Read - < 1 minute
ಮೊರದಾಬಾದ್,ಸೆ.28: ಉತ್ತರ ಪ್ರದೇಶದ ಮೊರದಾಬಾದ್ನಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಆರೋಪ ಸಂಬಂಧ ಕಾಂಗ್ರೆಸ್ ಪಕ್ಷದ 200 ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ. ಇದರಿಂದ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ
ಉರಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮೊರದಾಬಾದ್ನಲ್ಲಿ ಕಾಂಗ್ರಸ್ನ ಸ್ಥಳೀಯ ಘಟಕ ರ್ಯಾಲಿಯನ್ನು ಆಯೋಜಿಸಿತ್ತು.
ಪಾಕಿಸ್ಥಾನ ಪರ ಘೋಷಣೆಗಳನ್ನು ಕೂಗಿರುವ ಸಂಬಂಧ ದೈನಿಕ್ ಜಾಗರನ್ ಹಾಗೂ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಭಿತ್ತರವಾದ ವರದಿ ಆಧಾರದ ಮೇಲೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೇಶ ದ್ರೋಹ ಪ್ರಕರಣವನ್ನು ದಾಖಲಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಮೊರದಾಬಾದ್ನಲ್ಲಿನ ಕಾಶಿಪುರ ರಸ್ತೆಯಿಂದ ಎಸ್ಡಿಎಂ ಕಚೇರಿವರೆಗೂ ರ್ಯಾಲಿ ನಡೆಸಿದ್ದರು. ರ್ಯಾಲಿಯಲ್ಲಿ ಕಾಂಗ್ರೆಸ್ನ ಹಲವು ಕಾರ್ಯಕರ್ತರು ಪಾಕಿಸ್ಥಾನ ಜಿಂದಾಬಾದ್ ಘೋಷಣೆಗಳನ್ನು ಕೂಗಿರುವ ಬಗ್ಗೆ ಪೊಲೀಸರಿಗೆ ವೀಡಿಯೋ ಸಾಕ್ಷಿ ಲಭ್ಯವಾಗಿದೆ.
Discussion about this post