ನವದೆಹಲಿ: ಇಡಿಯ ದೇಶವನ್ನೇ ಬೆಚ್ಚಿ ಬೀಳಿಸಿದ್ದ 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಯಶಪಾಲ್ ಸಿಂಗ್ ಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.
ಪ್ರಕರಣದ ಕುರಿತಂತೆ ಮೊದಲ ತೀರ್ಪು ಪ್ರಕಟಿಸಿರುವ ವಿಶೇಷ ನ್ಯಾಯಾಲಯ, ಯಶಪಾಲ್‌ಗೆ ಗಲ್ಲು ಶಿಕ್ಷೆ ವಿಧಿಸಿದ್ದು, ನರೇಶ ಶೆರಾವತ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
1984ರ ನವೆಂಬರ್ 1ರಂದು ಇಬ್ಬರು ಸಿಖ್ ಯುವಕರ ಮೇಲೆ ದೆಹಲಿಯ ಮಹಿಪಾಲದಲ್ಲಿ ಯಶಪಾಲ್ ಸಿಂಗ್ ಹಾಗೂ ನರೇಶ್ ಶೆರಾವತ್ ಭೀಕರ ಹಲ್ಲೆ ನಡೆಸಿದ್ದರು. ಪರಿಣಾಮ ಹರದೇವ್ ಸಿಂಗ್ ಹಾಗೂ ಅವತಾರ್ ಸಿಂಗ್ ಎಂಬ ಯುವಕರು ಮೃತಪಟ್ಟಿದ್ದರು.
ಈ ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಇಬ್ಬರೂ ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ.
ಸಾಕ್ಷಿಗಳ ಕೊರತೆ ಎಂದು 1994ರಲ್ಲಿ ದೆಹಲಿ ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕಿದ್ದರು. ಆದರೆ, ಮೋದಿ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ 2015ರಲ್ಲಿ ಇದಕ್ಕಾಗಿ ವಿಶೇಷ ತನಿಖಾ ತಂಡವನ್ನು ರಚಿಸಿ ಗೃಹ ಸಚಿವಾಲಯ ಮರು ತನಿಖೆಗೆ ಆದೇಶಿಸಿತ್ತು.
1984ರ ಸಿಖ್‌ಖ್ ವಿರೋಧಿ ದಂಗೆಯಲ್ಲಿ ಸುಮಾರು 3,000 ಮಂದಿಯ ಹತ್ಯೆ ನಡೆದಿತ್ತು.
Discussion about this post