ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ #2ndPUCResult ಇಂದು ಪ್ರಕಟಗೊಂಡಿದ್ದು, ಜಿಲ್ಲೆ 8ನೆಯ ಸ್ಥಾನವನ್ನು ಪಡೆದುಕೊಂಡಿದೆ.
ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ಶೇ.83.13ರಷ್ಟು ಫಲಿತಾಂಶ ದಾಖಲಿಸುವ ಮೂಲಕ ರಾಜ್ಯದಲ್ಲಿ 8ನೆಯ ಸ್ಥಾನವನ್ನು ಗಳಿಸಿದೆ.
2022ರ ಫಲಿತಾಂಶದಲ್ಲಿ ಶಿವಮೊಗ್ಗ #Shivamogga ಜಿಲ್ಲೆ ಶೇ.70.14ರಷ್ಟು ಫಲಿತಾಂಶ ದಾಖಲಿಸಿತ್ತು. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಜಿಲ್ಲೆ ಶೇ.12.99ರಷ್ಟು ಫಲಿತಾಂಶವನ್ನು ಹೆಚ್ಚಿಸಿಕೊಂಡಿದೆ.
ಕಾಲೇಜುವಾರು ಹಾಗೂ ವಿದ್ಯಾರ್ಥಿವಾರು ಫಲಿತಾಂಶ ಇನ್ನಷ್ಟೇ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post