ಕಲ್ಪ ಮೀಡಿಯಾ ಹೌಸ್ | ಮೈಸೂರು |
ಶ್ರೀರಾಂಪುರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿನ ಸುಮಾರು 4 ಕಿಲೋ ಮೀಟರ್ ರಿಂಗ್ ರಸ್ತೆಯನ್ನು ವಿವಿಧ ಸಮಿತಿಗಳ ಸಹಯೋಗದಲ್ಲಿ ಸ್ವಚ್ಛ ಮಾಡುವ ಮೂಲಕ ಉತ್ತಮ ಸಂದೇಶವನ್ನು ರವಾನೆ ಮಾಡಲಾಗಿದೆ.
ಹೌದು… ಶ್ರೀರಾಂಪುರ ಪಟ್ಟಣ ಪಂಚಾಯ್ತಿ, ಮೂಕಾಂಬಿಕಾ ಸಮೃದ್ಧಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿ, ವಿಶ್ವವಿದ್ಯಾಲಯ ಬಡಾವಣೆ ನಿವಾಸಿಗಳ ಸಂಘ ಹಾಗೂ ಕ್ರೈಸ್ಟ್ ಕಾಲೇಜು ವಿದ್ಯಾರ್ಥಿಗಳ ಸಹಯೋಗದಲ್ಲಿ ಈ ಅಭಿಯಾನವನ್ನು ನಡೆಸಲಾಯಿತು.
ರಿಂಗ್ ರಸ್ತೆಯ ಸುಮಾರು 4 ಕಿಲೋ ಮೀಟರ್ ವ್ಯಾಪ್ತಿಯ ರಸ್ತೆಯನ್ನು ಸ್ವಚ್ಛಗೊಳಿಸಲಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಸಂದರ್ಭದಲ್ಲಿ ಶ್ರೀರಾಂಪುರ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಶ್ರೀಧರ್, ಆರೋಗ್ಯಾಧಿಕಾರಿ ಪರಮೇಶ್ವರ್, ಸಮುದಾಯ ಅಧಿಕಾರಿ ಶ್ರೀನಿವಾಸ್, ಕಂದಾಯ ಅಧಿಕಾರಿ ಕುಮಾರ್, ಮೂಕಾಂಬಿಕಾ ಸಮೃದ್ದಿ ಬಡಾವಣೆಯ ನಿವಾಸಿಗಳ ಹಿತರಕ್ಷಣ ಸಮಿತಿ ಅಧ್ಯಕ್ಷ ಕೆ.ಆರ್.ಗಣೇಶ್, ಉಪಾಧ್ಯಕ್ಷ ರಾಮಕೃಷ್ಣ, ಪುನೀತ್, ರಾಮಕೃಷ್ಣ, ಪಾರ್ಶ್ವನಾಥ್ ಹಾಗೂ ಮೂಕಾಂಬಿಕಾ ಸಮೃದ್ದಿ ಬಡಾವಣೆಯ ನಿವಾಸಿಗಳು, ಕ್ರೈಸ್ಟ್ ಕಾಲೇಜು ವ್ಯವಸ್ಥಾಪಕ ಮಂಡಳಿ, ದೈಹಿಕ ಶಿಕ್ಷಕರು, ಪರಿಸರ ಬಳಗ, ಎನ್’ಎಸ್’ಎಸ್ ವಿದ್ಯಾರ್ಥಿಗಳು, ವಿಶ್ವವಿದ್ಯಾಲಯ ಬಡಾವಣೆಯ ನಾಣಯ್ಯ ಹಾಗೂ ನಿವಾಸಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post