ಕಲ್ಪ ಮೀಡಿಯಾ ಹೌಸ್ | ಸಾಗರ |
ಸೂಕ್ತ ದಾಖಲೆಗಳಿಲ್ಲದೇ ಟ್ರಕ್’ನಲ್ಲಿ ಸಾಗಿಸಲಾಗುತ್ತಿದ್ದ 46 ದ್ವಿಚಕ್ರ ವಾಹನಗಳನ್ನು ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಸೀಜ್ ಮಾಡಲಾಗಿದೆ.
ಗ್ರಾಮಾಂತರ ಠಾಣಾ ವ್ಯಾಪ್ತಿಯ ಚೆಕ್ ಪೋಸ್ಟ್’ನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಬಂದ ಟ್ರಕ್’ನ್ನು ಪರಿಶೀಲಿಸಲಾಗಿದೆ. ಇದರಲ್ಲಿ ಸುಮಾರು 33,78,336 ರೂ. ಮೌಲ್ಯದ 46 ದ್ವಿಚಕ್ರ ವಾಹನಗಳನ್ನು ಸಾಗಿಸಲಾಗುತ್ತಿತ್ತು. ಆದರೆ, ಟ್ರಕ್’ನಲ್ಲಿದ್ದ ವ್ಯಕ್ತಿಗಳ ಬಳಿಯಲ್ಲಿ ಇದಕ್ಕೆ ಸೂಕ್ತ ದಾಖಲೆಗಳು ಇರಲಿಲ್ಲ. ಹೀಗಾಗಿ, ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post