No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, August 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ ಜಿಲ್ಲೆಯಲ್ಲಿ 28 ಸಾವಿರ ಹೊಸ ಮತದಾರರ ಸೇರ್ಪಡೆ: ಶಾಲಿನಿ ರಜನೀಶ್

kalpa News by kalpa News
February 9, 2019
in Small Bytes, ಶಿವಮೊಗ್ಗ
0
ಶಿವಮೊಗ್ಗ ಜಿಲ್ಲೆಯಲ್ಲಿ 28 ಸಾವಿರ ಹೊಸ ಮತದಾರರ ಸೇರ್ಪಡೆ: ಶಾಲಿನಿ ರಜನೀಶ್
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೊಸದಾಗಿ 28,805 ಮಂದಿಯನ್ನು ಸೇರಿಸಲಾಗಿದ್ದು, ಇದೇ ಅವಧಿಯಲ್ಲಿ ಮರಣ ಇತ್ಯಾದಿ ಕಾರಣಗಳಿಂದಾಗಿ 22,275 ಮಂದಿಯನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇದರಿಂದಾಗಿ ಒಟ್ಟು 6530 ಮಂದಿ ಮತದಾರರ ಪಟ್ಟಿಯಲ್ಲಿ ಹೆಚ್ಚುವರಿಯಾಗಿ ಸೇರ್ಪಡೆಯಾದಂತಾಗಿದೆ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾಗಿರುವ ಶಾಲಿನಿ ರಜನೀಶ್ ತಿಳಿಸಿದರು.

ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯ ಮತದಾರರ ಸಂಖ್ಯೆ 14,18,455 ಇತ್ತು. ಇದೀಗ 14,28,985 ಆಗಿದೆ. ಜಿಲ್ಲೆಯ ಜನಸಂಖ್ಯೆ 18,49,268 ಇದ್ದು, ಮತದಾರರ ಸಂಖ್ಯೆ ಮತ್ತು ಜನಸಂಖ್ಯೆ ನಡುವಣ ಅನುಪಾತ ಶೇ.77ರಷ್ಟಿದೆ. ಇದು ರಾಜ್ಯದ ಅನುಪಾತಕ್ಕಿಂತ ಹೆಚ್ಚಿದ್ದು, ಮೃತ ಮತದಾರರು, ವಲಸೆ ಹೋಗಿರುವವರು ಇತ್ಯಾದಿ ಮತದಾರರನ್ನು ತೆಗೆದು ಹಾಕುವ ಕಾರ್ಯವನ್ನು ವ್ಯವಸ್ಥಿತವಾಗಿ ಮಾಡಲು ಮತಗಟ್ಟೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದವರು ಹೇಳಿದರು.

ಯುವ ಮತದಾರರ ಸೇರ್ಪಡೆ:
ಜನಸಂಖ್ಯೆಗೆ ಅನುಗುಣವಾಗಿ 18-19ವಯೋಮಾನದ ಹೊಸ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಕಾರ್ಯ ನಿರೀಕ್ಷೆಯಂತೆ ಆಗಿಲ್ಲ. 11,464 ಹೊಸ ಮತದಾರರನ್ನು ಸೇರ್ಪಡೆಗೊಳಿಸಲಾಗಿದ್ದು, ಕಳೆದ ಮೂರು ವರ್ಷಗಳ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂಕಿಅಂಶಗಳನ್ನು ತಾಳೆ ಹಾಕಿದರೆ ಇನ್ನೂ ಸುಮಾರು 15ಸಾವಿರದಷ್ಟು ಹೊಸ ಮತದಾರರನ್ನು ಸೇರ್ಪಡೆಗೊಳಿಸುವ ಅವಕಾಶ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯುವ ಮತದಾರರನ್ನು ಸೇರ್ಪಡೆಗೊಳಿಸಲು ಶಾಲಾ ಕಾಲೇಜುಗಳಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದವರು ಹೇಳಿದರು.

ಪರಿಶೀಲನೆ:
ಅಧಿಕಾರಿಗಳ ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪರಿಶೀಲನೆ ನಡೆಸಿದ ಶಾಲಿನಿ ರಜನೀಶ್ ಅವರು, ನಗರ ವ್ಯಾಪ್ತಿಯಲ್ಲಿ ಯುವ ಮತದಾರರ ಸೇರ್ಪಡೆ ನಿಗದಿತ ಪ್ರಮಾಣದಲ್ಲಿ ಆಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿರುವ ಯುವಕ ಸಂಘಗಳು, ಸ್ತ್ರೀ ಶಕ್ತಿ ಸಂಘಗಳಲ್ಲಿ ಮತದಾರರ ಪಟ್ಟಿಗೆ ಇನ್ನೂ ಸೇರ್ಪಡೆಯಾಗದಿರುವವರನ್ನು ಸೇರಿಸಲು ಕ್ರಮ ಕೈಗೊಳ್ಳಬೇಕು. ಕಾರ್ಮಿಕ ಇಲಾಖೆ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ಸಭೆಯನ್ನು ನಡೆಸಿ ಪ್ರತಿಯೊಬ್ಬ ಕಾರ್ಮಿಕರು/ನೌಕರರು ಮತದಾನವನ್ನು ಮಾಡಲು ಶಾಸನಾತ್ಮಕ ಅವಕಾಶ ನೀಡುವ ಬಗ್ಗೆ ತಿಳುವಳಿಕೆ ನೀಡಬೇಕು. ಕೈಗಾರಿಕಾ ಇಲಾಖೆ ಅಧಿಕಾರಿಗಳು ಎಲ್ಲಾ ಕೈಗಾರಿಕಾ ಕೇಂದ್ರಗಳಲ್ಲಿ ಜಾಗೃತಿ ಸಭೆಗಳನ್ನು ನಡೆಸಿ ಮತದಾರರ ಪಟ್ಟಿಯಲ್ಲಿ ಹೊಸ ಸೇರ್ಪಡೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಅಪರ ಜಿಲ್ಲಾಧಿಕಾರಿ ಅನುರಾಧ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

(ವರದಿ: ಡಾ.ಸುಧೀಂದ್ರ)

Tags: Loksabha election 2019Shalini Rajneesh IASShivamoggaಜಿಲ್ಲಾಧಿಕಾರಿ ಕೆ.ಎ.ದಯಾನಂದಮತದಾರರ ಸೇರ್ಪಡೆಶಾಲಿನಿ ರಜನೀಶ್ಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೂರನೆಯ ಬಾರಿ ಇಡಿ ಮುಂದೆ ವಿಚಾರಣೆಗೆ ಹಾಜರಾದ ವಾದ್ರಾ

Next Post

ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಅಹವಾಲಿದ್ದರೆ ಈ ನಂಬರ್’ಗೆ ಕರೆ ಮಾಡಿ

kalpa News

kalpa News

Next Post
ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಅಹವಾಲಿದ್ದರೆ ಈ ನಂಬರ್’ಗೆ ಕರೆ ಮಾಡಿ

ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಅಹವಾಲಿದ್ದರೆ ಈ ನಂಬರ್'ಗೆ ಕರೆ ಮಾಡಿ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL