ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವೈರಸ್’ನಿಂದ ಕಂಗೆಟ್ಟಿರುವ ಜನರಿಗೆ ನೆರವಾಗುವ ಸಲುವಾಗಿ ಸರಳ, ಸಜ್ಜನ ರಾಜಕಾರಣಿ, ಖ್ಯಾತ ಕೈಗಾರಿಕೋದ್ಯಮಿ ಹಾಗೂ ಎಂಎಲ್’ಸಿ ಎಸ್. ರುದ್ರೇಗೌಡ ಅವರು ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19 ಕ್ಕೆ ಶಾಸಕರ ಪ್ರದೇಶಾಭಿವೃದ್ದಿ ಅನುದಾನದಡಿ 25.00 ಲಕ್ಷ ರೂಗಳನ್ನು ಹಾಗೂ ವೈಯಕ್ತಿಕವಾಗಿ ಒಂದು ಲಕ್ಷ ರೂಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರೋನಾ ಸಾಂಕ್ರಾಮಿಕ ರೋಗವು ಕರ್ನಾಟಕದಲ್ಲಿ ಉಲ್ಬಣಿಸುತ್ತಿರುವ ಹಿನ್ನಲೆಯಲ್ಲಿ ಈ ಕರೋನಾ ಮಹಾಮಾರಿಯನ್ನು ತಡೆಗಟ್ಟಲು, ಹತೋಟಿಗೆ ತರಲು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಆಧರಣೀಯ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಕರ್ನಾಟಕ ಸರ್ಕಾರ ಯುದ್ದೋಪಾದಿಯಲ್ಲಿ ದಿಟ್ಟ ಕ್ರಮಗಳನ್ನು ಕೈಗೊಂಡಿದ್ದು, ಈ ವೈರಾಣು ಹರಡುವುದನ್ನು ನಿಯಂತ್ರಿಸಲು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದರು.
ಕೋವಿಡ್-19 ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಡಳಿತ, ಜಿಲ್ಲಾ ರಕ್ಷಣಾ ಇಲಾಖೆ, ವೈದ್ಯವೃಂದ ಹಾಗೂ ಶೂಶ್ರಷಕರು, ಸ್ವಚ್ಚತೆಯನ್ನು ಕಾಪಾಡುವಲ್ಲಿ ಸಹಕರಿಸುತ್ತಿರುವ ಮಹಾನಗರ ಪಾಲಿಕೆಗಳ ಎಲ್ಲಾ ಸಿಬ್ಬಮದಿವರ್ಗದವರಿಗೆ ಅಭಿನಂದನೆ ಸಲ್ಲಿಸುತ್ತಾ ಪರಮಾತ್ಮನು ಅವರಿಗೆ ಆರೋಗ್ಯವನ್ನು ಕರುಣಿಸಲೆಂದು ಹಾರೈಸುತ್ತೇನೆ ಎಂದರು.
Get in Touch With Us info@kalpa.news Whatsapp: 9481252093
Discussion about this post