ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸುರಕ್ಷತಾ ಸಂಬಂಧಿತ ಕಾಮಗಾರಿಗಳ ಹಿನ್ನೆಲೆಯಲ್ಲಿ ಹಾಸನ ಯಾರ್ಡ್‌ನಲ್ಲಿ ಹಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.
ಈ ಕುರಿತಂತೆ ನೈರುತ್ಯ ರೈಲ್ವೆ ಮಾಹಿತಿ ನೀಡಿದ್ದು, ತಾತ್ಕಾಲಿಕವಾಗಿ ಬದಲಾದ ರೈಲುಗಳ ಸಂಚಾರದ ಮಾಹಿತಿ ಹೀಗಿದೆ.
16206 ಸಂಖ್ಯೆಯ ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲುಗಳು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ರದ್ದುಗೊಳ್ಳಲಿದೆ.
16225 ಸಂಖ್ಯೆಯ ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಂಡಿದ್ದು, ಈ ರೈಲು ಅರಸೀಕೆರೆ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲಿದೆ.
ಅದೇ ರೀತಿಯಲ್ಲಿ, 56266 ಸಂಖ್ಯೆಯ ಮೈಸೂರು–ಅರಸೀಕೆರೆ ಪ್ಯಾಸೆಂಜರ್ ರೈಲು ಮಾವಿನಕೆರೆ ಮತ್ತು ಅರಸೀಕೆರೆ ನಡುವಿನ ಸೇವೆ ಭಾಗಶಃ ರದ್ದುಗೊಳ್ಳಲಿದ್ದು, 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ಮಾವಿನಕೆರೆ ನಿಲ್ದಾಣದಲ್ಲೇ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ.
16515 ಸಂಖ್ಯೆಯ ಯಶವಂತಪುರ–ಕಾರವಾರ ಎಕ್ಸ್‌ಪ್ರೆಸ್ ರೈಲು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ಬೆಂಗಳೂರು ವಿಭಾಗದಲ್ಲಿ ಸುಮಾರು 65 ನಿಮಿಷಗಳ ವಿಳಂಬದೊಂದಿಗೆ ಸಂಚರಿಸಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















