ಚಿತ್ರದುರ್ಗ: ಜಿಲ್ಲಾ ಡಿಎಆರ್’ಗೆ 20 ವರ್ಷ ಸಂದ ಸಂಭ್ರಮದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಇದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್ 22ರಂದು ನಗರದ ತರಾಸು ರಂಗಮಂದಿರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಆಹ್ವಾನಿತರಾಗಿ ಬೆಂಗಳೂರು ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ.ಎ.ಎಸ್.ಎನ್ ಮೂರ್ತಿ ಆಗಮಸಲಿದ್ದು, ಅಧ್ಯಕ್ಷತೆಯನ್ನು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ಕೆ ಅರುಣ್ ವಹಿಸುವರು.
ಮುಖ್ಯ ಅತಿಥಿಗಳಾಗಿ ದಾವಣಗೆರೆ ಪೂರ್ವ ವಲಯದ ಪೊಲೀಸ್ ನಿರೀಕ್ಷಕ ಅಮ್ರಿತ್‌ಪಾಲ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಗಾವಿ, ನಿವೃತ್ತ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಎಂ.ಎಂ. ಗೋಕಾಕ್, ಪ್ರಾಂಶುಪಾಲರು ಮತ್ತು ಐಮಂಗಲದ ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲರು ಹಾಗೂ ಪೊಲೀಸ್ ಅಧೀಕ್ಷಕ ಪಿ. ಪಾಪಣ್ಣ, ಬೆಂಗಳೂರು ನಿವೃತ್ತ ಪೊಲೀಸ್ ಅಧೀಕ್ಷಕ ಎ.ಜಿ. ಈಶ್ವರಪ್ಪ, ನಿವೃತ್ತ ಪೊಲೀಸ್ ಉಪಾಧೀಕ್ಷಕ ಎಚ್.ಎಂ. ಜವರಯ್ಯ ಭಾಗವಹಿಸುವರು.
ಕಾರ್ಯಕ್ರಮದ ಅಂಗವಾಗಿ ಅಂದು ಬೆಳಗ್ಗೆ 9 ಗಂಟೆಯಿಂದ 10 ಗಂಟೆವರೆಗೆ ಸಿಬ್ಬಂದಿಗಳಿಂದ ರಕ್ತದಾನ ಶಿಬಿರ, ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
Discussion about this post