ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಷ್ಟ್ರ ರಾಜಧಾನಿ ನವದೆಹಲಿಯ ವಸಂತ್ ಕುಂಜ್‌ನಲ್ಲಿರುವ ಶ್ರೀ ವೇದವ್ಯಾಸ ಗುರುಕುಲ ಹಾಗೂ ಶ್ರೀ ಕೃಷ್ಣಧಾಮದಲ್ಲಿ ಉಡುಪಿಯ ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ತಮ್ಮ 39ನೇ ಚಾತುರ್ಮಾಸ್ಯ (Chaturmasya) ವ್ರತವನ್ನು ಸಂಕಲ್ಪಿಸಿದರು.
ಗುರುಪೂರ್ಣಿಮೆಯ ವಿಶೇಷ ಸಂದರ್ಭದಲ್ಲಿ ನಡೆದ ಚಾತುರ್ಮಾಸ್ಯ ವ್ರತದ ಉದ್ಘಾಟನಾ ಸಮಾರಂಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದರು.
ಚಾತುರ್ಮಾಸ್ಯ ವ್ರತ ಸಂಕಲ್ಪ ಮಾಡಿದ ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಸಂಸದರು, ಶ್ರೀಗಳಿಗೆ ವಿಶೇಷ ಪ್ರಣಾಮ ಸಲ್ಲಿಸಿ ಗೌರವ ಅರ್ಪಿಸಿದರು. ಈ ವೇಳೆ ಶ್ರೀಗಳ ದೆಹಲಿ ಚಾತುರ್ಮಾಸ್ಯ ವ್ರತವು ಯಶಸ್ವಿಯಾಗಿ ನೆರವೇರಲಿ ಎಂದು ಭಕ್ತಿಪೂರ್ವಕ ಶುಭಾಶಯಗಳನ್ನು ತಿಳಿಸಿದರು.
Chaturmasya : ಗಣ್ಯರ ಉಪಸ್ಥಿತಿಯಲ್ಲಿ ಸ್ವಾಗತ ಸಮಾರಂಭ
ಪೇಜಾವರ ಶ್ರೀಗಳ ದೆಹಲಿ ಚಾತುರ್ಮಾಸ್ಯ ವ್ರತದ ಅಂಗವಾಗಿ ನಡೆದ ಸ್ವಾಗತ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ರಾಜಕೀಯ, ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರು ಭಾಗವಹಿಸಿದ್ದರು.
Also read>> ಪ್ರಹ್ಲಾದ್ ಜೋಶಿ, ಅನುರಾಗ್ ಠಾಕೂರ್ ಸೇರಿ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಸಮಾರಂಭದಲ್ಲಿ ಪೇಜಾವರ ಶ್ರೀಗಳ ಧಾರ್ಮಿಕ ಸೇವೆ, ಸಮಾಜಮುಖಿ ಕಾರ್ಯಗಳು ಹಾಗೂ ಸನಾತನ ಧರ್ಮದ ಪ್ರಚಾರ ಕಾರ್ಯಗಳ ಕುರಿತು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಸೆಪ್ಟೆಂಬರ್ 26ರವರೆಗೆ ದೆಹಲಿಯಲ್ಲಿ ಶ್ರೀಗಳ ವಾಸ್ತವ್ಯ
ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ನಿನ್ನೆಯಿಂದ ಸೆಪ್ಟೆಂಬರ್ 26ರವರೆಗೆ ದೆಹಲಿಯಲ್ಲೇ ವಾಸ್ತವ್ಯ ಮಾಡಲಿದ್ದು, ತಮ್ಮ ನಿತ್ಯಾನುಷ್ಠಾನ, ಧಾರ್ಮಿಕ ಚಟುವಟಿಕೆಗಳು ಹಾಗೂ ಧರ್ಮ ಪ್ರಚಾರ ಕಾರ್ಯಗಳನ್ನು ನೆರವೇರಿಸಲಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ದೆಹಲಿಯಲ್ಲಿ ಪೇಜಾವರ ಶ್ರೀಗಳು ಚಾತುರ್ಮಾಸ್ಯ ವ್ರತ ಕೈಗೊಂಡಿರುವುದು ಭಕ್ತರಿಗೆ ವಿಶೇಷ ಅನುಗ್ರಹದ ಸಂದರ್ಭವಾಗಿದೆ ಎಂದು ಹೇಳಿದರು.
“ಶ್ರೀಗಳ ಚಾತುರ್ಮಾಸ್ಯ ವ್ರತದಿಂದ ದೆಹಲಿಯ ಭಕ್ತರಿಗೆ ಉಡುಪಿ ಶ್ರೀ ಕೃಷ್ಣನ ಹಾಗೂ ಗುರುಗಳ ವಿಶೇಷ ಅನುಗ್ರಹ ದೊರೆಯಲಿದೆ. ಶ್ರೀಗಳ ಧಾರ್ಮಿಕ ಸೇವೆಯಿಂದ ದೇಶದಲ್ಲಿ ಶಾಂತಿ, ಸಮೃದ್ಧಿ, ಧರ್ಮ ಮತ್ತು ಸಾಂಸ್ಕೃತಿಕ ಜಾಗೃತಿ ಮತ್ತಷ್ಟು ವೃದ್ಧಿಯಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂಸದರು ಹೇಳಿದರು.
ಪೇಜಾವರ ಶ್ರೀಗಳ 39ನೇ ಚಾತುರ್ಮಾಸ್ಯ ವ್ರತವು ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಮಹತ್ವದ ಕಾರ್ಯಕ್ರಮವಾಗಿದ್ದು, ದೆಹಲಿಯ ಭಕ್ತರಲ್ಲಿ ಹೆಚ್ಚಿನ ಭಕ್ತಿ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳಿಗೆ ವೇದಿಕೆಯಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









