ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಾಮಾನ್ಯವಾಗಿ ಮೇ ತಿಂಗಳಿನಲ್ಲಿ ಸರಾಸರಿ 75 ಮಿಮೀ ಮಳೆಯಾಗುತ್ತಿತ್ತು. ಆದರೆ, ಈ ವರ್ಷ 250 ಮಿಮೀ ಮಳೆಯಾಗಿ, ನೆರೆ ಉಂಟಾಗಿದೆ. ಪರಿಣಾಮವಾಗಿ ಅಂದಾಜು 10 ವಾರ್ಡ್‌ಗಳಲ್ಲಿ 4 ಸಾವಿರ ಮನೆಗಳು ಹಾನಿಗೆ ಒಳಗಾಗಿದೆ ಎಂದಿದ್ದಾರೆ.ಹಾನಿಗೊಳಗಾಗಿ ಪ್ರದೇಶಗಳಿಗೆ ಶಾಸಕ ಕೆ.ಎಸ್. ಈಶ್ವರಪ್ಪ ಹಾಗೂ ಮೇಯರ್ ಸುನಿತಾ ಅಣ್ಣಪ್ಪ ಅವರುಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಹವಾಮಾನ ಇಲಾಖೆ ವತಿಯಿಂದ ಇಂದು ಮಧ್ಯಾಹ್ನದವರೆಗೂ ರೆಡ್ ಅಲರ್ಟ್ ಇದೆ. ಎಂತಹುದ್ದೇ ಪರಿಸ್ಥಿತಿಯನ್ನು ನಿರ್ವಹಿಸಲು ಆಡಳಿತ ಸಿದ್ದವಾಗಿದೆ. ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
Also Read:ಚಿಕ್ಕಮಗಳೂರಿನ ಸೈಂಟ್ ಮೇರಿಸ್ ಶಾಲೆಗೆ ಶೇ.100 ಫಲಿತಾಂಶ: ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿವರು ನಗರದಲ್ಲಿ 7 ಹಾಗೂ ಜಿಲ್ಲೆಯಲ್ಲಿ ಒಟ್ಟು 17 ಮನೆಗಳು ಮಳೆಯಿಂದಾಗಿ ಕುಸಿದಿವೆ. ಒಬ್ಬರು ಬಲಿಯಾಗಿದ್ದಾರೆ. 9 ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು, ಮಳೆಯಿಂದಾಗಿ ಶಿಕಾರಿಪುರ ಹಾಗೂ ಸೊರಬ ತಾಲೂಕಿನಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯುಂಟಾಗಿದೆ. 1 ಸಾವಿರ ಹೆಕ್ಟೇರ್ ಜಮೀನು ಜಲಾವೃತಗೊಂಡಿದ್ದು, ಸುಮಾರು 80 ಸಾವಿರ ಕ್ವಿಂಟಾಲ್ ಮೆಕ್ಕೆಜೋಳ ಹಾನಿಗೊಳಗಾಗಿದೆ. ಇದಕ್ಕೆಲ್ಲಾ ಪರಿಹಾರಕ್ಕಾಗಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
Discussion about this post