Read - < 1 minute
ಶ್ರೀನಗರ: ಒಂದೆಡೆ ದೇಶ ಗಣರಾಜ್ಯೋತ್ಸವ ಸಂಭ್ರಮದಲ್ಲಿದ್ದರೆ ಇನ್ನೊಂದೆಡೆ ಕಣಿವೆ ರಾಜ್ಯ ಜಮ್ಮು ಕಾಶ್ಮಿರದಲ್ಲಿ ಅಡಗಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಬೇಟೆಯಾಡಿದೆ.
ಶ್ರೀನಗರ ವ್ಯಾಪ್ತಿಯಲ್ಲಿರುವ ಖೊನ್ಮೊಹ್ ಪ್ರದೇಶದಲ್ಲಿ ಇಬ್ಬರು ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಸೇನೆ ಕಾರ್ಯಾಚರಣೆ ನಡೆಸಿದೆ.
ಈ ವೇಳೆ ಗುಂಡಿನ ಚಕಮಕಿ ನಡೆದಿದೆ. ಅಂತಿಮವಾಗಿ ಇಬ್ಬರು ಉಗ್ರರನ್ನು ಎನ್’ಕೌಂಟರ್ ಮಾಡುವಲ್ಲಿ ಸೇನೆ ಯಶಸ್ವಿಯಾಗಿದೆ.
ಈ ಭಾಗದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.
Discussion about this post