ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್ ತಡೆಗಟ್ಟಲು ಇಡಿಯ ದೇಶದಾದ್ಯಂತ ಮೂರು ವಾರಗಳ ಕಾಲ ಲಾಕ್’ಡೌನ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಸರಬರಾಜಿಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸುವರ್ಣ ನ್ಯೂಸ್ ಚಾನಲ್’ಗೆ ಮಾತನಾಡಿರುವ ಅವರು, ಯಾರಿಗೂ, ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಅಗತ್ಯ ವಸ್ತುಗಳನ್ನು ಪೂರೈಸುವ ಕುರಿತಾಗಿ ಚಿಂತಿಸುತ್ತೇವೆ. ಮನೆ ಮನೆಗೆ ತಲುಪಿಸುವ ವ್ಯವಸ್ಥೆ ಅಥವಾ ಮನೆಯಿಂದ ಓರ್ವರು ಮಾತ್ರ ಹೊರಕ್ಕೆ ಬಂದ ಪಡೆಯುವ ಸಾಧ್ಯತೆ ಕುರಿತಾಗಿ ಅಧಿಕಾರಿಗಳ ಜೊತೆಯಲ್ಲಿ ಚರ್ಚಿಸಿ ನಿರ್ಧರಿಸುತ್ತೇವೆ ಎಂದಿದ್ದಾರೆ.
ಪ್ರಧಾನಿಯವರು ಘೋಷಣೆ ಮಾಡಿದಂತೆ 21 ದಿನಗಳ ಕಾಲ ಯಾರೂ ಮನೆಯಿಂದ ಹೊರಕ್ಕೆ ಬರಬೇಡಿ. ಮಹಾಮಾರಿ ತಡೆಗೆ ಎಲ್ಲರೂ ಸಹಕಾರ ನೀಡಿ ಎಂದು ಅವರು ಮನವಿ ಮಾಡಿದರು.
Get in Touch With Us info@kalpa.news Whatsapp: 9481252093
Discussion about this post