ನೋಯ್ಡಾ: ಬಾಂಗ್ಲಾದೇಶ ಮೂಲದ ಇಬ್ಬರು ನಟೋರಿಯಸ್ ಉಗ್ರರನ್ನು ಇಂದು ಮಧ್ಯಾಹ್ನ ಉತ್ತರ ಪ್ರದೇಶದ ನೋಯ್ಡಾದಲ್ಲಿ ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ.
ಬಂಧಿತರನ್ನು ಮುಷರಫ್ ಹುಸೇನ್ ಹಾಗೂ ರುಬೆಲ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ ಹಾಗೂ ಪಶ್ಚಿಮ ಬಂಗಾಳ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯನ್ನು ಇವರನ್ನು ಬಂಧಿಸಲಾಗಿದೆ.
ಸ್ವತಂತ್ರ ದಿನಾಚರಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಬಿಗಿಗೊಳಿಸಲಾಗಿದ್ದು, ಈ ವೇಳೆ ಇಬ್ಬರನ್ನು ಬಂಧಿಸಲಾಗಿದೆ.
Discussion about this post