ಕುವೆಂಪು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸುಳ್ಳುಸುದ್ದಿ ಮತ್ತು ನೈಜತೆ ಪರಿಶೀಲನೆ ವಿಷಯ ಕುರಿತು ಫೆ. 23-24 ರಂದು ಎರಡು ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
Also Read:ಗಲಭೆ ಹಿನ್ನೆಲೆ: ಶಿವಮೊಗ್ಗಕ್ಕೆ 7 ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನೇಮಕ ಕುವೆಂಪು ವಿವಿಯ ಪ್ರೊ.ಎಸ್.ಪಿ. ಹಿರೇಮಠ ಸಭಾಂಗಣದಲ್ಲಿ ಫೆ. 23ರಂದು ಬೆಳಿಗ್ಗೆ 10.30 ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವಿದೆ. ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪನವರು ಕಾರ್ಯಾಗಾರವನ್ನು ಉದ್ಘಾಟಿಸಲಿದ್ದು, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಸತೀಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದಾರೆ. ಎರಡು ದಿನಗಳ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ತಂತ್ರಾಂಶ ವಿಶ್ಲೇಷಕ ಸತೀಶ್ ಕುಮಾರ್ ಜಿ., ಟೆಕ್ ಕನ್ನಡ ವಿಜ್ಞಾನ-ತಂತ್ರಜ್ಞಾನ ವೆಬ್‌ತಾಣದ ಪತ್ರಕರ್ತ ಕುಮಾರ್ ಎಸ್. ವಿಶೇಷ ಉಪನ್ಯಾಸಗಳನ್ನು ನೀಡಲಿದ್ದಾರೆ. ಕುಲಸಚಿವೆ ಅನುರಾಧ ಜಿ, ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಡಿ.ಎಸ್. ಪೂರ್ಣಾನಂದ, ಪ್ರೊ. ವರ್ಗೀಸ್, ಡಾ. ಸತ್ಯಪ್ರಕಾಶ್ ಎಂ.ಆರ್. ಪಾಲ್ಗೊಳ್ಳಲಿದ್ದಾರೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಪಾಲ್ಗೊಳ್ಳಲಿದ್ದಾರೆ.
Discussion about this post