. ದಂಡದ ಮೊತ್ತವನ್ನು ನೊಂದ ಬಾಲಕಿಗೆ ನೀಡುವಂತೆ ಆದೇಶಿಸಿದೆ. ಅಲ್ಲದೇ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸಂತ್ರಸ್ತ ಬಾಲಕಿಗೆ 4,00,000- ರೂ. ಪರಿಹಾರವನ್ನು ನೀಡುವಂತೆ ಆದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post