ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಸರ್ವೆಗೆ ತೆರಳಿದ್ದ ವೇಳೆ ಚೂರಿ ಇಳಿತಕ್ಕೆ ಒಳಗಾಗಿ ಸಾವನ್ನಪ್ಪಿದ ಬಂಗಾರಪೇಟೆ ತಹಶೀಲ್ದಾರ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಓರ್ವರಿಗೆ ಸರ್ಕಾರಿ ನೌಕರಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಂಗಾರಪೇಟೆ ತಾಲ್ಲೂಕಿನ ಕಳವಂಚಿ ಗ್ರಾಮದ ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ, ತಹಶೀಲ್ದಾರರಾದ ಶ್ರೀ ಚಂದ್ರಮೌಳೇಶ್ವರ್ ಅವರು ಸರ್ವೇ ಕಾರ್ಯಕ್ಕೆ ಹೋದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಅವರನ್ನು ಚಾಕುವಿನಿಂದ ಇರಿದು ಸಾಯಿಸಿರುವುದು ಅತ್ಯಂತ ವಿಷಾದನೀಯ. ದೇವರು, ಚಂದ್ರಮೌಳೇಶ್ವರ್ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಆದ ಹಾನಿ ಮತ್ತು ದುಃಖವನ್ನು ಭರಿಸುವ ಶಕ್ತಿಯನ್ನು ಕೊಡಲಿ ಎಂದಿದ್ದಾರೆ.
ಮೃತರ ಅಂತ್ಯ ಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಲು ಸೂಚಿಸಲಾಗಿದ್ದು, ಆರೋಪಿಗಳ ಮೇಲೆ ಕಾನೂನು ಅಡಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
Get In Touch With Us info@kalpa.news Whatsapp: 9481252093

















