ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ 27 ವರ್ಷದ ಯುವಕನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹20,000 ದಂಡ ವಿಧಿಸಿ ಶಿವಮೊಗ್ಗದ (Shivamogga) ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
2023ರ ನವೆಂಬರ್ 2ರಂದು ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದ ವೇಳೆ, 27 ವರ್ಷದ ಆರೋಪಿ ಏಕಾಏಕಿ ಮನೆಗೆ ನುಗ್ಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಬಳಿಕ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿತ್ತು.
Shivamogga | ಠಾಣೆಯಲ್ಲಿ ದೂರು ದಾಖಲು
ಈ ಕುರಿತು ಸಂತ್ರಸ್ತೆಯ ದೂರಿನ ಮೇರೆಗೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಶಿವಮೊಗ್ಗ ಉಪವಿಭಾಗ-ಬಿ ಡಿವೈಎಸ್‌ಪಿ ಸುರೇಶ್ ಎಂ. ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
Also read>> Indian Railways Recruits 5.56 Lakh Since 2014 | 1.61 Lakh More Vacancies Underway
ಪ್ರಕರಣದ ವಿಚಾರಣೆ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಪಿ.ಓ. ಪುಷ್ಪಾವತಿ ವಾದ ಮಂಡಿಸಿದ್ದರು.
ಇದಲ್ಲದೆ, ಸಂತ್ರಸ್ತ ಮಹಿಳೆಗೆ ₹15,000 ಪರಿಹಾರಧನ ನೀಡುವಂತೆ ನ್ಯಾಯಾಲಯ ಆದೇಶಿಸಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
