ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಲಿರುವ ಎಲ್ಲ ವಿದ್ಯಾರ್ಥಿಗಳಿಗೆ 2 ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಲಾಗುವುದು ಎಂದು ಜಿಪಂ ಸಿಇಒ ಎಂ.ಎಲ್. ವೈಶಾಲಿ ಹೇಳಿದ್ದಾರೆ.
ಜಿಪಂ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಗೆ ಅವರು ಮಾಹಿತಿ ನೀಡಿದರು.
ಎಸ್’ಎಸ್’ಎಲ್’ಸಿ ಪರೀಕ್ಷೆ ನಡೆಸಲು ಈಗಾಗಲೇ ದಿನಾಂಕ ನಿಗಧಿಪಡಿಸಲಾಗಿದ್ದು, ಹೊರ ಊರುಗಳಿಂದ ಊರಿಗೆ ಹಿಂದುರಿಗಿ ಪರೀಕ್ಷೆಗೆ ಹಾಜರಾಗುವ ಹಾಗೂ ಸ್ಥಳೀಯವಾಗಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಶಾಸಕ ಕುಮಾರ್ ಬಂಗಾರಪ್ಪ ಅವರು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ ಅವರು, ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಅಲ್ಲದೇ ಪ್ರತಿ ವಿದ್ಯಾರ್ಥಿಗಳ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಉದ್ದೇಶಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಪ್ರತಿ ವಿದ್ಯಾರ್ಥಿಗೆ 2 ಮಾಸ್ಕ್ ಹಾಗೂ ಸ್ಯಾನಿಟೈಜರ್‌ನ್ನು ಒದಗಿಸಲಾಗುವುದು ಎಂದರು.
Get in Touch With Us info@kalpa.news Whatsapp: 9481252093
















