ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಮ್ಯಾನ್ಮಾರ್ ಗಡಿಯ ನಾಲ್ಕನೆಯ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ಮೋಸದ ದಾಳಿ ನಡೆಸಿದ್ದು, ಮೂವರು ಯೋಧರು ವೀರಸ್ವರ್ಗ ಸೇರಿದ್ದಾರೆ.
ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ ಯೋಧರು ಗಸ್ತಿನಲ್ಲಿದ್ದರು. ಈ ವೇಳೆ ಹೊಂಚು ಹಾಕಿ ದಾಳಿ ನಡೆಸಿ, ಐಇಡಿ ಸ್ಪೋಟಿಸಿದ್ದಾರೆ. ಪರಿಣಾಮವಾಗಿ ಮೂವರು ಯೋಧರು ವೀರಸ್ವರ್ಗ ಸೇರಿದ್ದಾರೆ. ಘಟನೆಯಲ್ಲಿ ನಾಲ್ವರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.
ಮಯನ್ಮಾರ್ ಬಂಡುಕೋರರಿಗೆ ಚೀನಾ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದ್ದು ಈ ಮೂಲಕ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುತ್ತಿದೆ ಎಂಬ ಹೇಳಿಕೆ ಬೆನ್ನಲ್ಲೇ ಇದೀಗ ಉಗ್ರರು ಭಾರತೀಯ ಸೇನೆ ಮೇಲೆ ದಾಳಿ ನಡೆಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post